ಕೋಲಾರ | ರಾಜನಹಳ್ಳಿಯಲ್ಲಿ ಫೆ.8 & 9ರಂದು ವಾಲ್ಮೀಕಿ ಜಾತ್ರೆ

Date:

ಕೋಲಾರ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ 8 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು.

ಮುಂದಿನ ವರ್ಷ ಫೆ. 8 ಮತ್ತು 9 ರಂದು ಎರಡು ದಿನಗಳ ಕಾಲ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿ ನಡೆಯುವ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಕರಪತ್ರವನ್ನು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪರಮಪೂಜ್ಯ ಜಗದ್ಗುರು ಪ್ರಸನ್ನಾನಂದ ಮಹಾಸ್ವಾಮೀಜಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಸ್ವಾಮೀಜಿ, ರಾಜನಹಳ್ಳಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯ 8ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದ್ದು, ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು

ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಸಮಸ್ಯೆಗಳು ಇದ್ದು ಅವುಗಳ ಪರಿಹಾರಕ್ಕೆ ಸಮುದಾಯ ಒಗ್ಗಟ್ಟು ಮುಖ್ಯವಾಗಿದೆ ಆಳುವ ಸರ್ಕಾರಗಳು ಚುನಾವಣೆಯಲ್ಲಿ ಮಾತ್ರ ಸಮುದಾಯವನ್ನು ಪರಿಗಣಿಸಲಾಗುತ್ತದೆ ಆದರೆ ಅಧಿಕಾರ ಸಿಕ್ಕ ನಂತರ ನಿರ್ಲಕ್ಷ್ಯ ತೋರಿದ್ದಾರೆ ಒಗ್ಗಟ್ಟನ್ನು ಪ್ರದರ್ಶಿಸಿ ನಮ್ಮ ಹಕ್ಕುಗಳನ್ನು ಪಡೆಯಬೇಕಾಗಿದೆ ಜೊತೆಗೆ ನಕಲಿ ಜಾತಿ ಪ್ರಮಾಣಪತ್ರ ಸಂಖ್ಯೆ ಜಿಲ್ಲೆಯಲ್ಲಿ 4 ಸಾವಿರ ಇದ್ದು ಇದರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತದೆ ಜನಾಂಗದ ಸಮಸ್ಯೆ ಬಂದಾಗ ಸ್ವಪ್ರತಿಷ್ಠೆ ಬಿಟ್ಟು ಎಲ್ಲರೂ ಒಗ್ಗಟ್ಟಾಗಬೇಕು ನಮ್ಮ ನಡೆಯನ್ನು ಸರ್ಕಾರಗಳು ಗಮನಿಸುತ್ತಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಹಾಗೂ ನಗರಸಭೆ ಸದಸ್ಯ ಎನ್.ಅಂಬರೀಷ್ ಮಾತನಾಡಿ ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವರ ಸಂಖ್ಯೆ ಹೆಚ್ಚಾಗಿದೆ ಜೊತೆಗೆ ಕುರುಬರನ್ನು ಎಸ್ಟಿಗೆ ಸೇರ್ಪಡೆಗೆ ಮತ್ತೆ ಪ್ರಯತ್ನಗಳು ನಡೆದಿವೆ ಇದಕ್ಕೆ ವಿರೋಧ ವ್ಯಕ್ತಪಡಿಸಬೇಕು ಸಮುದಾಯದ ಪರವಾಗಿ ಬೇಡಿಕೆಗಳನ್ನು ಈಡೇರಿಸಲು ನಾವು ಹೋರಾಟ ಮಾಡಬೇಕು ಆದರೆ ಅದರ ಫಲವನ್ನು ಮಾತ್ರ ಅಧಿಕಾರಿ ವರ್ಗದವರು ಪಡೆಯುತ್ತಾರೆ ಅದರಿಂದಾಗಿ ಸಮುದಾಯದ ಅಭಿವೃದ್ಧಿಗೆ ಸಹಕಾರ ಇಲ್ಲವಾಗಿದೆ ಅವಣಿಯಲ್ಲಿ ಸುಮಾರು 10 ಎಕರೆ ಜಾಗದಲ್ಲಿ ಇಂಜಿನಿಯರ್ ಕಾಲೇಜು ಜೊತೆಗೆ ನಗರದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಒತ್ತಾಯಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಾತ್ರೆಗೆ ತಾಲೂಕು ಪ್ರತಿನಿಧಿಗಳಾಗಿ ಕೋಲಾರದಿಂದ ಎಂ.ಬಾಲಗೋವಿಂದ್, ಮುಳಬಾಗಿಲು ಜಯಪ್ರಕಾಶ್, ಶ್ರೀನಿವಾಸಪುರ ನರೇಶ್ ನಾಯಕ್, ಮಾಲೂರು ನಾರಾಯಣಸ್ವಾಮಿ, ಬಂಗಾರಪೇಟೆ ಕಾಮಾಂಡಹಳ್ಳಿ ನಾರಾಯಣಸ್ವಾಮಿ, ಕೆಜಿಎಫ್ ರಮೇಶ್ ನಾಯಕ್ ಅವರನ್ನು ನೇಮಕ ಮಾಡಿ ಇವರ ನೇತೃತ್ವದಲ್ಲಿ ಜಾತ್ರಗೆ ಸಂಬಂಧಿಸಿದ ಜವಾಬ್ದಾರಿ ವಹಿಸಿ ಅವರನ್ನು ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ…? ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಈ ಸಂದರ್ಭದಲ್ಲಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ಮಾಲೂರು ವೆಂಕಟರಾಮ್, ಮುಖಂಡರಾದ ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಮಂಜುಳಾ ಶ್ರೀನಿವಾಸ್, ಬೈರಕೂರು ರಾಮಾಂಜಿ, ಬೈರಂಡಹಳ್ಳಿ ನಾಗೇಶ್, ಅವಣಿ ಸುಬ್ರಮಣಿ, ವಗಳಗೆರೆ ಅಂಜಿ, ಬೆಳ್ಳೂರು ತಿರುಮಲೇಶ್, ಕಲ್ವಮಂಜಲಿ ರವಿ, ಅಮ್ಮೇರಹಳ್ಳಿ ಚಲಪತಿ, ಮಾಲೂರು ದೇವೇಂದ್ರ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ

ಕೋಲಾರ : ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ...

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು...

ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...