ಕೊಲ್ಹಾರ | ಬಾಧಿತ ಗ್ರಾಮಗಳ ಬೇಡಿಕೆ ಈಡೇರಿಸುವಂತೆ ಕರವೇ ಆಗ್ರಹ

Date:

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡುವುದು ಮತ್ತು ಬಾಧಿತವಾದ ಗ್ರಾಮಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರವೇ(ಪ್ರವೀಣಶೆಟ್ಟಿ ಬಣ)ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಕೂಡಗಿ ಎನ್‌ಟಿಪಿಸಿ ದ್ವಾರದ ಬಳಿ ತಹಶೀಲ್ದಾರ್ ಎಸ್ ಎಂ ಮ್ಯಾಗೇರಿ ಹಾಗೂ ಎನ್‌ಟಿಪಿಸಿ ಎಸ್ ಆರ್ ಕಾಲಿಯ ಮೂರ್ತಿ ಅವರಿಗೆ ಜಿಲ್ಲಾ ಅಧ್ಯಕ್ಷ ಬಸವರಾಜ ತಾಳಿಕೋಟಿ ಮತ್ತು ರವಿ ಗೊಳಸಂಗಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, “ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡಿ, ಈ ಭಾಗದ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕು. ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಅಧ್ಯಕ್ಷ ರವಿ ಗೋಳಸಂಗಿ ಮಾತನಾಡಿ, “ಕೂಡಗಿ ಎನ್‌ಟಿಪಿಸಿಯಿಂದ ಬಾಧಿತ ಗ್ರಾಮಗಳಾದ ಕೂಡಗಿ, ಮಸೂತಿ, ತೆಲಗಿ, ಗೋಳಸಂಗಿ ಹಾಗೂ ಮುತ್ತಗಿ ಈ ಎಲ್ಲ ಗ್ರಾಮಗಳಿಂದ ಭೂಮಿಯನ್ನು ಪಡೆದುಕೊಂಡಿದ್ದು, ಸದರಿ ಜಮೀನು ಪಡೆಯುವಾಗ ಮಾಡಿಕೊಂಡ ಒಪ್ಪಂದ ಪ್ರಕಾರ ಸಂತ್ರಸ್ತರಿಗಾಗಿ ಹಲವು ಅವಕಾಶಗಳನ್ನು ಮುಂದಿಟ್ಟಿದ್ದು, ಅದರಲ್ಲಿ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ನ್ಯಾಯ ಒದಗಿಸಿಕೊಡಲು ಈ ಹೋರಾಟ ಅನಿವಾರ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರಾಜ್ಯ ಸರ್ಕಾರ ಆ.19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು: ಸಂಸದ ಗೋವಿಂದ ಕಾರಜೋಳ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಶ್ರೀಕಾಂತ ರಾಠೋಡ, ನಿಡಗುಂದಿ ತಾಲೂಕು ಅಧ್ಯಕ್ಷ ಆನಂದ ಹಡಗಲಿ, ಉಪಾಧ್ಯಕ್ಷರಾದ ರಾಜೂಗೌಡ ಬಿರಾದಾರ, ಭೀಮನಗೌಡ ಬಿರಾದಾರ ಹಾಗೂ ಮುತ್ತು ಪೂಜಾರಿ, ಶ್ರೀಧರ ಬಳಿಗಾರ ಜಿಲ್ಲೆಯ ಕರೆವೇ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...