ಕೋಲಾರ | ಆ.17ರಂದು ವೇಮಗಲ್‌, ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿ ಎಂ ಆರ್‌ ರವಿ

Date:

ಕೋಲಾರ ಜಿಲ್ಲೆಯ ವೇಮಗಲ್‌ ಮತ್ತು ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣೆ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನೂತನವಾಗಿ ರಚನೆಯಾಗಿರುವ ವೇಮಗಲ್ ಕೂರಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು.

“ಜುಲೈ 29ರ ಮಂಗಳವಾರ ಚುನಾವಣೆ ವೇಳಾಪಟ್ಟಿ ಮತ್ತು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಆಗಸ್ಟ್‌ 05ರ ಮಂಗಳವಾರ ಕೊನೆಯ ದಿನವಾಗಿರುತ್ತದೆ. ಮರುದಿನ ಅಂದರೆ 06ರ ಬುಧವಾರ ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಆಗಸ್ಟ್‌ 8ರ ಶುಕ್ರವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಆಗಸ್ಟ್‌ 17ರ ಭಾನುವಾರ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 20ರ ಬುಧವಾರ ಬೆಳಿಗ್ಗೆ 8ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತದಾನದ ಎಣಿಕೆಯನ್ನು ನಡೆಸಲಾಗುವುದು, 20ರ ಬುಧವಾರಕ್ಕಿಂತ ಮುಂಚೆ ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾಗಿದೆ. ಈ ಅವಧಿಯಲ್ಲಿ ಸದಾಚಾರ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಸರ್ಕಾರಿ ಅಧಿಕಾರಿಗಳು, ನೌಕರರು, ಉಲ್ಲಂಘನೆ ಆಗದಂತೆ ಪಾಲಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೇಮಗಲ್‌ ಕುರುಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 17 ವಾರ್ಡುಗಳಿದ್ದು, ಇಬ್ಬರು ಚುನಾವಣಾಧಿಕಾರಿಗಳು ಮತ್ತು ಇಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಒಟ್ಟು 22 ಮತಗಟ್ಟೆಗಳಿದ್ದು, ಅದರಲ್ಲಿ 6,555 ಪುರುಷ ಮತದಾರರು, 6,939 ಮಹಿಳಾ ಮತದಾರರು ಸೇರಿದಂತೆ ಒಟ್ಟು 13,494 ಮತದಾರರಿದ್ದಾರೆ” ಎಂದು ತಿಳಿಸಿದರು.

“ಪಟ್ಟಣ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಚುನಾವಣಾ ವೆಚ್ಚದ ಗರಿಷ್ಠ ಮಿತಿಯೂ ಸರ್ಕಾರದ ಅಧಿಸೂಚನೆಯಂತೆ 1 ಲಕ್ಷ ರೂಪಾಯಿಯಾಗಿದ್ದು, ಈ ಸಂಬಂಧ ಅಭ್ಯರ್ಥಿಗಳು ಸಲ್ಲಿಸುವ ವೆಚ್ಚ ವಿವರಗಳನ್ನು ಪರಿಶೀಲಿಸಲು ಲೆಕ್ಕಪತ್ರ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ” ಎಂದರು.

“ಮತದಾನಕ್ಕಾಗಿ ರಾಜ್ಯ ಚುನಾವಣಾ ಆಯೋಗದ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಚುನಾವಣೆಗೂ ಕೂಡ ಮತಪತ್ರದಲ್ಲಿ ನೋಟ ಎಂದು ಮುದ್ರಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಹಾಗೂ ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ ಮುದ್ರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ವೇಮಗಲ್ ಕುರುಗಳ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ 2025ಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ದೂರುಗಳನ್ನು. ಸ್ವೀಕರಿಸಲು ಈ ಕಚೇರಿಯ ಕಂಟ್ರೋಲ್ ರೂಂ ದೂ. ಸಂಖ್ಯೆ 08152-243506 ಹಾಗೂ ತಾಲೂಕು ಕಚೇರಿಯ ಕಂಟ್ರೋಲ್ ದೂ. ಸಂಖ್ಯೆ 08152-222056 ಗಳು ಚಾಲನೆಯಲ್ಲಿರುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕರಾವಳಿ ಜಿಲ್ಲೆಗಳ ಕಡಲು ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

“ರಾಜ್ಯ ಚುನಾವಣಾ ಆಯೋಗವು ಹೊರಡಿಸಿರುವ ವೇಳಾಪಟ್ಟಿಯಂತೆ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಸಲು ಎಲ್ಲ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಸಾರ್ವಜನಿಕರು ಸೂಕ್ತ ಸಹಕಾರವನ್ನು ನೀಡಬೇಕು” ಎಂದು ಜಿಲ್ಲಾಧಿಕಾರಿ ಕೋರಿದರು.

ಅಪರ ಜಿಲ್ಲಾಧಿಕಾರಿ ಮಂಗಳ, ಕೋಲಾರ ತಹಶೀಲ್ದಾರ್ ಡಾ. ನಯನ, ಮೀನುಗಾರಿಕೆ ಉಪ ನಿರ್ದೇಶಕ ರಾಜಣ್ಣ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಬೈರೇಗೌಡ, ಸಹಾಯಕ ಕೃಷಿ ನಿರ್ದೇಶಕ ಮುರಳಿ, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ. ಶಿವಾರೆಡ್ಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...