ಕೋಲಾರ | ಮಳೆಯಿಂದ ತುಂಬಿದ ರಸ್ತೆಗಳು; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

Date:

ಕೋಲಾರ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಲವು ವಾರ್ಡ್‌ಗಳಲ್ಲಿ ಅವ್ಯವಸ್ಥೆ ನೆಲೆಸಿರುವುದಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ.

ನಗರದಲ್ಲಿ ಉಕ್ಕಿ ಹರಿಯುತ್ತಿರುವ ಚೇಂಬರ್‌ ಹಾಗೂ ಒಳಚರಂಡಿ ಅವ್ಯವಸ್ಥೆ, ಅಲ್ಲಲ್ಲಿ ನಿಂತಿರುವ ಕೊಳಚೆ ನೀರು ಕಂಡು ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು  ಹರಿಹಾಯ್ದಿದ್ದಾರೆ.

“ನಗರದ 35 ವಾರ್ಡ್‍ಗಳಲ್ಲಿ ಜನಸಾಂದ್ರತೆ ಹೆಚ್ಚಿದ್ದು, ಸ್ವಚ್ಛತೆ ವಿಚಾರದಲ್ಲಿ ಪೌರಾಯುಕ್ತರು ಮತ್ತು ಆರೋಗ್ಯ ನಿರೀಕ್ಷಕರ ನಿರ್ಲಕ್ಷ್ಯ ಹೆಚ್ಚಿದೆ. ಪೌರಕಾರ್ಮಿಕರು, ಚಾಲಕರು ಹಾಗೂ ವಾಹನಗಳ ಕೊರತೆ ಇದೆ. ನಗರದ ಮುಖ್ಯ ರಸ್ತೆಗಳಲ್ಲಿ ಕಸದ ರಾಶಿ ಬಿದ್ದಿರುತ್ತದೆ. ಮನೆ-ಮನೆ ಕಸದ ಸಂಗ್ರಹಣೆ ಸರಿಯಾಗಿ ನಡೆಯುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೌರಕಾರ್ಮಿಕರ ಕೊರತೆಯಿಂದ ಸಾರ್ವಜನಿಕರು ರಸ್ತೆಗೆ ಕಸ ಎಸೆಯುವಂತಾಗಿದೆ. ವಾಣಿಜ್ಯ ಮಳಿಗೆಗಳ ಕಸ ರಸ್ತೆ ಕಾಣುತ್ತಿದೆ. ಕಸ ವಿಲೇವಾರಿ ಮಾಡದೆ ಇರುವುದರಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ರಹಮತ್ ನಗರದಲ್ಲಿ ಹೆಚ್ಚು ಕಸದ ರಾಶಿ ಇರುವುದರಿಂದ ಬೀದಿನಾಯಿಗಳ ಸಂಖ್ಯೆ ಹೆಚ್ಚಿದ್ದು, ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಹುತೇಕ ದಿನಗಳಿಂದ ನಗರದ ಕೀಲುಕೋಟೆ ವಾರ್ಡ್‍ನ ಪುನೀತ್‍ ರಾಜ್‍ಕುಮಾರ್ ವೃತ್ತದ ರಸ್ತೆಯಲ್ಲಿ ಯುಜಿಡಿ ತ್ಯಾಜ್ಯ ರಸ್ತೆಯಲ್ಲಿ ಹರಿಯುತ್ತಿದೆ. ಇದೇ ಕೀಲುಕೋಟೆಯಲ್ಲಿ ವಾಸವಿರುವ ಆರೋಗ್ಯ ನಿರೀಕ್ಷಕ ಮೊಹಮ್ಮದ್ ನವಾಜ್ ಈ ಸಮಸ್ಯೆ ಕಂಡರೂ ಸುಮ್ಮನಿದ್ದಾರೆ. ಯುಜಿಡಿ ಬ್ಲಾಕ್ ಆಗಿದೆ. ಕೀಲುಕೋಟೆಯ ರೈಲ್ವೆ ಸೇತುವೆ ಕೆಳಗೆ ತ್ಯಾಜ್ಯ ನೀರು ಹರಿಯುತ್ತಿದ್ದು, ಸಾರ್ವಜನಿಕರಿಗೆ ಓಡಾಡಲು ಕಷ್ಟವಾಗಿದೆ. ಮಳೆ ಬಂದರೆ ಈ ಭಾಗದಲ್ಲಿ ಈಜುಕೊಳದಂತಾಗುತ್ತದೆ” ಎಂದರು.

“ಅಧಿಕಾರಿಗಳು ಸಾರ್ವಜನಿಕರ ಮೊಬೈಲ್ ಕರೆ ಸ್ವೀಕರಿಸುವುದಿಲ್ಲ. ಈ ಕೂಡಲೇ ನಗರಸಭೆಯ ಎಲ್ಲ ವಾರ್ಡ್‍ಗಳಲ್ಲಿ ಕಸದ ನಿರ್ವಹಣೆ, ಯುಜಿಡಿ ಸಮಸ್ಯೆಗಳನ್ನು ಬಗೆಹರಿಸಬೇಕು‌. ಇಲ್ಲದಿದ್ದಲ್ಲಿ ಮಾನವ ಹಕ್ಕುಗಳ ಜಾಗೃತಿ ದಳದಿಂದ ಮುತ್ತುಸ್ವಾಮಿ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳ ಮೇಲೆ ದೂರು ನೀಡಲಾಗುವುದು” ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...