ಮುಳುಬಾಗಿಲು | ಶಿಕ್ಷಕಿ ಕೊಲೆ ಪ್ರಕರಣ : 6 ಜನ ಆರೋಪಿಗಳ ಬಂಧನ

Date:

ಕೋಲಾರದ ಮುಳುಬಾಗಿಲು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ ನಡೆದ ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್‌ 14ರ ಸಂಜೆ ಶಿಕ್ಷಕಿ ಮುಡಿಯನೂರು ಸರಕಾರಿ ಶಾಲೆಯ ಶಿಕ್ಷಕಿ ದಿವ್ಯಾಶ್ರೀ(43) ಎಂಬುವರನ್ನು ಮುಳುಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಅವರ ಮನೆಯಲ್ಲಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.

ಆಂದ್ರಪ್ರದೇಶದ ತಿರುಪತಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಪ್ರತ್ರಹಳ್ಳಿಯ ಭುವನ್‌, ಮುಳುಬಾಗಿಲು ನಿವಾಸಿ ರಂಜಿತ್‌, ನಂಗಲಿ ಗ್ರಾಮದ ಶಹೀದ್‌, ಮಲ್ಲೇಕುಪ್ಪ ಗ್ರಾಮದ ರಾಹುಲ್‌ ಹಾಗೂ ಯಶವಂತ್‌, ಗುಮ್ಮಕಲ್‌ ಗ್ರಾಮದ ಭರತ್‌ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳಲ್ಲಿ ಅಪ್ರಾಪ್ತ ವಯಸ್ಕರೂ ಇದ್ದು, ಮಾದಕ ದ್ರವ್ಯ ವ್ಯಸನಿಗಳಾದ ಇವರು ಚಿಲ್ಲರೆ ಕಾಸಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ದಿವ್ಯಶ್ರೀ ಅವರ ಪತಿ ಫೈನಾನ್ಸ್‌ ವ್ಯವಹಾರ ಮಾಡಿಕೊಂಡಿದ್ದು, ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂದು ಶಂಕಿಸಲಾಗಿದೆ. ಸುಪಾರಿ ಹಂತಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣದ ಹಿನ್ನೆಲೆ : ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ಶಿಕ್ಷಕಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದರು. ಪತಿ ಪದ್ಮನಾಭ ಶೆಟ್ಟಿ ಅಗರಬತ್ತಿ ವ್ಯಾಪಾರ ಮತ್ತು ಫೈನಾನ್ಸ್‌ ವ್ಯವಹಾರ ನಡೆಸುತ್ತಿದ್ದಾರೆ. ಆ.14ರಂದ ಪತಿ ಹೊರಗಡೆ ಹೋಗಿದ್ದರು. ಮಗಳು ನಿಶಾ ಮತ್ತು ದಿವ್ಯಶ್ರೀ ಮಾತ್ರ ಮನೆಯಲ್ಲಿದ್ದರು. ಮಗಳು ನಿಶಾ ಮೇಲಿನ ಕೋಣೆಯಲ್ಲಿ ಓದುತ್ತಿದ್ದರು. ತಾಯಿ ದಿವ್ಯಾಶ್ರೀ ಕೆಳಗಡೆ ಟಿ.ವಿ ನೋಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ದಿವ್ಯಾಶ್ರೀ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಕೆಳಗಡೆ ಶಬ್ಧ ಆಗಿದ್ದನ್ನು ಕೇಳಿಸಿಕೊಂಡ ನಿಶಾ ಕೆಳಗೆ ಬಂದು ನೋಡಿದಾಗ ತಾಯಿ ಕೊಲೆಯಾಗಿರುವುದನ್ನು ಕಂಡು ಚೀರಿದ್ದಾರೆ. ಪಕ್ಕದ ಮನೆಯವರ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಾಗಲೇ ದಿವ್ಯಾಶ್ರೀ ಮೃತಪಟ್ಟಿದ್ದರು. ಶಿಕ್ಷಕಿ ಕೊಲೆ ಪ್ರಕರಣ ಬಡಾವಣೆಯ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...