ಕೊಪ್ಪಳ | ಸಾಲಬಾಧೆ : ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

Date:

ರೈತರೊಬ್ಬರು ಸಾಲ ಬಾಧೆಯಿಂದ ಜುಗುಪ್ಸೆಗೊಂಡು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರಟಗಿ ತಾಲ್ಲೂಕಿನ ಬೇವಿನಾಳ ಗ್ರಾಮದಲ್ಲಿ ನಡೆದಿದೆ.

ರೈತ ಮಹಾದೇವಪ್ಪ (55) ಮೃತರು. ಮಹಾದೇವಪ್ಪ ತಮ್ಮ ಪಿತ್ರಾರ್ಜಿತ 6.36 ಎಕರೆ ಭೂಮಿಯಲ್ಲಿ ಭತ್ತ ಬೆಳೆದಿದ್ದರು. ಈಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ಭತ್ತದ ಬೆಳೆ ನೆಲದ ಪಾಲಾಗಿ ತುಂಬಾ ನಷ್ಟವಾಗಿತ್ತು. ಕೃಷಿಗಾಗಿ ಕಾರಟಗಿ ಪಟ್ಟಣದ ಐಡಿಬಿಐ ಬ್ಯಾಂಕ್‌ನಲ್ಲಿ ₹6.25 ಲಕ್ಷ, ಖಾಸಗಿಯಾಗಿ ₹10 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.

ಜೂ.7ರಂದು ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. 8ರಂದು ಪಕ್ಕದ ನಿವಾಸಿಗಳು ಸಂಶಯಗೊಂಡು ನೋಡಿದಾಗ ವಿಷಯ ತಿಳಿದಿದೆ. ಅಂದೇ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವೈದ್ಯರ ಶಿಫಾರಸಿನಂತೆ ಗಂಗಾವತಿಯ ಖಾಸಗಿ ಆಸ್ಪತ್ರೆಗೆ ಬಳಿಕ ಹೈದರಾಬಾದ್‌ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ವಿಜಯನಗರ | ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಆಸ್ಪತ್ರೆಯ ಖರ್ಚು ನಿಭಾಯಿಸಲಾಗದೇ ಶನಿವಾರ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಸಂಬಂಧ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...