ಕೋಲಾರ | ದೇವಾಲಯಗಳಲ್ಲಿ ಎಲ್ಲ ಜಾತಿ-ಧರ್ಮದವರಿಗೂ ಮುಕ್ತ ಪ್ರವೇಶ

Date:

ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಾಲಯಗಳಲ್ಲಿ ಎಲ್ಲ ಜಾತಿ, ಧರ್ಮದವರಿಗೂ ಮುಕ್ತ ಪ್ರವೇಶ ಕಲ್ಪಿಸುವ ಅಭಿಯಾನ ನಡೆಯುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ 1,351 ದೇವಾಲಯಗಳ ಪೈಕಿ 507 ದೇವಾಲಯಗಳಲ್ಲಿ ‘ಎಲ್ಲರಿಗೂ ಮುಕ್ತ ಪ್ರವೇಶ’ದ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.

ಇಲಾಖೆಯ ಅಧೀನದಲ್ಲಿರುವ ಜಿಲ್ಲೆಯ ‘ಎ’ ಮತ್ತು ‘ಬಿ’ ದರ್ಜೆಯ ಎಲ್ಲ ದೇವಾಲಯಗಳಲ್ಲಿ ಫಲಕ ಅಳವಡಿಸಲಾಗಿದೆ. ಇನ್ನು, ‘ಸಿ’ ದರ್ಜೆಯ 844 ದೇವಾಲಯಗಳಿಗೆ ಫಲಕ ಅಳವಡಿಕೆ ಬಾಕಿ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ರಾಜ್ಯಾದ್ಯಂತ ದಲಿತರು ಮತ್ತು ಇತರ ಪರಿಶಿಷ್ಟ ಜನಾಂಗದವರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕಂದು ಪ್ರತಿಭಟನೆಗಳು ನಡೆಯುತ್ತಿವೆ. ಹಲವೆಡೆ ದಲಿತರು ದೇವಾಲಯ ಪ್ರವೇಶಕ್ಕೆ ಯತ್ನಿಸಿದ್ದು, ಹಲವೆಡೆ ಸಫಲರಾಗಿದ್ದಾರೆ. ಇನ್ನೂ ಹೆಚ್ಚಿನ ಸಂದರ್ಭಗಳಲ್ಲಿ ಪ್ರಬಲ ಜಾತಿಗರು ದಲಿತರ ಮೇಲೆ ದಾಳಿ ಮಾಡಿರುವ ಘಟನೆಗಳು ನಡೆದಿವೆ. ಇತ್ತೀಚೆಗೆ, ಉಳ್ಳೇರಹಳ್ಳಿ ದೇವಲಾಯದಲ್ಲಿ ದಲಿತ ಬಾಲಕ ಗುಜ್ಜಕೋಲು ಮುಟ್ಟಿದ್ದಕ್ಕೆ ಆತನ ಕುಟುಂಬಕ್ಕೆ 60 ರೂ. ದಂಡ ವಿಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಘಟನೆ ಬಳಿಕ ಎಲ್ಲ ಸಮುದಾಯದವರಿಗೆ ದೇವಾಲಯಗಳಲ್ಲಿ ಮುಕ್ತ ಅವಕಾಶ ನೀಡಬೇಕೆಂಬ ಕೂಗು ಹೆಚ್ಚಾಗಿತ್ತು.  ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರ ಧಾರ್ಮಿಕ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಕೆಲಸ ಕೋಲಾರ ಜಿಲ್ಲೆಯಲ್ಲಿ ಆರಂಭವಾಗಿದೆ.

ದೇಗುಲ

ಈ ಹಿಂದೆ, 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಉಪನ್ಯಾಸಕ ಡಾ. ಶಿವಪ್ಪ ಅರಿವು ಅವರ ತಂಡ ಮುಖ್ಯಮಂತ್ರಿಗೆ ಪತ್ರ ಬರೆದು ಎಲ್ಲ ದೇಗುಲಗಳಲ್ಲಿ ‘ಎಲ್ಲರಿಗೂ ಮುಕ್ತ ಪ್ರವೇಶ’ವೆಂಬ ಫಲಕ ಹಾಕಬೇಕೆಂದು ಒತ್ತಾಯಿಸಿತ್ತು. ಅಲ್ಲದೆ, ಮುಳಬಾಗಿಲು ತಾಲೂಕಿನ ಕಾಡೇನಹಳ್ಳಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌ ನಾಗಮೋಹನದಾಸ್‌ ಮತ್ತು ಕೋಲಾರ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸೋಮೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...