ಕೋಲಾರ | ಅವೈಜ್ಞಾನಿಕ ಕಟ್ಟಡ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ತಡೆ

Date:

ಕೋಲಾರ ನಗರದ ಬಾಲಕಿಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ  ಕಾಮಗಾರಿಯಲ್ಲಿ ಲೋಪಗಳಿದ್ದು, ತಾತ್ಕಾಲಿಕವಾಗಿ ತಡೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೂಚಿಸಿದರು.

ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾಲೇಜು ಕಟ್ಟಡ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹5 ಕೋಟಿ ಅನುದಾನ ಬಿಡುಗಡೆಯಾಗಿದೆ. ಯೋಜನಾಬದ್ಧವಾಗಿ ಕಟ್ಟಡ ಕಾಮಗಾರಿ ನಡೆಸಬೇಕು. ಬೇಕಾಬಿಟ್ಟಿ ಕಟ್ಟಡ ಕಾಮಗಾರಿ ನಡೆಸಿದರೆ ಜಾಗದ ಕೊರತೆಯಾಗಲಿದೆ. ಆದ್ದರಿಂದ ತಾತ್ಕಾಲಿಕವಾಗಿ ಕಾಮಗಾರಿಯನ್ನು ನಿಲ್ಲಿಸಿ ಎಂದು ತಾಕೀತು ಮಾಡಿದರು.

ಜಾಗ ಇದೆಯೆಂದು ಬೇಕಾಬಿಟ್ಟಿಯಾಗಿ ಕಟ್ಟಡ ನಿರ್ಮಿಸಿದರೆ ಮುಂದೆ ವಿದ್ಯಾರ್ಥಿಗಳು ಒಡಾಡುವುದಕ್ಕೂ ಜಾಗ ಇರುವುದಿಲ್ಲ. ಪ್ರಾಂಶುಪಾಲರು ಇದರ ಜವಾಬ್ದಾರಿವಹಿಸಿಕೊಳ್ಳಬೇಕು. ಚಿಕ್ಕ ಗಾತ್ರದ ಕಬ್ಬಿಣ ಬಳಸಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಹೇಗೆ ಸಾಧ್ಯ. ಪ್ರಸ್ತುತ ಕಾಮಗಾರಿ ಸ್ಥಗಿತಗೊಳಿಸಿ, ಪ್ಲಾನ್‌ ಕೊಟ್ಟ ನಂತರ ಕಾಮಗಾರಿ ಆರಂಭಿಸಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕರ ಕಾಲೇಜಿನಲ್ಲೂ ಕಳಪೆ ಕಾಮಗಾರಿಯಾಗಿದೆಯೆಂದು ವರದಿಯಾಗಿದೆ. ಕೂಡಲೇ ಎನ್.ಡಿ.ಟಿಯಿಂದ ಪರಿಶೀಲನೆ ನಡೆಸಿ ಗುತ್ತಿಗೆದಾರರು, ಏಜೆನ್ಸಿ ಕುರಿತು ವರದಿ ನೀಡಿ ಎಂದು ಸೂಚಿಸಿದರು.

ಇದೇ ವೇಳೆ ಶೌಚಾಲಯ, ಕುಡಿಯವ ನೀರು, ಸಾರಿಗೆ ಬಸ್‌ ಸಮಸ್ಯೆ ಬಗೆಹರಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಸಚಿವರಲ್ಲಿ ಮನವಿ ಮಾಡಿದರು. ವಿದ್ಯಾರ್ಥಿಗಳ ಅಹವಾಲು ಆಲಿಸಿದ ಸಚಿವರು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಮತ್ತು ಕೆ.ಎಸ್.ಆರ್.ಟಿ.ಸಿ ಡಿಸಿಗೆ ಸೂಚಿಸಿದರು.

ಶಾಸಕ ಕೊತ್ತೂರು ಮಂಜುನಾಥ್‌ ಮಾತನಾಡಿ, ನನ್ನ ಸ್ವಂತ ಹಣದಲ್ಲಿ ಕೊಳವೆ ಬಾವಿ ಕೊರೆಸಿ, ನೀರಿನ ವ್ಯವಸ್ಥೆ ಮಾಡಿಸಿದ್ದೇನೆ. ಸರಿಯಾಗಿ ಬಳಸಿಕೊಂಡಿಲ್ಲ ಎಂದು ಕಾಲೇಜು ಆಡಳಿತ ಸಿಬ್ಬಂದಿ ವಿರುದ್ಧ ಗರಂ ಆದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಅಕ್ಕ ವಿಶ್ವ ಕನ್ನಡ ಸಮ್ಮೇಳನ; ಕಲಾವಿದ ಗೋ.ನಾ.ಸ್ವಾಮಿಗೆ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ

ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯೆ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...