ಕೋಲಾರ | ಲಾಕಪ್‌ ಡೆತ್ ಪ್ರಕರಣ: ಪಿಎಸ್‌ಐ ಸೇರಿ ಮೂವರ ಅಮಾನತು

Date:

ಲಾಕಪ್‌ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಪೇದೆ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬುವರನ್ನು ಅಮಾನತು ಮಾಡಲಾಗಿದೆ.

ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು. ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ, ಬೇರೆ-ಬೇರೆ ಸ್ಥಳಗಳಲ್ಲಿ ಇರಿಸಿ, 15 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಅಕ್ಟೋಬರ್ 1ರಂದು ಪೊಲೀಸ್‌ ಸುಪರ್ದಿಯಲ್ಲೇ ಮುನಿರಾಜು ಎಂಬವರು ಸಾವನ್ನಪ್ಪಿದ್ದರು. ಬಳಿಕ, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು. ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಅರೋಪಿಗಳನ್ನ ವಿಚಾರಣೆ ಮಾಡಿ, ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್‌ಒಇ ನಾರಾಯಣ ಅಮಾನತು ಮಾಡಿದ್ದಾರೆ.

ಮೂವರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...