ಕೊಪ್ಪಳ | ಬಿಜೆಪಿ, ಆರ್‌ಎಸ್‌ಎಸ್‌ ದೇಶವನ್ನೇ ಕೊಳ್ಳೆ ಹೊಡೆದು, ಬಂಡವಾಳಶಾಹಿಗಳಿಗೆ ಮಾರುತ್ತಿದ್ದಾರೆ: ನೂರ್ ಶ್ರೀಧರ್

Date:

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಪ್ರಬಲ ಶಕ್ತಿಗಳು ಜನರ ಬದುಕನ್ನು ಸರ್ವನಾಶ ಮಾಡಿ ಇಡೀ ದೇಶವನ್ನೇ ಕೊಳ್ಳೆ ಹೊಡೆದು ಬಂಡವಾಳಶಾಹಿಗಳಿಗೆ ದೇಶ ಮಾರುತ್ತಿದ್ದಾರೆ. ಇದನ್ನು ತಡೆಯುವುದಕ್ಕೆ ಗಟ್ಟಿ ಗೋಡೆಯಾಗಿ ನಿಲ್ಲಬೇಕು ಎಂದು ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡ ನೂರ್ ಶ್ರೀಧರ್ ಹೇಳಿದರು.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಕಲ್ಯಾಣಮಂಟಪದಲ್ಲಿ ಎದ್ದೇಳು ಕರ್ನಾಟಕದಿದಂದ ಆಯೋಜಿಸಲಾಗಿದ್ದ ಎರಡು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.

“ಭವಿಷ್ಯದ ಸಾಮರಸ್ಯ ಸದೃಢ ಭಾರತಕ್ಕಾಗಿ, ದೇಶದ ಸಂವಿಧಾನದ ರಕ್ಷಣೆಗಾಗಿ, ತಳಮಟ್ಟದಲ್ಲಿ ಶ್ರಮಿಸಲು ಸಿದ್ಧರಿರುವ ದೇಶಪ್ರೇಮಿ ಕಾರ್ಯಕರ್ತರಿಗೆ “ವಿಶೇಷ ಯೋಜನಾ ಕಾರ್ಯಗಾರ” ನಡೆಸಲಾಯಿತು. ನಾವು ಎಲ್ಲರೂ ಒಟ್ಟಾಗಿ ಪ್ರಬುದ್ಧ ಭಾರತ ಕಟ್ಟಬೇಕಾಗಿದೆ” ಎಂದು ಯುವಜನತೆಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ದಿನಮಾನಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಸೇಡಿನ ರಾಜಕಾರಣಕ್ಕೆ ಮುಂದಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಂದಿನ 2027ರ ಚುನಾವಣೆಯು ರಕ್ತಸಿಕ್ತ ರಾಜಕಾರಣಕ್ಕೆ ತಯಾರಿ ನಡೆಸಿದ್ದಾರೆ. ಈ ಸಂಚು ಜನಚಳವಳಿಗಳ ಮೇಲೆಯೂ ನಡೆಯುವ ಹುನ್ನಾರ. ಒಂದು ಮಾರಣಹೋಮ ಮಾಡಲು ಸಂಚು ನಡೆಸಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“ಈ ದೇಶವನ್ನು, ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ರಕ್ಷಿಸುವಂತೆ ಸಂದರ್ಭದಲ್ಲಿ ಹೊಸಯಾನ, ಹೊಸ ಪ್ರಯೋಗವನ್ನು ನಾಗರಿಕ ಸಮಾಜ ಮಾಡಬೇಕಾಗಿದೆ. ಇದಕ್ಕೆ ಪೂರಕವಾಗಿ ಬೃಹತ್ತಾದ ಯೋಜನೆಯನ್ನು ರೂಪಿಸಿಕೊಳ್ಳಬೇಕಾದ ಅಗತ್ಯ ಮತ್ತು ಅವಶ್ಯಕವಾಗಿದೆ” ಎಂದರು.

