ಕೊಪ್ಪಳ | ರತ್ನಾಗೆ ಆಶ್ರಯ ಕಲ್ಪಿಸಲು ಸಿಎಂ ಕಚೇರಿಯಿಂದ ಸೂಚನೆ; ನಿರಾಶ್ರಿತರ ಕೇಂದ್ರದಲ್ಲಿ ವ್ಯವಸ್ಥೆ

Date:

‌ಬಾಡಿಗೆ ಕಟ್ಟಲಾಗದೆ ಇರುವ ಮನೆಯನ್ನೂ ಬಿಟ್ಟು ಭಾಗ್ಯನಗರದ ತಾಯಮ್ಮ-ಸಾಯಿಬಾಬಾ ದೇವಸ್ಥಾನಗಳ ಆವರಣದಲ್ಲಿ ವಾಸವಿದ್ದ ರತ್ನಾ ದೊಡ್ಡಮನಿ ಎಂಬ ಅಸಹಾಯಕ ಮಹಿಳೆಗೆ ತ್ವರಿತವಾಗಿ ಸೂರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಥಳೀಯ ಆಡಳಿತ ಸಂಸ್ಥೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೊಪ್ಪಳದ ತೆಗ್ಗಿನಕೇರಿ ನಗರ ವಸತಿ ನಿರಾಶ್ರಿತರ ಕೇಂದ್ರದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ರತ್ನಾ ಪಿ ದೊಡ್ಡಮನಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ನಂತರದ ದಿನಗಳಲ್ಲಿ ಬಾಡಿಗೆ ಕಟ್ಟಲು ಸಾಧ್ಯವಾಗದೆ, ತಾವಿದ್ದ ಮನೆಯನ್ನು ಬಿಟ್ಟು, ತಾಲೂಕಿನ ಭಾಗ್ಯನಗರದ ತಾಯಮ್ಮ-ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಆಶ್ರಯ ಪಡೆದಿದ್ದರು. ಸಂತ್ರಸ್ತೆಗೆ ಕೂಡಲೇ ನಿವೇಶನ ಒದಗಿಸಿಕೊಡುವಂತೆ ಮಾಧ್ಯಮಗಳು ವರದಿ ಮಾಡಿ ಆಗ್ರಹಿಸಿದ್ದವು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು, ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಸೂಚನೆ ಅನ್ವಯ 2024ರ ಆಗಸ್ಟ್‌ 10ರಂದು ಆಶ್ರಯ ಸಮಿತಿ ಸಭೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಆಯ್ಕೆ ಪ್ರಕ್ರಿಯೆಯಲ್ಲಿ ರತ್ನಾ ಪಿ ದೊಡ್ಡಮನಿ ಅವರ ಹೆಸರನ್ನು ಸೇರಿಸಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ರಾಜೀವ ಗಾಂಧಿ ವಸತಿ ನಿಗಮದ ವೆಬ್‌ಸೈಟ್‌ನಲ್ಲಿ ಮಾಹಿತಿಗಳನ್ನು ಈಗಾಗಲೇ ನೋಂದಣಿ ಮಾಡಲಾಗಿದ್ದು, ಸರ್ವೇ ನಂ.32/1,2,3,4,5 ‍‍ಹಾಗೂ 41/11ರ ಕೆಜಿಪಿ ವಿನ್ಯಾಸ ನಕ್ಷೆಯನ್ನು ತಯಾರಿಸಲು ಭೂ ದಾಖಲೆಗಳ ಕಾರ್ಯಾಲಯಕ್ಕೆ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸ್ಥಾಪನೆ; ಏ.27ರಂದು ಉದ್ಘಾಟನೆ

“ಸದರಿ ಕೆಜಿಪಿ ವಿನ್ಯಾಸ ನಕ್ಷೆ ಅನುಮೋದನೆಗೊಂಡ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು”‌ ಎಂದು ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...