ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಕಾಂಗ್ರೆಸ್‌ಗೆ ಸೇರಿಸಬಾರದು: ಶಾಸಕ ಕೊತ್ತೂರು ಮಂಜುನಾಥ್

Date:

ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿ, ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿರುವ ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬಾರದು ಎಂದು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್ ಏಳಿದ್ದಾರೆ.

ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಬ್ರಾಹಿಂ ಅವರು ಈ ಹಿಂದೆ ಕಾಂಗ್ರೆಸ್‌ನಲ್ಲಿ ಅಧಿಕಾರ ಅನುಭವಿಸಿ ಪಕ್ಷ ತೊರೆದಿದ್ದರು. ಈಗ ಮತ್ತೆ ಅವರು ಕಾಂಗ್ರೆಸ್‌ ಬರುತ್ತೇವೆಂದರೆ ಸೇರಿಸಿಕೊಳ್ಳಬಾರದು. ನಮ್ಮಲ್ಲಿ ಮುಸ್ಲಿಂ ನಾಯಕರು ಇಲ್ಲವೇ? ಜಮೀರ್‌ ಅಹ್ಮದ್‌ ಖಾನ್‌, ರಹೀಂ ಖಾನ್‌, ತನ್ವೀರ್‌ ಸೇಠ್‌, ನಸೀರ್‌ ಅಹ್ಮದ್‌ ಇಲ್ಲವೇ? ಅಧಿಕ್ಕಾರಕ್ಕಾಗಿ ಆಸೆಪಡುವವರು ಪಕ್ಷಕ್ಕೆ ಬೇಡ” ಎಂದಿದ್ದಾರೆ.

ಇನ್ನು, ಲಿಂಗಾಯಿತರಿಗೆ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲವೆಂದು ಹೇಳಿರುವ ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಕೆಲವರು ತಲೆ ಕೆಟ್ಟು ಮುಖ್ಯಮಂತ್ರಿ ಸ್ಥಾನದ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ತೆಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಕಾಂಗ್ರೆಸ್​ ಜನರ ಆಶೀರ್ವಾದದಿಂದ 136 ಸ್ಥಾ‌ನಗಳನ್ನು ಗೆದ್ದಿದೆ. ಸರ್ಕಾರವೂ ಸಹ ಸುಭಿಕ್ಷವಾಗಿ ನಡೆದುಕೊಂಡು ಹೋಗುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಶಾಸಕರಿಗೆ ಏನನ್ನಾದರೂ ಮಾತನಾಡಲೇಬೇಕು ಎಂದಿದ್ದರೆ, ಅವರವರ ಕ್ಷೇತ್ರಗಳ ಸಮಸ್ಯೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಮಾತನಾಡಲಿ. ಕ್ಷೇತ್ರಕ್ಕಾಗಿ ಕೆಲಸ ಮಾಡಲಿ. ತಮ್ಮ ಕ್ಷೇತ್ರದ ಅಗತ್ಯಗಳ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿ. ಅನಗತ್ಯವಾಗಿ ಮಾತನಾಡುವವರನ್ನು ಪಕ್ಷದಿಂದ ದೂರ ಇಡಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...