ಕೋಲಾರ | ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆ ಶಾಲೆ ಕಾಲೇಜುಗಳಿಗೆ ರಜೆ; ಬೆಂಗಳೂರು ಉತ್ತರ ವಿವಿಯಲ್ಲಿ ಪರೀಕ್ಷೆ!

Date:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರವು ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ.

ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರಿನ ಕೆ ಆರ್‌ ಪುರ ಬಳಿಯ ಎರಡು ಕಾಲೇಜುಗಳಲ್ಲಿ ಸ್ನಾತಕ ಪದವಿ(ಯುಜಿ)ಯ ಬಿಬಿಎ ಕೋರ್ಸ್‌ನ ಪ್ರವಾಸೋದ್ಯಮ ಹಾಗೂ ಹೋಟೆಲ್‌ ಮ್ಯಾನೇಜ್‌ಮೆಂಟ್‌ಗೆ ಸಂಬಂಧಿಸಿದ ವಿಷಯಗಳ ಪರೀಕ್ಷೆ ನಡೆಸಲಾಗಿದೆ.

ಮನಮೋಹನ್ ಸಿಂಗ್‌ ನಿಧನದ ಗೌರವಾರ್ಥ ಸರ್ಕಾರಿ ರಜೆ ಇದ್ದರೂ ಪರೀಕ್ಷೆ ನಡೆಸಿದ್ದು, ಅಗೌರವ ತೋರಲಾಗಿದೆ ಎಂದು ಕೆಲ ಪೋಷಕರು ಹಾಗೂ ಉಪನ್ಯಾಸಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪ್ರೊ. ಕೆ ತಿಪ್ಪೇಸ್ವಾಮಿ, “ಪ್ರಶ್ನೆ ಪತ್ರಿಕೆಯನ್ನು ಗುರುವಾರವೇ ಯುಯುಸಿಎಂಎಸ್‌ ಆನ್‌ಲೈನ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಿಯೂ ಆಗಿತ್ತು. ಹೀಗಾಗಿ, ಶುಕ್ರವಾರ ಪರೀಕ್ಷೆ ನಡೆಸಲೇಬೇಕಾದ ಅನಿವಾರ್ಯ ಸೃಷ್ಟಿಯಾಯಿತು. ಎರಡು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸುಮಾರು 40 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಲೇಖನಿಯನ್ನು ಪರಿಣಾಮಕಾರಿಯಾಗಿ ಬಳಸಿ ದೇಶ ಮುನ್ನಡೆಸಿದ ಡಾ.ಸಿಂಗ್: ಮಾಜಿ ಶಾಸಕ ಕೆ ಎಸ್ ಕಿರಣಕುಮಾರ್

ಬೇರೆ ವಿವಿಗಳಲ್ಲಿ ಮುಂದೂಡಿಕೆ: “ಶುಕ್ರವಾರ(ಡಿ.27)ದಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಮುಂದಕ್ಕೆ ಹಾಕಿವೆ. ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಈ ಸಂಬಂಧ ವೆಬ್‌ಸೈಟ್‌ನಲ್ಲೂ ಪ್ರಕಟಣೆ ನೀಡಿದೆ. ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆ ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿಯೂ ಆಯಾಯ ವಿಶ್ವವಿದ್ಯಾಲಯಗಳ ಕುಲಸಚಿವರು ತಿಳಿಸಿದ್ದಾರೆ” ಎಂದು ಉಪನ್ಯಾಸಕರೊಬ್ಬರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...