ಕೊಪ್ಪಳ | ಬ್ಯಾಂಕಿಂಗ್ ಉದ್ದಿಮೆಯಲ್ಲಿ ಸಾಕಷ್ಟು ಪ್ರಗತಿ ಸಾಧ್ಯ: ಅಶ್ರಫ್ ಅಲ್ಲಳ್ಳಿ

Date:

ಈ ಮೊದಲು ಹಣದ ವ್ಯವಹಾರ ಮಾಡಲು ಗ್ರಾಹಕ ಬ್ಯಾಂಕ್‌ಗೆ ತೆರಳಬೇಕಿತ್ತು. ಈಗ ಬ್ಯಾಂಕಿಂಗ್ ಉದ್ದಿಮೆಯಲ್ಲಿ ಸಾಕಷ್ಟು ಪ್ರಗತಿ ಕಾಣಬಹುದಾಗಿದೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಶ್ರಫ್ ಅಲ್ಲಳ್ಳಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದಲ್ಲಿ ಬುಧವಾರ ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ನಿರ್ವಹಣಾಶಾಸ್ತ್ರ ವಿಭಾಗದ ಸಹಯೋಗದಲ್ಲಿ ನಡೆದ ವಿದ್ಯಾರ್ಥಿಗಳಿಗೆ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“1990-2000ಕ್ಕಿಂತ ಮುಂಚೆ ಎಟಿಎಂಗಳಿರಲಿಲ್ಲ. ಮೊಬೈಲ್‌ಗಳಿರಲಿಲ್ಲ. ಆಗ ಹಣದ ವ್ಯವಹಾರಕ್ಕಾಗಿ ಬ್ಯಾಂಕ್‌ಗಳಿಗೆ ತೆರಳಬೇಕಿತ್ತು. ಆಧುನಿಕ ತಂತ್ರಜ್ಞಾನದ ಬೆಳವಣಿಗೆಗಳನ್ನು ಸಮರ್ಪಕವಾಗಿ ಅಳವಡಿಸಿಕೊಂಡಿರುವ ಬ್ಯಾಂಕಿಂಗ್ ಕ್ಷೇತ್ರ ಇಂದು ಅಗಾಧ ಅಭಿವೃದ್ಧಿ ಸಾಧಿಸಿದೆ. ಬರುವ ದಿನಗಳಲ್ಲಿ ರೋಬೋಟ್‌‌ಗಳು ಈ ಉದ್ದಿಮೆಯಲ್ಲಿ ಕಾಣಸಿಗುವ ಕಾಲ ದೂರವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರು ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಟಿ ವಿ ವಾರುಣಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಇಂಥ ಕಾರ್ಯಕ್ರಮಗಳು ಉಪಯುಕ್ತವಾಗಿದ್ದು, ಪ್ರಯೋಜನ ಪಡೆಯುಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ವಿದ್ಯುತ್‌ ತಂತಿಯಿಂದ ಬೆಂಕಿ; ನಾಲ್ಕು ರಾಸು, ಹುಲ್ಲಿನ ಬಣವೆ ಭಸ್ಮ

ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವನಾಥ ಈ ಜಿ ಅತಿಥಿಗಳ ಪರಿಚಯದ ಜತೆಗೆ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಡಿ ಎಚ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ನಿರ್ವಹಣಾಶಾಸ್ತ್ರ ವಿಭಾಗದ ಬೋಧಕ ಸಿಬ್ಬಂದಿ ಶಂಕರಾನಂದ, ಶಾಹಿನಾ, ವಿದ್ಯಾರ್ಥಿಗಳಾದ ಸುಷ್ಮಿತಾ ಮತ್ತು ಪವಿತ್ರ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಎಸ್ ಬಾಲಾಜಿ, ಶಂಕರಾನಂದ ವೈ ಎಂ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...