ಮೇಡಿಹಾಳ ಗ್ರಾಮದಲ್ಲಿ ಅವೈಜ್ಞಾನಿಕ ಗಣಿಗಾರಿಕೆ: ರೈತರ ಬೆಳೆ-ಮನೆಗಳಿಗೆ ಕಲ್ಲಿನ ಮಳೆ, ಧೂಳಿನ ಪರದೆ

Date:

ಅವೈಜ್ಞಾನಿಕ ಕಲ್ಲು ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು ಮತ್ತು ಕಟ್ಟುನಿಟ್ಟಾದ ಕಾನೂನು ಕ್ರಮಗಳ ಮೂಲಕ ನಿಯಂತ್ರಿಸಬೇಕು. ರೈತರ ಆರೋಗ್ಯ, ಕೃಷಿ ಜಮೀನುಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನಕ್ಕೆ ಆದ್ಯತೆ ನೀಡಿ, ವೈಜ್ಞಾನಿಕ ಮತ್ತು ಪರಿಸರ ಸ್ನೇಹಿ ವಿಧಾನದಲ್ಲಿ ಮಾತ್ರ ಗಣಿಗಾರಿಕೆ ನಡೆಸುವಂತೆ ಅನುಮತಿಸಬೇಕು.

ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿ ಮೇಡಿಹಾಳ ಗ್ರಾಮದ ಬಳಿ ಕೆಲವರು ಅವೈಜ್ಞಾನಿಕವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು ಬಂಡೆಗಳನ್ನು ಬ್ಲಾಸ್ಟ್ ಮಾಡಿದಾಗ ಕಲ್ಲಿನ ತುಣುಕುಗಳು ಸುತ್ತಮುತ್ತಲ ಕೃಷಿ ಭೂಮಿಗೆ ಬೀಳುತ್ತಿವೆ. ಇಂತಹ ಅವೈಜ್ಞಾನಿಕ ಗಣಿಗಾರಿಕೆಯಿಂದಾಗಿ ರೈತರು ತಮ್ಮ ಹೊಲ ಗದ್ದೆಗಳಲ್ಲಿ ಮೇಲಿನಿಂದ ಕಲ್ಲು ಬೀಳುತ್ತದೆಂಬ ಆತಂಕದಲ್ಲಿಯೇ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಬಂಡೆ ಬ್ಲಾಸ್ಟ್ ಆಗುವ ರಭಸಕ್ಕೆ ಸುತ್ತಮುತ್ತಲಿರುವ ಮನೆಗಳ ಗೋಡೆಗಳಲ್ಲಿಯೂ ಬಿರುಕು ಕಾಣಿಸಿಕೊಂಡಿವೆ. ಗಣಿಗಾರಿಕೆ ಕ್ರಷರ್‌ನಿಂದ ಬಂದ ಕಲ್ಲಿನ ಧೂಳು ರೈತರ ಬೆಳೆಗಳ ಮೇಲೆ ಬಿಳಿ ಧೂಳಿನ ಪರದೆಯನ್ನು ಉಂಟುಮಾಡಿದೆ. ಗ್ರಾಮದ ಮನೆಗಳ ಮೇಲ್ಛಾವಣಿ ಧೂಳಿನಿಂದ ತುಂಬಿದೆ. ರೇಷ್ಮೆ ಬೆಳೆಯುವ ರೈತರು ಧೂಳಿನ ಸೊಪ್ಪನ್ನು ಬಳಸಲಾರದ ಸ್ಥಿತಿಯಲ್ಲಿದ್ದಾರೆ.

ಈ ಕುರಿತು 3 ತಿಂಗಳ ಹಿಂದೆ ರೈತರು, ಜಿಲ್ಲಾಧಿಕಾರಿಯವರಿಗೆ ದೂರು ನೀಡಿದಾಗ ಅವರು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರೇಷ್ಮೆ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಿಳಿಸಲಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು, ಗ್ರಾಮಸ್ಥರಿಗೆ ಆಗುತ್ತಿರುವ ಹಾನಿಯ ಕುರಿತು ವರದಿ ತಯಾರಿಸಿ ಅವರ ಪರವಾನಗಿಯನ್ನು ರದ್ದುಗೊಳಿಸುವುದಾಗಿ ಹೇಳಿ ಹೋಗಿದ್ದರು. ಆದರೆ ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲವೆಂಬುದು ಗ್ರಾಮಸ್ಥರ ವಾದವಾಗಿದೆ. ಈ ಮಧ್ಯೆ ಪುನಃ ಬಂಡೆ ಬ್ಲಾಸ್ಟ್ ಮಾಡಿದ್ದರಿಂದ ಸಮಸ್ಯೆ ಪುನರಾವರ್ತನೆಯಾಗಿದೆ.

