ಕೊಪ್ಪಳ | ಅಪರಾಧಿಗಳ ದಂಡಿಸುವಾಗ ಜಾತಿ, ಧರ್ಮ ಲೆಕ್ಕಿಸಲ್ಲ: ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ

Date:

ಅಪರಾಧಿಗಳನ್ನು ದಂಡಿಸುವಾಗ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು ಎಂದು ಕೊಪ್ಪಳ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಹೇಳಿದರು.

ನಗರ ಠಾಣೆ ಹಾಲ್‌ನಲ್ಲಿ ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು, “ಸಾಮಾಜಿಕ ಸುವ್ಯವಸ್ಥೆ ಕದಲುವಂತಹ ಕೃತ್ಯ ಎಸಗಿದವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತದೆ. ರಂಜಾನ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಎಲ್ಲ ಸಮುದಾಯದ ಜನರು ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು. ಯಾವುದೇ ಗಲಾಟೆಯಾಗದಂತೆ, ಜನರಿಗೆ ತೊಂದರೆಯಾಗದ ರೀತಿಯಲ್ಲಿ ಸಮಾಜದ ಮುಖಂಡರು ಎಚ್ಚರಿಕೆ ವಹಿಸಬೇಕು” ಎಂದು ಸಲಹೆ ನೀಡಿದರು.

ಪಿ.ಎಸ್.ಐ ಪ್ರಕಾಶ ಮಾಳಿ ಮಾತನಾಡಿ, “ರಂಜಾನ್ ಹಬ್ಬದ ಪ್ರಯುಕ್ತ ಮಸೀದಿ ಮತ್ತು ನಾನಾ ವೃತ್ತಗಳಲ್ಲಿ ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಯಾವುದೇ ರೀತಿಯ ಘರ್ಷಣೆಯಾಗದ ರೀತಿ ಎಚ್ಚರ ವಹಿಸಲಾಗುವುದು ಅದಕ್ಕೆ ಸೂಕ್ತ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

ಸಭೆಯಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...