ಮತ್ತೋರ್ವ ವೆಂಕಟೇಶ ಪ್ರಸಾದ ಮಾತನಾಡಿ, “ಚುನಾವಣೆ ಒಂದು ನೀತಿ ಮಾತ್ರ. ಇವತ್ತು ಎರಡು ಉದ್ದೇಶ ಇಟ್ಟುಕೊಂಡು ಈ ಕಾರ್ಯಗಾರ ಆಯೋಜಿಸಲಾಗಿದೆ. ಒಂದು 2027ರ ಚುನಾವಣೆಗೆ ಒಂದು ನೀಲಿ ನಕ್ಷೆ ಕ್ರೋಢೀಕರಣ ಮಾಡುವುದು, ಇನ್ನೊಂದು ಈ ಕನಸುಗಳನ್ನು ಸಾಕಾರಗೊಳಿಸಲು ಯಾವ ರೀತಿ ಚಟುವಟಿಕೆಯಲ್ಲಿ ತೊಡಗಬೇಕು, ಚರ್ಚಿಸಲು ಸೇರಿದ್ದೆವೆ. ನಮ್ಮ ಒಳಗಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಬಲಿಷ್ಠವಾಗಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸಂಘಟನೆಗಳೊಂದಿಗೆ ವ್ಯವಸ್ಥಿತವಾಗಿ ರೂಢಿಸಿಕೊಳ್ಳಬೇಕಿದೆ ಎಂದರು.

ಕೆ ಎಲ್ ಅಶೋಕ ಮಾತನಾಡಿ, “ಮೂರು ವರ್ಷದ ಹಿಂದಿನ ರಾಜಕೀಯ ನೋಡಿದರೆ ಮೋದಿ-ಅದಾನಿ ಬೆಟಾಲಿಯನ್, ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲವೆಂಬ ಕಾಲಘಟ್ಟದಲ್ಲಿ ಇದ್ದಾಗ ʼಎದ್ದೆಳು ಕರ್ನಾಟಕʼ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ಸವಾಲಾಗಿ ಸ್ವೀಕರಿಸಿ ಗೆದ್ದೇಗೆಲ್ಲುವೆವೆಂದು ಧೃತಿಗೆಡದೆ ದೃಢವಾಗಿ ನಿಂತೆವು. ವೈಜ್ಞಾನಿಕವಾಗಿ ರೂಪುರೇಷೆ ಹಾಕಿಕೊಂಡು ಇವರ ಸೊಕ್ಕು ಅಡಗಿಸಲು ಮತ್ತು ಈ ಶಕ್ತಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾದೆವು” ಎಂದು ಹೇಳಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕೆಂಬ ಮೂಲ ಆಶಯ ಮತ್ತು ಅಜೆಂಡಾ ಈಡೇರಿಸಲು ಆಗಿಲ್ಲ. ಮುಂದೆಯೂ ಸಾವಿರ ವರ್ಷವಾದರೂ ಅವರ ಆಶಯ ಈಡೇರಲು ಬಿಡಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ವಕ್ಫ್‌ ತಿದ್ದುಪಡಿ, ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರ ಒತ್ತಾಯ

ಇಂದ್ರಮ್ಮ ಚಿಕ್ಕನಾಯಕನಹಳ್ಳಿ ಮಾತನಾಡಿ, “ಕಳೆದ ಚುನಾವಣೆಯಲ್ಲಿ ಎದ್ದೆಳು ಕರ್ನಾಟಕದ ಮೂಲಕ ನಾವು ಸರ್ವಾಧಿಕಾರಿ ನಾಯಕರನ್ನು ಮತ್ತು ಪಕ್ಷಗಳನ್ನು ದೂರವಿಡಲು ಒಂದು ಚಳವಳಿ ಹುಟ್ಟುಹಾಕಿ ಅದನ್ನು ಒಂದು ಮಟ್ಟಕ್ಕೆ ತಲುಪಲಾಗಿದೆ. ಸವಾಲುಗಳು ನಮ್ಮೆದುರಿಗೆ ಇದ್ದವು. ಆ ಸವಾಲುಗಳನ್ನು ಎದರಿಸಲು ಗಟ್ಟಿಯಾಗಿ ನಿಂತೆವು. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್ ಮತ್ತು ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಹೆಸರು ಬಳಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದರು.‌ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ” ಎಂದು ತಿಳಿಸಿದರು.

ಈ ವೇಳೆ ಮಲ್ಲಿಗೆ ಸಿರಿಮನೆ, ದುರುಗೇಶ್ ಬರಗೂರು, ಶೈಲಜಾ ಹಿರೇಮಠ, ಕುಮಾರ ಸಮತಳ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...