ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

Date:

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು ಇದಕ್ಕೆ ಕಡಿವಾಣಕ್ಕೆ ವಿಶೇಷ ಕಾನೂನು ರೂಪಿಸಿ ಕೋಳಿ ಸಾಕಾಣಿಕೆದಾರ ರೈತರ ರಕ್ಷಣೆಗೆ ಮುಂದಾಗಲಿ ಎಂದು ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಟಿ.ಯಶವಂತ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾರ್ಪೊರೇಟ್ ಕೃಷಿಯಲ್ಲಿ ಕೋಳಿಯು ಒಂದು ಭಾಗವಾಗಿಬಿಟ್ಟಿದೆ ದಿನನಿತ್ಯ ಕಂಪನಿಗಳಿಂದ ಶೋಷಣೆ ದಬ್ಬಾಳಿಕೆ ನಡೆಯುತ್ತಿದೆ ಇದರ ವಿರುದ್ದ ಸಹಕಾರಿ ಚಳುವಳಿಯ ಮೂಲಕ ಪ್ರತಿರೋಧ ತೋರಬೇಕಾಗಿದೆ ಪ್ರತಿಯೊಬ್ಬ ಸದಸ್ಯರು ಒಗ್ಗಟ್ಟನ್ನು ಪ್ರದರ್ಶಿಸಿ ಸಹಕಾರಿ ವ್ಯವಸ್ಥೆಯನ್ನು ಉಳಿಸಬೇಕಾಗಿದೆ ಎಂದರು.

ಕೋಳಿ ಸಾಕಾಣಿಕೆದಾರರು ಯಾವುದೇ ಸಹಕಾರಿ ಸಂಸ್ಥೆಯ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಸಕಾಲದಲ್ಲಿ ಮರುಪಾವತಿ ಮಾಡಬೇಕು ಸಹಕಾರಿ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕು ಕೋಳಿ‌ ಉತ್ಪಾದಕ ರೈತರ ಕಷ್ಟ ಸುಖದಲ್ಲಿ ಸರ್ಕಾರಗಳು ಭಾಗಿಯಾಗಬೇಕು ಮುಂಬರುವ ಬಜೆಟ್ ನಲ್ಲಿ ಸಹಕಾರಿ ಸಂಸ್ಥೆಗಳ ಉಳಿವಿಗಾಗಿ ವಿಶೇಷವಾದ ಕ್ರಮ ವಹಿಸಲು ಮುಂದಾಗಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಕೋಳಿ ಸಾಕಾಣಿಕೆ ಉದ್ಯಮವಲ್ಲ ರೈತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿದ್ದಾರೆ ಅವರಿಗೆ ಬದುಕು ಕಟ್ಟಿಕೊಳ್ಳಲು ಸರ್ಕಾರಗಳು ಅವಕಾಶ ನೀಡಬೇಕಾಗಿದೆ ಉತ್ಪಾದನೆಯ ಬೇಡಿಕೆ ಹೆಚ್ಚಾಗಿದೆ ಅದರ ಅನುಗುಣವಾಗಿ ಉತ್ಪಾದನಾ ಖರ್ಚು ವೆಚ್ಚಗಳ ಬಗ್ಗೆ ಗಮನ ಹರಿಸಬೇಕಾಗಿದೆ ಜೊತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆಗಳನ್ನು ಅಲಿಸಿ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸಂಘದ ಉಪಾಧ್ಯಕ್ಷ ಗೋಪಾಲ್ ಕಾರ್ಯಕ್ರಮ ಕುರಿತಂತೆ ಪ್ರಸ್ತಾವಿಕವಾಗಿ ಮಾತನಾಡಿ ರೈತರನ್ನು ಕೋಳಿ ಸಾಕಾಣಿಕೆ ಕಂಪನಿಗಳ ಹಿಡಿತದಿಂದ ರಕ್ಷಣೆ ಮಾಡಬೇಕು ಸ್ಥಳೀಯವಾಗಿಯೇ ಆಹಾರ ಘಟಕ ಸೇರಿದಂತೆ ಔಷಧೀಗಳ ಮಳಿಗೆಗಳನ್ನು ಪ್ರಾರಂಭ ಮಾಡಲು ಸರ್ಕಾರವು ಕ್ರಮ ವಹಿಸುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ.? ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

ಇದೇ ಸಂದರ್ಭದಲ್ಲಿಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ಹಾಗೂ 10 ಜನ ಕೋಳಿ ಸಾಕಾಣಿಕೆ ರೈತರಿಗೆ 50 ಸಾವಿರದಂತೆ ಸಾಲವನ್ನು ನೀಡಲಾಯಿತು ಸಂಘದ ನಿರ್ದೇಶಕ ಸುಗಟೂರು ಶ್ರೀಧರ್ ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ಹೋರಾಟಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಎನ್ ಮುನಿವೆಂಕಟೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕೋಳಿ ಸಾಕಾಣಿಕೆ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ವೆಂಕಟರೆಡ್ಡಿ, ಕೆ.ಪಿ.ಆರ್ ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್, ಕಸಬಾ ಸೊಸೈಟಿ ಅಧ್ಯಕ್ಷ ದಿಂಬ ನಾಗರಾಜಗೌಡ, ನಿರ್ದೇಶಕ ಶ್ರೀರಾಮರೆಡ್ಡಿ, ಸಂಘದ ಕಾರ್ಯದರ್ಶಿ ರಕ್ಷಿತಾ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...