ಕೋಲಾರ | ತ್ಯಾಜ್ಯ ವಿಲೇವಾರಿ ವೈಫಲ್ಯ; ಅಧಿಕಾರಿಗಳಿಗೆ ಶಾಸಕಿ ರೂಪಕಲಾ ಎಚ್ಚರಿಕೆ!

Date:

ಕೋಲಾರ ಜಿಲ್ಲೆಯ ಬೇತಮಂಗಲ ಹೋಬಳಿಯ ಪಾರಂಡಹಳ್ಳಿಯಲ್ಲಿರುವ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಮರ್ಪಕ ಕಸ ವಿಲೇವಾರಿ ಮಾಡದಿರಲು ಅಧಿಕಾರಿಗಳ ಕರ್ತವ್ಯ ನಿರ್ವಹಣೆ ವೈಫಲ್ಯವೇ ಕಾರಣವಾಗಿದ್ದು, ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಪರಿಶೀಲನೆ ನಡೆಸುವ ಮೂಲಕ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಶಾಸಕಿ ರೂಪಕಲಾ ಶಶಿಧರ್ ಹೇಳಿದರು.

ಪಾರಂಡಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಂಟೆ ಹಾಗೂ ಗರುಡರಾಜಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, “40-50 ವರ್ಷಗಳ ಹಿಂದೆ ಯುಜಿಡಿ ಸಂಪರ್ಕ ಇರಲಿಲ್ಲ. ಆದರೆ ಇಂದು ಯುಜಿಡಿ ಯೋಜನೆ ಜಾರಿಯಾಗಿದ್ದರೂ ಅಧಿಕಾರಿಗಳ ಅಸಮರ್ಪಕ ಕರ್ತವ್ಯದಿಂದ ತ್ಯಾಜ್ಯ ವಿಲೇವಾರಿ ಘಟಕದಲ್ಲಿರುವ ಕಸದಿಂದ ಪಾರಂಡಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನರು ಕೆಟ್ಟ ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪ್ರತಿ ಮನೆಗೂ ಸರಿಯಾಗಿ ಯುಜಿಡಿ ಸಂಪರ್ಕ ಕಲ್ಪಿಸುವ ಮೂಲಕ ಕಸದ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು” ಎಂದು ಹೇಳಿದರು.

WhatsApp Image 2025 09 03 at 10.05.45 AM

“ನಗರಸಭೆ ವ್ಯಾಪ್ತಿಯ ಹಲವು ವಾರ್ಡ್‌ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸುವಂತೆ ಮನವಿ ಮಾಡಿದ್ದು ಇದೀಗ ಪ್ರತಿಯೊಂದು ವಾರ್ಡ್‌ನಲ್ಲಿ 2 ರಿಂದ 3 ಘಟಕ ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್

ಸಿಸಿ ರಸ್ತೆ ಅಭಿವೃದ್ಧಿಗಾಗಿ 100 ಕೋಟಿ, ಪಾರಂಡಹಳ್ಳಿ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಸಲುವಾಗಿ 100 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶೇಕಡ 75 ರಷ್ಟು ಕಾಮಗಾರಿ ಪೂರ್ಣ ಗೊಳಿಸಲಾಗಿದೆ. ಉಳಿಕೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು” ಎಂದು ತಿಳಿಸಿದರು.

ಈ ವೇಳೆ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವೆಂಕಟರಾಮರೆಡ್ಡಿ, ಪಾರಂಡಹಳ್ಳಿ ಪಂಚಾಯಿತಿ ಅಧ್ಯಕ್ಷೆ ವಾಣಿ ಶ್ರೀನಿವಾಸ, ಸದಸ್ಯ ಕುಮಾರ್, ಪ್ರಕಾಶ್, ರವೀಂದ್ರ ರೆಡ್ಡಿ, ಬೇತಮಂಗಲ ಪಂಚಾಯಿತಿ ಅಧ್ಯಕ್ಷ ವೀನುಕಾರ್ತಿಕ್, ಎಪಿಎಂಸಿ ಅಧ್ಯಕ್ಷ ವಿಜಯರಾಘವರೆಡ್ಡಿ, ಸದಸ್ಯ ದಶಲಕ್ಷ ರೆಡ್ಡಿ ,‌ ಮಾಜಿ ಅಧ್ಯಕ್ಷ ಸುಬ್ಬರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಗೋಪಿನಾಥ್ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...