ಕೊಪ್ಪಳ | ವಿವಾಹೇತರ ಸಂಬಂಧಕ್ಕೆ ಅಡ್ಡಿ; ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆಗೈದ ಪತ್ನಿ

Date:

ಮದುವೆಯಾಗಿ ಎರಡು ಮಕ್ಕಳಿದ್ದರೂ ತನಗಿಂತ ಕಿರಿಯ ವಯಸ್ಸಿನ ಹಾಗೂ ವಿವಾಹಿತ ವ್ಯಕ್ತಿಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯೊಬ್ಬರು ತಮ್ಮ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಗೈದು ಸುಟ್ಟು ಹಾಕಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬೂದಗುಂಪ ನಿವಾಸಿ ದ್ಯಾಮಣ್ಣ ವಜ್ರಬಂಡಿ ಮೃತ ದುರ್ದೈವಿ.

ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ ಎಲ್ ಅರಸಿದ್ದಿ ಪತ್ರಿಕಾಗೋಷ್ಠಿ ಕರೆದು, ಕೊಲೆ ಮಾಡಿ ಗುರುತು ಸಿಗದ ರೀತಿಯಲ್ಲಿ ಮೃತದೇಹ ಸುಟ್ಟು ಹಾಕಿದ ಹಾಗೂ ಮೃತ ವ್ಯಕ್ತಿಯ ಹೆಸರು ವಿಳಾಸದ ಮಾಹಿತಿಯೇ ಇಲ್ಲದ ಕೊಲೆ ಪ್ರಕರಣವನ್ನು ಘಟನೆ ನಡೆದ ನಾಲ್ಕೇ ದಿನಗಳಲ್ಲಿ ಭೇದಿಸಿ ಕೊಲೆಯ ತನಿಖೆ ನಡೆಸಿ ಇಬ್ಬರನ್ನು ಬಂಧಿಸಲು ಯಶಸ್ವಿಯಾದ ಕುರಿತು ಮಾಹಿತಿ ವಿವರಿಸಿದರು.

ಕೊಪ್ಪಳ ತಾಲೂಕಿನ ಮುನಿರಾಬಾದ್ ವ್ಯಾಪ್ತಿಯ ಕೂಕನಹಳ್ಳಿ ಹೊರವಲಯದಲ್ಲಿ 30 ವರ್ಷದ ಆಸುಪಾಸಿನ ಯುವಕನನ್ನು ಮಾರಕಾಸ್ತ್ರಗಳಿಂದ ಕೊಂದು, ಶವ ಗುರುತು ಸಿಗದಲಾರದಂತೆ ಸುಟ್ಟು ಹಾಕಲಾಗಿತ್ತು. ಗಂಗಪ್ಪ ನಾಯಕ ಕೆಂಚನದೋಣಿ ತಾಂಡಾರವರು ನೀಡಿದ ದೂರಿನನ್ವಯ ಮುನಿರಾಬಾದ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಭೇದಿಸಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹೇಮಂತ್‌ಕುಮಾರ ಆರ್, ಉಪ-ವಿಭಾಗಾಧಿಕಾರಿ ಮುತ್ತಣ ಸರವಗೋಳ ಅವರನ್ನೊಳಗೊಂಡ ವಿಶೇಷ ತನಿಖಾ ರಚಿಸಲಾಗಿತ್ತು. ತಂಡವು ಮೃತ ವ್ಯಕ್ತಿಯ ವಿಳಾಸ, ಮೃತನ ವಾರಸುದಾರರನ್ನು ಮತ್ತು ಕೊಲೆ ಮಾಡಿದ ಆರೋಪಿತರನ್ನು ಪತ್ತೆ ಮಾಡುವ ಕುರಿತು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು ಮಾಹಿತಿ ಸಂಗ್ರಹಿಸಿತು. ಮಾಹಿತಿ ಆಧಾರದ ಮೇಲೆ ಶಂಕಿತ ವ್ಯಕ್ತಿಗಳಾದ ಕಾಮನೂರಿನ ಲಾರಿ ಡ್ರೈವರ್ ಸೋಮಪ್ಪ (35) ಹಾಗೂ ಕೊಲೆಯಾದ ವ್ಯಕ್ತಿಯ ಪತ್ನಿ ನೇತ್ರಾವತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹೋಂಡಾ ಯೂನಿಕಾರ್ನ್‌ ವಾಹನವನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಕೊಪ್ಪಳ | ವೈದಿಕ ಪರಂಪರೆ ಮೌಲ್ಯಗಳ ನೆಪದಲ್ಲಿ ಮೌಢ್ಯ ಹೇರುತ್ತಿದೆ: ರಾಮಚಂದ್ರಪ್ಪ

ಕೊಲೆ ಆರೋಪಿಗಳು ಮದುವೆ ಪೂರ್ವದಲ್ಲೇ ಸಂಬಂಧ ಹೊಂದಿದ್ದು, ಅದು ಮದವೆ ನಂತರವೂ ಮುಂದುವರೆದಿದೆ. ಇದರಿಂದ ಗಂಡ ಸಂಶಯ ಪಟ್ಟು ನಿತ್ಯ ಕಿರುಕುಳ ನಿಡುತ್ತಿದ್ದನೆಂದು ಪೊಲೀಸ್ ತನಿಖೆಯಲ್ಲಿ ಆರೋಪಿ ನೇತ್ರಾವತಿ ತಿಳಿಸಿದ್ದಾರೆ. ಆರೋಪಿಗಳು ವಿಚಾರಣೆ ವೇಳೆ ತಾವೇ ಕೊಲೆ ಮಾಡಿದ್ದೆಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...