ಕೋಲಾರ ಜಿಲ್ಲೆಯಲ್ಲಿ ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರ ಕೆಲಸವಾಗುತ್ತಿದೆಯೇ ಹೊರತು ಜನಸಾಮಾನ್ಯರ ಕೆಲಸಕ್ಕೆ ಸ್ಪಂದಿಸುವ ಕೆಲಸವನ್ನು ತಾಲೂಕು ಆಡಳಿತವಾಗಲಿ ಜಿಲ್ಲಾಡಳಿತವಾಗಲಿ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಮೂರು ತಿಂಗಳ ಹಿಂದೆ ವೇಮಗಲ್ ಭಾಗದ ಮೇಡಿಹಾಳ ಗ್ರಾಮದ ರೈತರು ಜಿಲ್ಲಾಧಿಕಾರಿಗಳ ಬಳಿ ಹೋಗಿ ಊರಿನ ಪಕ್ಕದಲ್ಲೇ ಎರಡು ಕ್ರಷರ್‌ಗಳು ಕಾರ್ಯಾಚರಿಸುತ್ತಿವೆ, ಅದನ್ನು ರದ್ದುಮಾಡಬೇಕೆಂದು ಮನವಿ ಮಾಡಿದ್ದರು. ಒಂದು ಕ್ರಷರ್ ನಾಗನಾಳ ಸೋಮಣ್ಣ, ಇನ್ನೊಂದು ಪ್ರಭಾಕರ್ ರೆಡ್ಡಿ ಅವರಿಗೆ ಸಂಬಂಧಿಸಿದ್ದು, ಇವರಿಬ್ಬರೂ ರಾಜಕೀಯವಾಗಿ ಬಹಳ ಪ್ರಭಾವಿ ವ್ಯಕ್ತಿಗಳಾಗಿದ್ದಾರೆ.

ಈ ಕುರಿತು ರೈತ ಸಂಘ ಹಸಿರು ಸೇನೆ ರಾಜ್ಯ ಸಂಚಾಲಕ ಆನಂದ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಊರಿನ ಪಕ್ಕದಲ್ಲೇ ಹೊಲಗಳಿಗೆ ಹೊಂದಿಕೊಂಡಂತೆ ಬಂಡೆ ಇದ್ದು, ಇದರಲ್ಲಿ ಅವೈಜ್ಞಾನಿಕವಾಗಿ ಬಂಡೆ ಬ್ಲಾಸ್ಟ್ ಮಾಡುತ್ತಿದ್ದಾರೆ. ಸದ್ಯ ಆಧುನಿಕ ಯಂತ್ರೋಪಕರಣಗಳು ಲಭ್ಯವಿದ್ದರೂ, ಅವುಗಳನ್ನು ಬಳಸದೆ ಬ್ಲಾಸ್ಟ್ ಮಾಡುತ್ತಿರುವುದರಿಂದ ಸುತ್ತಮುತ್ತಲಿನ ಹೊಲಗಳಿಗೆ ಕಲ್ಲು ಬೀಳುತ್ತಿವೆ. ಯಾವ ಸಮಯದಲ್ಲಿ ಬ್ಲಾಸ್ಟ್ ಮಾಡುತ್ತಾರೆ ಎನ್ನುವ ಮಾಹಿತಿಯನ್ನೂ ನೀಡುವುದಿಲ್ಲ. ಹೀಗಿರುವಾಗ ತೋಟದಲ್ಲಿ ಕೆಲಸ ಮಾಡುವ ಕೃಷಿಕರು ಯಾವ ಸಮಯದಲ್ಲಿ ಕಲ್ಲುಗಳು ಬೀಳುತ್ತವೆಯೋ ಎಂಬ ಆತಂಕದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅವೈಜ್ಞಾನಿಕ ಕಲ್ಲು ಗಣಿಗಾರಿಕೆ 1
ಆನಂದ್ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಸಂಚಾಲಕರು

