ಕೋಲಾರ | ಓಂ ಶಕ್ತಿಗೆ ತೆರಳಿದ್ದ ಬಸ್‌ ಅಪಘಾತ; ಐವರ ದುರ್ಮರಣ

Date:

ಕೋಲಾರದಿಂದ ಓಂ ಶಕ್ತಿಗೆ ತೆರಳಿದ್ದ ‘ಓ ಶಕ್ತಿ ಮಾಲಾಧಾರಿ’ಗಳಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವೆ ಭೀಕರ ಅಪಘಾತಕ್ಕೀಡಾಗಿದ್ದ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ.

ಮೃತರನ್ನು ಕೋಲಾರದ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ನಿವಾಸಿಗಳಾದ ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ರೈತ ಕೃಷ್ಣಪ್ಪ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ನಲ್ಲೂರು ಗ್ರಾಮದ ಸ್ವರಸ್ವತಿ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೋಲಾರದ ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ ಸುಮಾರು 50 ಮಂದಿ ಓಂ ಶಕ್ತಿ ಮಾಲಾಧಾರಿಗಳು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ತೆರಳಿದ್ದರು. ಪೂಜೆ ಮುಗಿಸಿ ತಮ್ಮೂರಿಗೆ ವಾಪಸ್‌ ಆಗುತ್ತಿದ್ದರು. ತರಕಾರಿ ತುಂಬಿದ ಕ್ಯಾಂಟರ್‌ ಸೀಗೆಹಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ ವೇಳೆ, ರಾಣಿಪೇಟೆ ಬಳಿ ಬಸ್‌ ಮತ್ತು ಕ್ಯಾಂಟರ್‌ ನಡುವೆ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ನಲ್ಲಿದ್ದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅವರನ್ನು ವೇಲೂರಿನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಣಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...