ಕೋಲಾರ | ಭೀಕರ ಅಪಘಾತ; ಖಾಸಗಿ ಬಸ್‌ ಹರಿದು ಮಹಿಳೆ ಸಾವು

Date:

ಕೋಲಾರದ ಮೆಕ್ಕೆ ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ʼಭಾರತಿʼ ಎಂಬ ಹೆಸರಿನ ಖಾಸಗಿ ಬಸ್ ಹರಿದು ನಾಯಕನಹಳ್ಳಿಯ ರಾಮಕ್ಕ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ನಗರದ ಖಾಸಗಿ ಬಸ್ ನಿಲ್ಲಾಣದ ಸಮೀಪ ಮಂಗಳವಾರ ಬೆಳಿಗ್ಗೆ 11ರ ಸುಮಾರಿಗೆ ವಿಕೋಟದಿಂದ ಚಿಕ್ಕಬಳ್ಳಾಪುರದತ್ತ ಹೊರಟಿದ್ದ ಖಾಸಗಿ ಬಸ್ ಹರಿದ ಪರಿಣಾಮ ಬಂಗಾರಪೇಟೆ ತಾಲೂಕಿನ ನಾಯಕನ ಹಳ್ಳಿಯ ರಾಮಕ್ಕ (58) ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಜತೆಯಲ್ಲಿಯೇ ಇದ್ದ ಪತಿ ಶ್ರೀನಿವಾಸ(65) ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಇವರು ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮಕ್ಕ ಹಾಗೂ ಶ್ರೀನಿವಾಸ ದಂಪತಿ ನಗರದ ಹಳೇ ಬಸ್ ನಿಲ್ಲಾಣದ ಸಮೀಪದ ಗಂಗಮ್ಮನ ದೇವಾಲಯಕ್ಕೆ ಹೋಗಲು ಮೆಕ್ಕೆ ಸರ್ಕಲ್ ತಿರುವಿಗೆ ಬರುತ್ತಿದ್ದಂತೆ ಅತಿ ವೇಗವಾಗಿ ಬಂದ ಭಾರತಿ ಖಾಸಗಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಅಯ್ಯಪ್ಪ‌ ಮಾಲಾಧಾರಿಗಳ ಸಾವು 

ಭಾರತಿ ಖಾಸಗಿ ಬಸ್ ಸನಿಹದಲ್ಲೇ ಬರುತ್ತಿದ್ದ ಸರ್ಕಾರಿ ಬಸ್‌ಗೆ ಓವರ್ ಟೇಕ್ ಮಾಡಲು ಹೊರಟಾಗ ಈ ದುರ್ಘಟನೆ ನಡೆಯಿತೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಮೃತ ಮಹಿಳೆಯ ಮೃತದೇಹವನ್ನು ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆ ಚಿತಾಗಾರದಲ್ಲಿ ಇಟ್ಟಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...