“ಬಂಡೆ ಸುತ್ತಮುತ್ತ ರೇಷ್ಮೆ ಬೆಳೆ ಬೆಳೆಯುತ್ತಾರೆ. ಕ್ರಷರ್‌ನಿಂದ ಬರುವ ಧೂಳು ಸುಮಾರು ಅರ್ಧ ಮುಕ್ಕಾಲು ಕಿಲೋ ಮೀಟರ್‌ನಷ್ಟು ಆವರಿಸಿರುತ್ತದೆ. ಹಾಗಾಗಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರೈತರು ಬದುಕುವುದಾದರೂ ಹೇಗೆ? ಹಾಗಾಗಿ ಈ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಮೇಡಿಹಾಳ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಬಳಿಕ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಸಂಬಂಧಪಟ್ಟ ಅಧಿಕಾರಿಗಳಿಗೆಲ್ಲ ರಿಪೋರ್ಟ್ ಕೊಡುವಂತೆ ಸೂಚನೆ ನೀಡಿದ್ದರು. ಎಲ್ಲ ಇಲಾಖೆಯವರು ಗ್ರಾಮಸ್ಥರ ಬಳಿ ಬಂದು ಮಾತನಾಡಿ ಸ್ಥಳ ಮಹಜರು ಮಾಡಿ ಇಲ್ಲಿ ತೊಂದರೆ ಆಗುತ್ತಿರುವುದನ್ನು ಗಮನಿಸಿ, ಊರಿನ ಹೊಲ, ಮನೆಗಳಿಗೆ ಧೂಳು ತುಂಬಿಕೊಳ್ಳುತ್ತಿರುವುದನ್ನು ಕಣ್ಣಾರೆ ಕಂಡು, ಇದರ ಬಗ್ಗೆ ವರದಿ ತಯಾರು ಮಾಡಿ ರಿಪೋರ್ಟ್ ಹಾಕಿ, ಕ್ರಷರ್ ಅನುಮತಿ ರದ್ದು ಮಾಡುವುದಾಗಿ ಭರವಸೆ ಕೊಟ್ಟು ಹೋದರು. ಇಲ್ಲಿಗೆ ನಾಲ್ಕು ತಿಂಗಳಾಗುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಿದ್ದಾರೆ” ಎಂದು ಆರೋಪಿಸಿದರು.

ಅವೈಜ್ಞಾನಿಕ ಕಲ್ಲು ಗಣಿಗಾರಿಕೆ 3
ಅವೈಜ್ಞಾನಿಕ ಕಲ್ಲುಗಣಿಗಾರಿಕೆಯಿಂದ ಹಾಳಾದ ಅವರೆ ಬೆಳೆ

“ಮೇಡಿಹಾಳ ಗ್ರಾಮದಲ್ಲಿ ಬಂಡೆ ಬ್ಲಾಸ್ಟ್ ಮಾಡುವುದು ನಿಂತಿಲ್ಲ. ಅವರೆ ಫಸಲಿನ ಮೇಲೆ ಕಲ್ಲು ಬಿದ್ದು, ಬೆಳೆ ಹಾಳಾಗಿದೆ. ಗ್ರಾಮ ಜೀವನ ಕಷ್ಟವಾಗಿದೆ. ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದಾರೆ. ಕ್ರಮಕ್ಕಾಗಿ ಕಾಯುತ್ತಿದ್ದೇವೆ. ಕೈಗೊಳ್ಳದಿದ್ದಲ್ಲಿ ಮೇಡಿಹಾಳ ಗ್ರಾಮದ ಜನರು ದನಕರುಗಳ ಜತೆಗೆ ಪಾತ್ರೆ-ಪಡಗ ತಂದು ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಮಾಡುತ್ತೇವೆ. ರೈತ ಹಾಗೂ ದಲಿತ ಸಂಘಟನೆಗಳು ಹೋರಾಟಕ್ಕೆ ಬೆಂಬಲ ನೀಡಲಿವೆ” ಎಂದು ಎಚ್ಚರಿಕೆ ನೀಡಿದರು.

