ಕೋಲಾರ | ಜೀವನದಿ ಪಾಲಾರ್‌ಗಾಗಿ ನಮ್ಮ ಹೆಜ್ಜೆ’ ಜಾಗೃತಿ ಜಾಥಾ

Date:

ಅವಿಭಜಿತ ಕೋಲಾರದಲ್ಲಿ 4 ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ, ಒತ್ತುವರಿಗಳಿಂದ ಕೆರೆಗಳು ಕಡಿಮೆಯಾಗುತ್ತಿವೆ. ತುಂಬಿ ಕೋಡಿ ಹರಿದು ಸಂಭ್ರಮ ನೀಡುತ್ತಿದ್ದ ನೂರಾರು ಕೆರೆಗಳಿಗೆ ಜೀವ ತುಂಬುತ್ತಿದ್ದ ಪಾಲಾರ್ ನದಿ ಬತ್ತಿ ಹೋಗಿದೆ ಎಂದು ಸಂವಾದ ಯುವಜನ ಸಂಸ್ಥೆಯ ಮಂಜುನಾಥ್ ಜಿ.ಕೆ. ಹೇಳಿದರು.

ಕೋಲಾರದ ರಾಮಸಾಗರದಲ್ಲಿ ಯುವ ಮುನ್ನಡೆ ಮತ್ತು ಸಂವಾದ ತಂಡ ಆಯೋಜಿಸಿದ್ದ ‘ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ – ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಪಾಲಾರ್ ನದಿ ಕೋಲಾರದಲ್ಲಿದೆ ಎಂಬ ವಿಷಯವೇ ಹಲವರಿಗೆ ತಿಳಿದಿಲ್ಲ. ಆದ್ದರಿಂದಲೇ ನೀರು ಪೂರೈಕೆಯ ಹೆಸರಿನಲ್ಲಿ ಬೆಂಗಳೂರಿನ ಕೈಗಾರಿಕಾ ತ್ಯಾಜ್ಯ, ಕೊಳಚೆ ನೀರು, ಘನ ತ್ಯಾಜ್ಯ ಕೋಲಾರ ಜಿಲ್ಲೆಗೆ ಹರಿಯುತ್ತಿದ್ದು, ಅನಾಹುತಗಳನ್ನು ಸೃಷ್ಠಿಸುತ್ತಿವೆ. ಬೆಂಗಳೂರಿನಿಂದ ಬರುವ ಕೆಸಿ ವ್ಯಾಲಿ ನೀರು ಜಿಲ್ಲೆಯ ಜಲ ಮೂಲಗಳನ್ನೇ ಹಾಳುಗೆಡವಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೇತಮಂಗಲದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಅರಿವು ಶಿವಪ್ಪ, “ದಶಕಗಳ ಹಿಂದೆ ತುಂಬಿ ಹರಿಯುತ್ತಿದ್ದ ಕೋಲಾರದ ಕೆರೆಗಳ ಸಮೀಪ ಸ್ನಾನಘಟ್ಟಗಳು ಇದ್ದವು. ಹಲವರ ಬದುಕಿಗೆ ಜೀವಾಳವಾಗಿದ್ದವು. ಹಿಂದೆ ವಿಶಾಲವಾಗಿ ಹರಿದು ನದಿಯಂತೆ ಕಾಣುತ್ತಿದ್ದ ಪಾಲಾರ್ , ಇಂದು ಕಾಲುವೆಯಂತಾಗಿದೆ. ಇದರ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕೆಲವೇ ವರ್ಷಗಳಲ್ಲಿ ಸಂಪೂರ್ಣ ನಶಿಸಿಹೋಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಗಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭೂಪತಿಗೌಡ ಅವರು ಮಾತನಾಡಿ, “ಪಾಲಾರ್ ಹಿಂದೆ ತುಂಬಿ ಹರಿಯುತ್ತಿತ್ತು. ಆದರೆ ಈಗ ಪಾಲಾರ್ ಅಂದರೆ ಕೊಳಚೆ ನೀರಿನ ಕಾಲುವೆ ಎಂಬ ಪರಿಸ್ಥಿತಿ ಎದುರಾಗಿದೆ. ಈ ಸ್ಥಿತಿ ಬದಲಾಯಿಸಲು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೂ ಅರಿವು ನೀಡುತ್ತಿದ್ದೇವೆ” ಎಂದು ಹೇಳಿದರು.

ಪಾಲಾರ್

ಜಾಥಾದಲ್ಲಿ ರಾಮಸಾಗರದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ನಟರಾಜ್, ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ ಮುಖ್ಯ ಶಿಕ್ಷಕಿ ನುಸ್ರತ್ ಜಹಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಪ್ಪ ವಿ., ಮಾಜಿ ಅಧ್ಯಕ್ಷ ಹೇಮರೆಡ್ಡಿ, ಈನೆಲ ಈಜಲ ಸಾಂಸ್ಕೃತಿಕ ಸಂಸ್ಥೆಯ ವೆಂಕಟಾ ಚಲಪತಿ ಭಾಗವಹಿಸಿದ್ದರು.

ಹಲವಾರು ವಿದ್ಯಾರ್ಥಿಗಳು, ಯುವಜನರು ತಂಬಳ್ಳಿ, ಮಣಿಘಟ್ಟ, ಎಸ್ ಅಗ್ರಹಾರದಲ್ಲಿ ಹಾಡು, ನಾಟಕದ ಮೂಲಕ ಅರಿವು ಮೂಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...