ಕೋಲಾರ | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ನಿಖರ ಮಾಹಿತಿ ನೀಡಿ: ಇಒ ವೆಂಕಟೇಶಪ್ಪ

Date:

ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಸಾರ್ವಜನಿಕರಿಗೆ ಕೋಲಾರ ಜಿಲ್ಲೆಯ ಕೆಜಿಎಫ್‌ನ ಇಒ ವೆಂಕಟೇಶಪ್ಪ ಹೇಳಿದರು.

ಪಟ್ಟಣದ ಬಳಿಯ ಘಟ್ಟಕಾಮದೇನಹಳ್ಳಿ ಗ್ರಾಮ ಪಂಚಾಯತಿಯ ಕೃಷ್ಣಾಪುರ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಮೀಕ್ಷೆ ಕಾರ್ಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಸಮೀಕ್ಷಾ ಕಾರ್ಯಕ್ಕೆ ತಾಲೂಕಿನ ಶಾಲೆಯ ಶಿಕ್ಷಕರು ಮತ್ತು ಸರ್ಕಾರಿ ನೌಕರರನ್ನು ನಿಯೋಜಿಸಲಾಗಿದ್ದು, ಕಾಲಮಿತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದೆ. ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸರ್ಕಾರ ಸುಮಾರು 60 ಪ್ರಶ್ನೆಗಳನ್ನು ನಿಗದಿಗೊಳಿಸಿದ್ದು ಸಮೀಕ್ಷೆಗಾಗಿ ಬರುವ ಸರ್ಕಾರಿ ನೌಕರರು ಸರ್ಕಾರ ಬಿಡುಗಡೆಗೊಳಿಸಿರುವ ಮೊಬೈಲ್ ಆಪ್ ಬಳಸಿ ಪ್ರತಿ ಕುಟುಂಬದ ಮಾಹಿತಿಯನ್ನು ಕಲೆ ಹಾಕಲಿದ್ದಾರೆ” ಎಂದರು.

“60 ಪ್ರಶ್ನೆಗಳಿಗೆ ಉತ್ತರಿಸಲು ಸುಮಾರು 40 ನಿಮಿಷಗಳ ಕಾಲಾವಕಾಶ ಬೇಕಾಗಿದ್ದು, ತಾಲೂಕಿನಾದ್ಯಂತ ಸಾಧ್ಯವಾದಷ್ಟು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಸಾರ್ವಜನಿಕರು ಸಮರ್ಪಕವಾಗಿ ಮಾಹಿತಿ ನೀಡಿ ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ದಸಂಸ ತಾಲೂಕು ಪದಾಧಿಕಾರಿಗಳ ಆಯ್ಕೆ

ಈ ಸಂದರ್ಭದಲ್ಲಿ ಪಿಡಿಒ ಕೇಶವ ರೆಡ್ಡಿ, ಗ್ರಾಮ ಪಂಚಾಯತಿ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...