ಕೊಪ್ಪಳ | ನ್ಯಾಯಾಂಗ ನಿಂದನೆ; ಜಪ್ತಿಗೆ ಬಂದವರಿಗೆ ಕಾರು ಕೀ ಕೊಡದೆ ಸತಾಯಿಸಿದ ಡಿಸಿ ನಳೀನ್ ಅತುಲ್

Date:

ಕೊಪ್ಪಳ ಜಿಲ್ಲಾಧಿಕಾರಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದು, ನ್ಯಾಯಾಲಯದ ಆದೇಶದಂತೆ ಕಾರ್ ಜಪ್ತಿ ಮಾಡಲು ಸಿಬ್ಬಂದಿ ಬಂದಾಗ ಅವಕಾಶ ಕೊಡದ ಡಿಸಿ ನಳೀನ್ ಅತುಲ್ ಮತ್ತೆ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ.

ಗಂಗಾವತಿಯ ರಸ್ತೆ ಅಗಲಿಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ನಗರ ನ್ಯಾಯಾಲಯ, ಜಿಲ್ಲಾಧಿಕಾರಿ ಕಾರನ್ನು ಜಪ್ತಿ ಮಾಡಲು ಆದೇಶಿಸಿತ್ತು. ಕಾರು ಜಪ್ತಿ ಮಾಡಲು ಕೋರ್ಟ್ ಅಧಿಕಾರಿಗಳು ಹೋದಾಗ ಕಾರಿನ ಕೀ ಕೊಡದೇ ಸತಾಯಿಸಿದ್ದಾರೆ.

ಗಂಗಾವತಿ ನಗರಸಭೆ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಈ ವೇಳೆ ಗಂಗಾವತಿಯ ಕಲ್ಮಠ ಹಾಗೂ ವೀರುಪಾಕ್ಷಪ್ಪ ಅವರ ಭೂಮಿ ಒತ್ತುವರಿ ಮಾಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಮಾಲೀಕರಿಗೆ ಮಾಹಿತಿ ನೀಡದೆ ರಸ್ತೆ ಅಗಲೀಕರಣ ಮಾಡಿದ್ದು, ಜಮೀನು ಮಾಲೀಕರಿಗೆ ಪರಿಹಾರ ಕೊಡದ ಹಿನ್ನೆಲೆ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಏ.30ರಂದು ಬಸವ ಜಯಂತಿ : ವಚನಗಳ ಕಿರುಪುಸ್ತಕ ಹಂಚಲು ನಿರ್ಧಾರ

ಸುದೀರ್ಘ 6 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್‌ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಲು ಆದೇಶ ಮಾಡಿತ್ತು. ವಿಚಾರಣೆ ಮಾಡಿದ ಬಳಿಕ ಕಲ್ಮಠಕ್ಕೆ ಸುಮಾರು ₹7 ಲಕ್ಷ, ವಿರೂಪಾಕ್ಷಪ್ಪ ಅವರಿಗೆ ₹6 ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು. ಈವರೆಗೂ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಮಾಲೀಕರು ಮತ್ತೊಮ್ಮೆ ಕೋರ್ಟ್ ಮೊರೆ ಹೋದಾಗ ಗಂಗಾವತಿಯ ಹಿರಿಯ ಶ್ರೇಣಿಯ ನ್ಯಾಯಾಲಯ ಕಾರು ಜಪ್ತಿ ಮಾಡಲು ಆದೇಶ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...