ಕೋಲಾರ | ಪೌರಕಾರ್ಮಿಕರ ಸಮಸ್ಯೆ; ಸಿಎಂ ಜತೆ ಚರ್ಚಿಸಲಾಗುವುದು : ಶಾಸಕ ಕೊತ್ತೂರು ಮಂಜುನಾಥ್

Date:

ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಭರವಸೆ ನೀಡಿದರು.

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಕೋಲಾರ ಜನತೆಯ ಪೌಷ್ಟಿಕಾಂಶ ಇದ್ದಂತೆ. ಅವರು ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತ ಎನ್ನದೇ ಎಲ್ಲರ ಮನೆಯ ಮುಂದೆ ಸ್ವಚ್ಚತೆ ಮಾಡಿ, ನಮ್ಮ ಆರೋಗ್ಯ ಕಾಪಾಡುತ್ತಿದ್ದಾರೆ. ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೌರಕಾರ್ಮಿಕರ ಒಳಿತಿಗಾಗಿ ಸದಾ ಶ್ರಮಿಸಲು ನಾನು ಸಿದ್ಧ. ಪೌರಕಾರ್ಮಿಕರಿಗೆ ನಿವೇಶನ ಮತ್ತು ಗೃಹ ನಿರ್ಮಾಣಕ್ಕೆ ನಾವು ಸಿದ್ದರಿದ್ದೇವೆ. ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಎರಡು ತಿಂಗಳಿಗೊಮ್ಮೆ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಭೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಪೌರಕಾರ್ಮಿಕರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ದೇನೆ. ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡಲು ಒತ್ತಾಯಿಸಿದ್ದೇನೆ. ಖಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳು ತಲುಪದ ಕುರಿತು ಸ್ಪಷ್ಟತೆಯಿಲ್ಲ. ಇಂದಿಗೂ ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಮಲಹೊರುವ ಪದ್ದತಿ ಇದೆ. ಪೌರಕಾರ್ಮಿಕರೇ ಆ ಕೆಲಸ ಮಾಡುತ್ತಿರುವುದು ಅಮಾನವೀಯ ಎನಿಸುತ್ತದೆ ಎಂದು ವಿಷಾದಿಸಿದರು.

ಕೋಲಾರ 9

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ, ಪೌರ ಕಾರ್ಮಿಕರು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿರುವ ಯೋಧರು. ಪೌರಕಾರ್ಮಿಕರಿಗೆ ಸೇರಬೇಕಾದ ಸೌಲಭ್ಯಗಳನ್ನು ಅತಿ ಶೀಘ್ರದಲ್ಲೇ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಸಭೆಯಿಂದ ಹೊರವಲಯದ ಬಾರಂಡಹಳ್ಳಿ ಸಮೀಪ ನಿವೇಶನ ನೀಡಿ ಮನೆ ಕಟ್ಟಿಸಿಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮನೆಗಳ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ. ಅವರಿಗೆ ಅದು ತಲುಪುವ ತನಕ ವೇದಿಕೆ ಏರುವುದಿಲ್ಲ ಎಂದು ಪ್ರತಿರೋಧ ತೋರುವ ಮೂಲಕ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಪೌರಕಾರ್ಮಿಕರು ನಗರದ ಬಂಗಾರಪೇಟೆ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ, ಗಾಂಧಿವನದ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂ.ಜಿ. ರಸ್ತೆ ಮೂಲಕ ರಂಗಮಂದಿರವರೆಗೆ ಮೆರವಣಿಗೆ ನಡೆಸಿದರು. ಕಾರ್ಮಿಕರು ಹಾಗೂ ನಗರಸಭೆ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕುಣಿದು ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ. ಪೌರಾಯುಕ್ತೆ ಅಂಬಿಕಾ, ಸದಸ್ಯರಾದ ರಾಕೇಶ್, ಅಂಬರೀಷ್, ಮುರಳಿಗೌಡ, ಸುರೇಶ್ ಬಾಬು, ಗುಣಶೇಖರ್, ಅಫ್ಸರ್, .ಪ್ರವೀಣ್ ಗೌಡ,ಶಾಮಾ ತಾಜ್, ಮಂಜುನಾಥ್, ಶಾಹಿನ್ ತಾಜ್, ಭಾಗ್ಯಮ್ಮ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವ್ಯೆ. ಶಿವಕುಮಾರ್, ಮಾಲೂರು ಪುರಸಭೆ ಅಧ್ಯಕ್ಷೆ ಕೋಮಲ, ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮುಂತಾದವರು ಭಾಗವಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...