ಕೋಲಾರ | ಅಜ್ಜಪ್ಪನಹಳ್ಳಿ ಡೇರಿ ಚುನಾವಣೆ: ಅಧ್ಯಕ್ಷನಾಗಿ ಕಾಂಗ್ರೆಸ್ ಬೆಂಬಲಿತ, ಉಪಾಧ್ಯಕ್ಷನಾಗಿ ಬಿಜೆಪಿ ಬೆಂಬಲಿತ ಆಯ್ಕೆ

Date:

ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ಅಜ್ಜಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ–ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುನಿಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬಾಹ್ಯ ಬೆಂಬಲದೊಂದಿಗೆ ಕಾಂತರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಮಾತ್ರವೇ ಎರಡೂ ಸ್ಥಾನಗಳಿಗೆ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧ ಆಯ್ಕೆ ಸುಗಮವಾಯಿತು. ಚುನಾವಣಾಧಿಕಾರಿ ಇಬ್ಬರು ಅವಿರೋಧವಾಗಿ ಆಯ್ಕೆಯಾದವರನ್ನು ಘೋಷಿಸಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸೀಸಂದ್ರ ಗೋಪಾಲಗೌಡ, “ಎಲ್ಲಿ ಹಾಲು ಉತ್ಪಾದಕರ ಸಹಕಾರವಿತ್ತದೆಯೋ ಅಲ್ಲಿ ಮಾತ್ರ ಸಂಘ ಮತ್ತು ಹಾಲು ಉತ್ಪಾದಕರು ಆರ್ಥಿಕವಾಗಿ ಪ್ರಗತಿ ಕಾಣಲು ಸಾಧ್ಯ. ಹಾಲು ಉತ್ಪಾದಕರಿಗೆ ಮತ್ತಷ್ಟು ಸಾಲ ‌ಸೌಲಭ್ಯ ಕಲ್ಪಿಸಿ ಹೈನುಗಾರಿಕೆ ನಂಬಿರುವವರಿಗೆ ನೆರವಾಗಿ ನಿಲ್ಲಲು ನೂತನ ಆಡಳಿತ ಮಂಡಳಿ ಮುಂದಾಗಲಿ. ಜೊತೆಗೆ ರಾಸುಗಳಿಗೆ ವಿಮೆ, ಹಾಲು ಉತ್ಪಾದಕರಿಗೆ ಆರೋಗ್ಯ ವಿಮೆ, ಸಕಾಲದಲ್ಲಿ ಬೋನಸ್ ವಿತರಣೆ ಸೇರಿದಂತೆ ಸಂಘ ಮತ್ತು ಹೈನುಗಾರರ ಪ್ರಗತಿಗಾಗಿ ಶ್ರಮಿಸಲಿ” ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಗಾಂಧಿನಗರ-ಗದ್ದೆಕಣ್ಣೂರು ರಸ್ತೆ ಒತ್ತುವರಿ; ಕ್ರಮಕ್ಕೆ ಸ್ಥಳೀಯರ ಒತ್ತಾಯ

ಈ ಸಂದರ್ಭದಲ್ಲಿ ಅಜ್ಜಪ್ಪನಹಳ್ಳಿ ಡೇರಿ ನಿರ್ದೇಶಕ ವೀರಭದ್ರ, ಚಿಕ್ಕಣ್ಣ, ಲಕ್ಷ್ಮಮ್ಮ, ಮುನಿಸ್ವಾಮಿ, ವೆಂಕಟಮ್ನ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಪ್ಪ, ಮುಖಂಡರಾದ ನಾಗರಾಜ್, ನವೀನ್, ಮಂಜುನಾಥ್, ರಾಮಸ್ವಾಮಿ ಹಾಗೂ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ

ಕೋಲಾರ : ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ...

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು...

ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...