ಉಡುಪಿ | ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ, ಒಂದೇ ತಿಂಗಳಲ್ಲಿ 1.40 ಕೋಟಿ ರೂ ಕಾಣಿಕೆ ಸಂಗ್ರಹ

Date:

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ, ಅತಿ ಹೆಚ್ಚು ಪರವೂರ ಭಕ್ತರು ಬರುವ ದೇವಸ್ಥಾನ. ಅದರಲ್ಲೂ ಕೇರಳದ ಭಕ್ತರು ಇಲ್ಲಿಗೆ ಪ್ರತಿನಿತ್ಯ ಆಗಮಿಸಿ ದೇವಿ ದರ್ಶನ ಪಡೆಯುತ್ತಾರೆ. ಈ ವರ್ಷದ ಮೇ ತಿಂಗಳೊಂದರಲ್ಲೇ 1.40 ಕೋ. ರೂ. ಹುಂಡಿಯಲ್ಲಿ ಸಂಗ್ರಹವಾಗಿದ್ದು, ಒಂದು ತಿಂಗಳ ಅತೀ ಹೆಚ್ಚು ಕಾಣಿಕೆ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ.

ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಂಗ್ರಹವಾದ ನಗದು, ಚಿನ್ನಾಭರಣ, ಒಟ್ಟು ಮೊತ್ತ ಇದು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಹೊರತುಪಡಿಸಿದರೆ ಕೊಲ್ಲೂರು ರಾಜ್ಯದಲ್ಲೇ ಅತೀ ಹೆಚ್ಚು ಆದಾಯವಿರುವ ಕ್ಷೇತ್ರವಾಗಿದೆ.

2024-25 ನೇ ಸಾಲಿನ ಜನವರಿ, ಫೆಬ್ರವರಿ, ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಪ್ರತಿದಿನ 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಹಾಗು ಕಾರ್ಯನಿರ್ವಹಣಾ ಧಿಕಾರಿ ಪ್ರಶಾಂತಕುಮಾ‌ರ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...