ಕೋಲಾರ | ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

Date:

ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ.

ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು. ಮಾಲೂರು ಶಾಸಕ ಕೆ.ವೈ ನಂಜೇಗೌಡ ಅವರ ಆಪ್ತ ವಲಯದಲ್ಲಿ ಅನಿಲ್ ಗುರುತಿಸಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಕೆಲಸಗಳನ್ನೂ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಶನಿವಾರ ಸಂಜೆ ಮಾಲೂರಿನ ಕಡೆಗೆ ಅವರು ಹೊರಟ್ಟಿದ್ದರು. ಈ ವೇಳೆ, ಅವರನ್ನು ಹಿಂಚಾಲಿಸಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ರ್ಶತಳಕ್ಕೆ ಕೋಲಾರ ಎಸ್‌ಪ್‌ ನಾರಾಯಣ್ ಮತ್ತು ಮಾಲೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಓರ್ವ ಅನುಮಾನಾಸ್ಪ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಗಣೇಶ ವಿಸರ್ಜನೆ ವೇಳೆ ಗ್ರಾಮದಲ್ಲಿ ಆರ್ಕೇಸ್ಟ್ರಾ ಆಯೋಜನೆ ಸಂಬಂಧ ಅನಿಲ್ ಹಾಗೂ ಗ್ರಾಮದ ಕೆಲವರು ನಡುವೆ ಜಗಳ ನಡೆದಿತ್ತು. ಅಲ್ಲದೆ, ಅನಿಲ್ ಅವರೊಂದಿಗೆ ಹಲವು ವರ್ಷಗಳಿಂದ ಮುನಿಸಿಕೊಂಡಿದ್ದ ವ್ಯಕ್ತಿಯೊಬ್ಬ ಶನಿವಾರ ಅವರೊಂದಿಗೆ ಮಾತನಾಡಿದ್ದ. ಹೀಗಾಗಿ, ಅನಿಲ್ ಕೊಲೆಯ ಹಿಂದೆ ಹಲವಾರು ಅನುಮಾನಗಳಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...