ಕೋಲಾರ | ರಾಷ್ಟ್ರೀಯ ವಿಪತ್ತು ಘೋಷಣೆಗೆ ಪ್ರಾಂತ ರೈತ ಸಂಘ ಒತ್ತಾಯ

Date:

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಕೋಲಾರದ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.

ಕೋಲಾರ ನಗರದ ತಹಶೀಲ್ದಾರ್ ಕಚೇರಿ ಎದುರು ಜಮಾವಣೆಗೊಂಡ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಾತನಾಡಿ, “ಶತಮಾನಗಳಲ್ಲೆ ಎಂದೂ ಕಾಣದ ಬರಗಾಲಕ್ಕೆ ರಾಜ್ಯ ತತ್ತರಿಸಿದೆ. ಕೇಂದ್ರ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸ‌ಬೇಕು” ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷ ಟಿ ಎಂ ವೆಂಕಟೇಶ್ ಮಾತನಾಡಿ, “ರಾಜ್ಯ ಸರ್ಕಾರವೇ 236 ತಾಲೂಕುಗಳ ಪೈಕಿ 223 ತಾಲೂಕುಗಳು ತೀವ್ರ ಬರಪೀಡಿತವೆಂದು ಘೋಷಿಸಿದೆ. ಕೃಷಿ ಇಲಾಖೆ ವರದಿ ಪ್ರಕಾರ ಸುಮಾರು ಐವತ್ತು ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕಳೆದ ಜೂನ್‌ ಮಾಹೆಯ ಮುಂಗಾರು ವೈಫಲ್ಯದಿಂದ ಬರಗಾಲ ಆವರಿಸಿದೆ. ನಂತರ ಯಾವ ಮಳೆಯೂ ಬರದಿರುವುದು ರೈತಾಪಿ ಸಮುದಾಯದ ಸಂಕಟಕ್ಕೆ ಕಾರಣವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರಪೀಡಿತ ಜನರ ಅಗತ್ಯಗಳನ್ನು ಪೂರೈಸಬೇಕಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತೀವ ನಿರ್ಲಕ್ಷ್ಯ ವಹಿಸಿವೆ. ಬರಗಾಲದ ಪರಿಹಾರಕ್ಕಾಗಿ ಕೇಂದ್ರದಿಂದ ₹18,177 ಕೋಟಿಯನ್ನು ಒದಗಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿ ಹಲವಾರು ನಿಯೋಗಗಳ ಮೂಲಕ ಒತ್ತಾಯಿಸಿದ್ದರೂ ಒಂದು ನಯಾ ಪೈಸೆ ಕೊಟ್ಟಿಲ್ಲ. ಬೇಸಿಗೆಯಲ್ಲಿ ನೀರು, ಮೇವು, ಆಹಾರ, ಉದ್ಯೋಗಕ್ಕೆ ಹಾಹಾಕಾರ ಇರುವಾಗ, ಇಡೀ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲ ಉಂಟು ಮಾಡಬಹುದಾದ ಪರಿಣಾಮಗಳನ್ನು ಊಹಿಸಬಹುದಾಗಿದೆ” ಎಂದು ಕಳವಳಗೊಂಡರು.

ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಮಾತನಾಡಿ, “ಬರಗಾಲ ಇದ್ದರೂ ರಾಷ್ಟ್ರೀಕೃತ ಬ್ಯಾಂಕುಗಳು, ಸಾಲ ವಸೂಲಾತಿಗಾಗಿ ರೈತರಿಗೆ ನೋಟೀಸ್‌ಗಳನ್ನು ನೀಡುತ್ತಿರುವುದು ರಾಜ್ಯದ ಎಲ್ಲ ಕಡೆ ವರದಿಯಾಗುತ್ತಿವೆ. ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳು, ಮೈಕ್ರೋ ಫೈನಾನ್ಸ್ ಕಂಪನಿಗಳು, ಖಾಸಗಿ ಲೇವಾದೇವಿ ಸಾಲಗಳ ವಸೂಲಾತಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ದುಬಾರಿ ಮೀಟರ್ ಬಡ್ಡಿ ಸಾಲದ ಜಾಲ ಬಹಳ ವ್ಯಾಪಕವಾಗಿ ಬೆಳೆಯುತ್ತಿದೆ. ಬರಗಾಲದಿಂದ ಉಂಟಾದ ಸಾಲದ ಬೇಡಿಕೆ, ಬಡ್ಡಿದರದ ಹೆಚ್ಚಳಕ್ಕೆ ಕಾರಣವಾಗಿದ್ದು ರೈತರ ಹಾಗೂ ಗ್ರಾಮೀಣ ಜನತೆಯ ಪರಿಸ್ಥಿತಿಯನ್ನು ಹದಗೆಡಿಸುತ್ತಿದೆ” ಎಂದು ಕಿಡಿಕಾರಿದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬರ ಪರಿಹಾರವನ್ನು ಒದಗಿಸಬೇಕು. ಒಂದು ಎಕರೆಗೆ ಬೆಳೆನಷ್ಟ ಪರಿಹಾರವಾಗಿ ₹50,000 ನೀಡಬೇಕು. ಇಡೀ ರಾಜ್ಯವನ್ನು ಸಂಪೂರ್ಣ ಬರಗಾಲ ಪಿಡೀತ ಪ್ರದೇಶವೆಂದು ಘೋಷಿಸಬೇಕು. ಬರಗಾಲ ಘೋಷಣೆಗೆ ಸಂಬಂಧಿಸಿ, ಕೇಂದ್ರ ಸರ್ಕಾರವು ತನ್ನ ವಸಾಹತುಶಾಹಿ ಕಾಲಘಟ್ಟದ ಮಾನದಂಡಗಳಿಗೆ ಬದಲಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನದಂಡಗಳನ್ನು ರೂಪಿಸಬೇಕು. ರಾಜ್ಯದಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಟ್ಯಾಂಕರ್ ನೀರಿನ ಮಾರಾಟದ ಮೇಲೆ ನಿಯಂತ್ರಣ ಸಾಧಿಸಬೇಕು” ಎಂದರು

“ಸರ್ಕಾರ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು. ಕೂಡಲೇ ಕೇಂದ್ರ ಸರ್ಕಾರವು, ಎಲ್ಲ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಎಲ್ಲ ರೀತಿಯ ಸಾಲ ವಸೂಲಾತಿಯನ್ನು ನಿಷೇಧಿಸಿ ಆದೇಶ ಹೊರಡಿಸಬೇಕು. ರೈತರ ಕೃಷಿ ಕೂಲಿಕಾರರ, ಗೇಣಿ ರೈತರ ಆತ್ಮಹತ್ಯೆ ತಡೆಗಟ್ಟಲು ಕೂಡಲೇ ಕ್ರಮ ವಹಿಸಬೇಕು. ಗ್ರಾ.ಪಂ ಮಟ್ಟದಲ್ಲಿ ಬರಗಾಲ ಪರಿಹಾರ ಕ್ರಮಗಳನ್ನು ಯೋಜಿಸಲು ವಿಶೇಷ ಗ್ರಾಮಸಭೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ: ಸಚಿವ ನಾಗೇಂದ್ರ

ಪ್ರತಿಭಟನೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಆಲಹಳ್ಳಿ ವೆಂಕಟೇಶ್, ಉಪಾಧ್ಯಕ್ಷ ಎನ್ ಎನ್ ಶ್ರೀರಾಮ್, ಗಂಗಮ್ಮ, ಅಪ್ಪಯ್ಯಣ್ಣ, ಮುಖಂಡರುಗಳಾದ ಯಲ್ಲಪ್ಪ, ಮುನಿರತ್ನಮ್ಮ, ಚಿನ್ನಮ್ಮ, ಶ್ರೀನಿವಾಸ್, ವೆಂಕಟರಾವ್, ರಾಜೇಂದ್ರ ಚಪ್ರಾಸ್, ನಾರಾಯಣಸ್ವಾಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...