ಕೊಪ್ಪಳ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ 6 ತಿಂಗಳು ಜೈಲು, ₹1000 ದಂಡ

Date:

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

ಗಂಗಾವತಿಯ ಮಹಾವೀರ ಸರ್ಕಲ್ ಬಳಿ 2021ರ ಮಾರ್ಚ್ 27ರಂದು ಅರ್ಬಾಜ್‌‌ ಖಾನ್, ಅರ್ಬಾಜ್ ಖಾಜಿ ಹಾಗೂ ಹುಸೇನ್ ರಜಾಕ್ ಶೇಖ್ ಎಂಬುವವರು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದರು. ಈ ಕುರಿತು ಗಂಗಾವತಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಗರಠಾಣೆಯ ಪಿಎಸ್‌ಐ ವೆಂಕಟಸ್ವಾಮಿ ಟಿ ಈ ಪ್ರಕರಣದ ತನಿಖೆ ನಡೆಸಿದ್ದು, ತನಿಖೆಯಲ್ಲಿ ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗಂಗಾವತಿಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಸಾಕ್ಷಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದ್ದು, ಆರೋಪಿತರಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ ₹1000 ದಂಡ ವಿಧಿಸಿದ್ದಾರೆ. ದಂಡ ಕೊಡದೇ ಇದ್ದಲ್ಲಿ ಹೆಚ್ಚುವರಿ 15 ದಿನಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ತಿಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು: ಪ್ರೊ. ಶಾಂತದೇವಿ

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ಎಸ್ ವಾದ ಮಂಡಿಸಿದ್ದರು. ಗಂಗಾವತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ ನಾಯ್ಕ ಹಾಗೂ ವಿಶ್ವನಾಥ ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಾಕ್ಷಿಗಳನ್ನು ಸಮಯಕ್ಕೆ ಸರಿಯಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಾಕಷ್ಟು ಸಹಕಾರ ನೀಡಿದ್ದಾರೆ ಎಂದು ಗಂಗಾವತಿ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...