ಕೊಪ್ಪಳ | ಕಟ್ಟಡ ಕಾರ್ಮಿಕರ ಆನಲೈನ್ ಅರ್ಜಿ ತಾಂತ್ರಿಕ ದೋಷ ಸರಿಪಡಿಸಲು AIUTUC ಆಗ್ರಹ

Date:

ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಆನ್‌ಲೈನ್ ಅರ್ಜಿ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ, ಸರ್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ತಕ್ಷಣ ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ (AIUTUC) ಒತ್ತಾಯಿಸಿದೆ.

ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಪ್ರತಿಭಟಿಸಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಪರವಾಗಿ ಹೇಮಂತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಸಂಚಾಲಕ ಶರಣು ಗಡ್ಡಿ ಮಾತನಾಡಿ, “ಹೊಸ ಸಾಫ್ಟ್‌ವೇರ್‌ನ ತಾಂತ್ರಿಕ ದೋಷಗಳಿಂದ ಕಾರ್ಮಿಕರು ಅರ್ಜಿ, ನೋಂದಣಿ, ರಿನಿವಲ್ ಮಾಡಲು ಸಾಧ್ಯವಾಗದೆ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಗಂಭೀರ ಆರೋಪವಿದೆ. ಇಲಾಖೆಯ ವಿಳಂಬ, ಅರ್ಜಿಗಳ ಅನಾವಶ್ಯಕ ತಿರಸ್ಕಾರ ಮತ್ತು ಸಹಾಯಧನಗಳ ವಿತರಣೆಯಲ್ಲಿ ಅವ್ಯವಸ್ಥೆ ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೈಕ್ಷಣಿಕ, ಮದುವೆ, ಆರೋಗ್ಯ, ಹೆರಿಗೆ ಹಾಗೂ ಇತರ ಸಹಾಯಧನಗಳನ್ನು ಅರ್ಹ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ನೀಡಬೇಕು. ಕಿಟ್‌ಗಳ ವಿತರಣೆಯಲ್ಲಿ ನಡೆದಿರುವ ಅವ್ಯವಹಾರಗಳಿಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ಪಟ್ಟಣಕ್ಕೆ ಹೊಂದಿಕೊಂಡ ಹಳ್ಳದ ಸ್ವಚ್ಛತೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

ಕಾರ್ಮಿಕರು ಮತ್ತು ಸಂಘದ ಮುಖಂಡ ನಾಗರಾಜ್ ಹುಲಿಗಿ, ರಾಮಲಿಂಗ ಶಾಸ್ತ್ರಿ, ಶರಣಪ್ಪ, ಶಬ್ಬೀರ್ ಕುಲಿಮಿ, ರಾಜೇಶ್, ಸಿದ್ದಪ್ಪ, ಯಲ್ಲಪ್ಪ ಬೋಚನಹಳ್ಳಿ, ಗಂಗಮ್ಮ, ಹುಸೇನ್ ಭಾಷಾ, ರಾಮಣ್ಣ, ಕಟ್ಟೆಪ್ಪ ಭಾಗ್ಯನಗರ, ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...