ಕೋಲಾರ | ʼಅಕ್ಕʼ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೋ.ನಾ.ಸ್ವಾಮಿ ಗಾಯನ

Date:

ಅಮೇರಿಕಾದ ರಿಚ್‌ಮಂಡ್‌ ನಗರದಲ್ಲಿ 3 ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಅಕ್ಕ ಸಮ್ಮೇಳದಲ್ಲಿ ಕೋಲಾರ ಜಿಲ್ಲೆಯವರಾದ ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ ಅವರು ಭಾಗವಹಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕೋಲಾರ ತಾಲೂಕಿನ ಸುಗಟೂರು ಗ್ರಾಮದವರಾದ ಗೋ.ನಾ ಸ್ವಾಮಿ ಅವರು ಅಮೇರಿಕಾದಲ್ಲಿ ಆಯೋಜಿಸಿರುವ 12ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಜಾನಪದ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಗೋ.ನಾ.ಸ್ವಾಮಿ 1
ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ

ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್‌ 1ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಲಾತಂಡಗಳು ಸಮ್ಮೇಳನದಲ್ಲಿ ಭಾಗವಹಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾಗಿ ನಂದಕುಮಾರ್: ಕಾರ್ಯಕರ್ತರಲ್ಲಿ ಸಂಭ್ರಮ

ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್‌ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ, ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ಬಗೆಬಗೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಕ್ಕ ಸಮ್ಮೇಳನದಲ್ಲಿ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು, ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಖ್ಯಾತ ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...