“ಕ್ರಷರ್‌ಗೆ ಪರವಾನಿಗೆ ಕೊಡುವಾಗ ಅಧಿಕಾರಿಗಳು ನೀತಿ ನಿಯಮಗಳ ಪ್ರಕಾರ ಅನುಮತಿ ಕೊಡಬೇಕು ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಬಹಳ ಭ್ರಷ್ಟಾಗಿದ್ದಾರೆ. ತಹಶೀಲ್ದಾರ್ ಕೂಡ ಸ್ಥಳಕ್ಕೆ ಬಂದು ನ್ಯಾಯ ಒದಗಿಸುತ್ತೇವೆಂದು ಹೇಳಿದರೂ ಕೂಡ ಏನೂ ಕ್ರಮ ಕೈಗೊಂಡಿಲ್ಲ. ಬಂಡೆ ಹತ್ತಿರ ಮೇಡಿಹಾಳ ಜನರು ಬ್ಲಾಸ್ಟ್ ಮಾಡಬಾರದೆಂದು ಪೆಂಡಾಲ್ ಹಾಕಿದ್ದಾರೆ. ಆದರೂ ಕೂಡ ಬ್ಲಾಸ್ಟ್ ಮಾಡಿದ್ದಾರೆ” ಎಂದು ಹೇಳಿದರು.

ಮೇಡಿಹಾಳ ಗ್ರಾಮದ ರೈತ ಮಂಜುನಾಥ್ ಮಾತನಾಡಿ, “ಒಂದು ವರ್ಷದಿಂದ ನಮ್ಮ ಊರಿನಲ್ಲಿ ಕ್ರಷರ್ ಮಾಡುತ್ತಿದ್ದು, ಊರು ಧೂಳಿನಿಂದ ತುಂಬಿ ತುಳುಕುತ್ತಿದೆ. ಉಸಿರಾಡಲು ತುಂಬಾ ತೊಂದರೆಯಾಗುತ್ತಿದೆ. ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ತಾಲೂಕು ಆಡಳಿತ, ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿವೆ. ನಮ್ಮ ಸಮಸ್ಯೆ ಬಗೆಹರಿಸಲು ಯಾರೂ ಗಮನ ಹರಿಸುತ್ತಿಲ್ಲ” ಎಂದು ಹೇಳಿದರು.

ಅವೈಜ್ಞಾನಿಕ ಕಲ್ಲು ಗಣಿಗಾರಿಕೆ
ಮಂಜುನಾಥ್, ಮೇಡಿಹಾಳ ಗ್ರಾಮಸ್ಥರು

“ನಮ್ಮ ಊರು ಉಳಿಸಬೇಕು. ನಾವು ಬದುಕಲು ಹಾಗೂ ನಮ್ಮ ಮಕ್ಕಳ ಭವಿಷ್ಯಕ್ಕೆ ದಾರಿ ತೋರಿಸಿ. ನಾವು ಕ್ರಷರ್‌ನಿಂದ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕ್ರಷರ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಗ್ರಾಮಸ್ಥರೆಲ್ಲ ಒಗ್ಗೂಡಿ ಸಮಸ್ಯೆ ಬಗೆಹರಿಯುವ ತನಕ ಧರಣಿ ಮಾಡಲು ನಿರ್ಧರಿಸಿದ್ದೇವೆ” ಎಂದು ಪ್ರತಿಕ್ರಿಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ, “ಮೇಡಿಹಾಳ ಗ್ರಾಮದಲ್ಲಿ ಕ್ರಷರ್‌ಗೆ ಅನುಮತಿ ನೀಡಿದ್ದಾರೆ. ಧೂಳು ಬಾರದ ರೀತಿಯಲ್ಲಿ ತಂತ್ರಜ್ಞಾನ ಬಳಸಿ ಕ್ರಷರ್ ಮಾಡಬಹುದು. ಆದರೂ ಕೂಡಾ ಕ್ರಷರ್ ಮಾಲೀಕರು ಕಡಿಮೆ ವೆಚ್ಚದಲ್ಲಿ ಬೋರ್ ಬ್ಲಾಸ್ಟ್ ಮಾಡುತ್ತಿರುವುದರಿಂದ ಮೇಡಿಹಾಳ ಗ್ರಾಮದ ರೈತರಿಗೆ, ಸಾರ್ವಜನಿಕರಿಗೆ ಬಹಳ ಅನಾನುಕೂಲವಾಗುತ್ತಿದೆ” ಎಂದು ಹೇಳಿದರು.

