ಕೋಲಾರ | ಗ್ರಾಪಂ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಪಂ ಮುಂದೆ ಪ್ರತಿಭಟನೆ

Date:

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ನೌಕರರು ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, “ಗ್ರಾಮ ಪಂಚಾಯಿತಿ ನೌಕರರಿಗೆ 36,000 ಕನಿಷ್ಠ ವೇತನ, ಪಿಂಚಣಿ ಕನಿಷ್ಠ 6,000ಕ್ಕೆ ನಿಗದಿಪಡಿಸುವುದು, ಎಲ್ಲ ಗ್ರಾಮ ಪಂಚಾಯಿತಿಗಳಿಗೆ ದ್ವಿತೀಯ ದರ್ಜೆ ಗುಮಾಸ್ತರ ನೇಮಕ, ಹಳೆ ಪಿಂಚಣಿ ಯೋಜನೆ ಜಾರಿ, ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸುವುದು ಸೇರಿದಂತೆ ಎಲ್ಲಾ ಬೇಡಿಕೆಗಳ ಈಡೇರಿಸಬೇಕು. ಗ್ರಾಮ ಪಂಚಾಯಿತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್‌ ಹುದ್ದೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಈಗಾಗಲೇ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರ ಕಂಪ್ಯೂಟರ್‌ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು. ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ನಿಗದಿಗೊಳಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 07 28 at 8.02.20 PM 1

“ಗ್ರಾಮ ಪಂಚಾಯಿತಿಗಳಲ್ಲಿ ಲೆಕ್ಕ ಸಹಾಯಕ ಹುದ್ದೆ ಸ್ಥಾಪಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಲ್ಲಾ ನೌಕರರಿಗೆ ಕೋವಿಡ್ ಪರಿಹಾರ ನಿಧಿ, ಬಾಕಿ ವೇತನ, ಅನುಕಂಪ ಆಧಾರಿತ ಕೆಲಸ, ತೆರಿಗೆ ಸಂಗ್ರಹ ಗುರಿ ಉಪಧನ ಕೊಡಿಸಲು ಜಿಲ್ಲಾ ಪಂಚಾಯಿತಿ ಕ್ರಮವಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಮುಖಂಡರಾದ ಅಮರನಾರಾಯಣ ಕೇಶವರಾವ್, ರಾಮಕೃಷ್ಣಪ್ಪ, ಮೋಹನ್, ಚಂದ್ರಪ್ಪ ವೆಂಕಟರಾಮೇಗೌಡ, ನಾಗೇಶ್, ರೆಡ್ಡೆಪ್ಪ, ಶಿವ, ರಾಮಚಂದ್ರಪ್ಪ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...