ಕೋಲಾರ ಜಿಲ್ಲೆಯ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಹಿರಿಯ ಮುಖಂಡರೂ ಆದ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಸಚಿವ ಕೆ. ಹೆಚ್ ಮುನಿಯಪ್ಪ ಆಪ್ತರಾದ ಮೊಹಮ್ಮದ್ ಇಕ್ಬಾಲ್ ನಿಧನರಾಗಿದ್ದಾರೆ.
ಸುಮಾರು 40 ಕ್ಕೂ ಹೆಚ್ಚು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತಮ್ಮನ್ನು ತೊಡಿಗಿಸಿಕೊಂಡು ಹಲವಾರು ರೀತಿಯ ಸಮಾಜ ಮುಖಿ ಸೇವೆಯನ್ನು ಮಾಡಿದ್ದಾರೆ. ನಾಲ್ಕು ಬಾರಿ ಕೋಲಾರ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದ 70 ವರ್ಷದ ಮೊಹಮ್ಮದ್ ಇಕ್ಬಾಲ್ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ಮೊಹಮ್ಮದ್ ಇಕ್ಬಾಲ್ ನಿಧನ ಮಾಹಿತಿ ತಿಳಿಯುತ್ತಿದಂತೆ ಅಂತಿಮ ದರ್ಶನ ಪಡೆಯಲು ಕೋಲಾರಕ್ಕೆ ಆಗಮಿಸಿದ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: ಕೋಲಾರ | ತ್ಯಾಜ್ಯ ವಿಲೇವಾರಿ ವೈಫಲ್ಯ; ಅಧಿಕಾರಿಗಳಿಗೆ ಶಾಸಕಿ ರೂಪಕಲಾ ಎಚ್ಚರಿಕೆ!
ಕೋಲಾರ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, ಜಯದೇವ, ಹಿರಿಯ ವಕೀಲರಾದ ಹನಿಫ್, ಪ್ಯಾರೆಜಾನ್, ಮುಂತಾದವರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.