ಅವೈಜ್ಞಾನಿಕ ಕಲ್ಲು ಗಣಿಗಾರಿಕೆ 2
ಅಬ್ಬಣಿ ಶಿವಪ್ಪ, ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಾಧ್ಯಕ್ಷರು

“ಕ್ರಷರ್ ಬ್ಲಾಸ್ಟ್ ಮಾಡುವ ಸಮಯದಲ್ಲಿ ತೋಟಗಳಲ್ಲಿ ಕೆಲಸ ಮಾಡುವವರ ಮೇಲೆ ಕಲ್ಲು ಬಿದ್ದರೆ ಪ್ರಾಣಹಾನಿಯಾಗುವ ಸಂಭವವಿದೆ. ಕ್ರಷರ್ ಸುತ್ತಮುತ್ತಲಿನ ಪ್ರದೇಶದಲ್ಲಿ ರೇಷ್ಮೆ ಬೆಳೆ ಬೆಳೆದಿದ್ದು, ಕಲ್ಲು ಬ್ಲಾಸ್ಟ್ ಮಾಡುವುದರಿಂದ ಕೆಮಿಕಲ್ ಹಾಗೂ ಧೂಳಿನಿಂದ ರೇಷ್ಮೆ ಬೆಳೆ ಹಾಳಾಗುತ್ತಿದೆ. ಆದರೆ ಕೋಲಾರ ಜಿಲ್ಲೆಯ ಪರಿಸರ ಇಲಾಖೆ ಅಧಿಕಾರಿಗಳು, ತಾಲೂಕು ಆಡಳಿತ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ತಕ್ಷಣ ಪರವಾನಗಿ ರದ್ದುಮಾಡಬೇಕು. ಇಲ್ಲದಿದ್ದರೆ ರೈತ ಸಂಘದ ಮುಂದಾಳತ್ವದಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಆದರೂ ಕ್ರಮ ಕೈಗೊಳ್ಳಲಿಲ್ಲವೆಂದರೆ ಕಾನೂನು ಹೋರಾಟಕ್ಕೆ ಸಿದ್ಧರಾಗಿದ್ದೇವೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿದ್ದೀರಾ? ಉತ್ತರ ಕನ್ನಡ | ಹಸಿರು ಜಿಲ್ಲೆಯಲ್ಲಿ ಅನ್ನದಾತನ ಅಳಲು; ರೈತರ ಸರಣಿ ಆತ್ಮಹತ್ಯೆ ಕೇಳುವುದೇನು?

ಈ ಸಮಸ್ಯೆಯು ಕೋಲಾರ ಜಿಲ್ಲೆಯಲ್ಲಿ ಹೊಸದಲ್ಲ; ವೇಮಗಲ್ ಹೋಬಳಿ ಸೇರಿದಂತೆ ಹಲವು ಭಾಗಗಳಲ್ಲಿ ಅಕ್ರಮವಾದ ಗಣಿಗಾರಿಕೆ ವಿರುದ್ಧ ರೈತರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಅವೈಜ್ಞಾನಿಕ ಕಲ್ಲು ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು ಮತ್ತು ಕಟ್ಟುನಿಟ್ಟಾದ ಕಾನೂನು ಕ್ರಮಗಳ ಮೂಲಕ ನಿಯಂತ್ರಿಸಬೇಕು. ರೈತರ ಆರೋಗ್ಯ, ಕೃಷಿ ಜಮೀನುಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನಕ್ಕೆ ಆದ್ಯತೆ ನೀಡಿ, ವೈಜ್ಞಾನಿಕ ಮತ್ತು ಪರಿಸರ ಸ್ನೇಹಿ ವಿಧಾನದಲ್ಲಿ ಮಾತ್ರ ಗಣಿಗಾರಿಕೆ ನಡೆಸುವಂತೆ ಅನುಮತಿಸಬೇಕು. ಇಲ್ಲದಿದ್ದರೆ, ಹೋರಾಟ ಅನಿವಾರ್ಯ ಎಂದಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...