ಕೊಪ್ಪಳ | ಒಳಮೀಸಲಾತಿ ಜಾರಿ ವಿಚಾರ; ತಲೆ ಬೋಳಿಸಿಕೊಂಡು ವಿನೂತನ ಪ್ರತಿಭಟನೆ

Date:

ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ಪಾಲಿಸದ ಸರ್ಕಾರ ದಲಿತರ ಪಾಲಿಗೆ ಸ‌ತ್ತಿದೆ ಎಂದು‌ ಆಕ್ರೋಶ ವ್ಯಕ್ತಪಡಿಸಿದ ಮಾದಿಗ ದಂಡೋರ ಸಮಾಜ ರಾಜ್ಯಾಧ್ಯಕ್ಷ ಹುಸೇನ್‌ಸ್ವಾಮಿ ಡಿ ತಲೆಬೋಳಿಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ವಿಶಿಷ್ಟವಾಗಿ ಪ್ರತಿಭಟಿಸಿದರು.

ಮಾದಿಗ ದಂಡೋರ ಸಂಸ್ಥಾಪಕ ಬಿ ಹುಸೇನ್‌ಸ್ವಾಮಿ ಮಾತನಾಡಿ, “ಸದಾಶಿವ ಆಯೋಗವನ್ನು ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ರಾಜ್ಯ ಸರ್ಕಾರ ದಿಕ್ಕರಿಸುತ್ತಿದೆ. ಒಳಮೀಸಲಾತಿಗಾಗಿ 30 ವರ್ಷಗಳಿಂದಲೂ ಹೋರಾಟ ಮಾಡುತ್ತಿ‌ದ್ದೇವೆ. ಚುನಾವಣೆಯ ನೆಪ ಹೇಳುತ್ತ ಒಳಮೀಸಲಾತಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿದೆ. ಹಾಗಾಗಿ 70 ವರ್ಷವಾದರೂ ಕಾಂಗ್ರೆಸ್ ಸರ್ಕಾರ ನಮ್ಮ ದಲಿತರ ಪರವಾಗಿಲ್ಲ. ದಲಿತರ ಹೆಸರೇಳಿಕೊಂಡು ಈ ಸರ್ಕಾರ ಬದುಕುತ್ತಿದೆಯೇ ಹೊರತು ಶೋಷಣೆಗೊಳಗಾದವರ ಪರ ಇಲ್ಲ ದಲಿತರ ಪಾಲಿಗೆ ಸರ್ಕಾರ ಸ‌ತ್ತಿದೆ. ಅದಕ್ಕಾಗಿ ತಲೆಬೋಳಿಸಿಕೊಂಡು ಸರ್ಕಾರಕ್ಕೆ ಮುಡಿಕೊಟ್ಟೆರುವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಒಳಮೀಸಲಾತಿ ಹೋರಾಟ 1

ಹೇಮರಾಜ ಬೀರಾಪುರ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಮಾದಿಗ ಸಮುದಾಯಕ್ಕೆ ಸತತವಾಗಿ ವಂಚನೆ ಮಾಡುತ್ತ ಬಂದಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶವಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯಧೋರಣೆ ತಾಳಿದೆ. ಈ ಕೂಡಲೇ ಸಿ‌ಎಂ ಸಿದ್ಧರಾಮಯ್ಯನವರು ಒಳಮೀಸಲಾತಿ ಜಾರಿಗೊಳಿಸಬೇಕು ಇಲ್ಲದಿದ್ದರೆ ಬೆಂಗಳೂರು ಸಂವಿಧಾನ ಚಲೋ ಮೂಲಕ ಫ್ರೀಡಂ ಪಾರ್ಕ್‌ನಲ್ಲಿ ತೀವ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಒಳಮೀಸಲಾತಿ ಕೊಪ್ಪಳ

ಮಾದಿಗ ದಂಡೋರ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶರಣಮ್ಮ ಮಾತನಾಡಿ, ” ಬಹಳ ವರ್ಷದ ಒಳಮೀಸಲಾತಿ ಬೇಡಿಕೆಯನ್ನು ಸರ್ಕಾರ ಈಡೇರಿಸಲೇಬೇಕು. ದೇವಸ್ಥಾನದಲ್ಲಿ ಬಿಟ್ಟುಕೊಳ್ಳದ ನಮಗೆ, ಕುಡಿಯುವುದಕ್ಕೆ ನೀರು ಎತ್ತರಿಸಿ ಹಾಕುವ ನಮ್ಮ ಸಮುದಾಯಕ್ಕೆ ಒಳಮೀಸಲಾತಿ ಅತ್ಯವಶ್ಯ. ತಳಸಮುದಾಯದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸದಾಶಿವ ಆಯೋಗ ಜಾರಿಯಾಗಬೇಕು ಹಾಗೂ ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು” ಎಂದು ಒತ್ತಾಯಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿʼ; ಕ್ರಾಂತಿಕಾರಿ ಪಾದಯಾತ್ರೆ

ಜಿಲ್ಲಾಧಿಕಾರಿಗಳು ಕಚೇರಿಯಲ್ಲಿಯೇ ಇದ್ದು ಮಾದಿಗ ದಂಡೋರದ ಬೇಡಿಕೆಯ ಮನವಿ ಪತ್ರ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿಯವರನ್ನು ಕಳುಹಿಸಿರುವುದಕ್ಕೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹುಸೇನ್‌ಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ, “ಜಿಲ್ಲಾಧಿಕಾರಿಗಳ ಕೋರ್ಟ್ ನಡೆದಿದೆ. ಹಾಗಾಗಿ ಅವರ ಪರವಾಗಿ ನನ್ನನ್ನು ಕಳಿಸಿದ್ದಾರೆ ನಿಮ್ಮ ಮನವಿಯನ್ನು ಮೇಲಾಧಿಕಾರಿಗಳಿಗೆ ತುಲುಪಿಸು ರಾಜ್ಯ ಸರ್ಕಾರಕ್ಕೆ ಹಾಗೂ ರಾಜ್ಯಪಾಲರಿಗೆ ತಲುಪಿಸು‌ತ್ತೇವೆ” ಎಂದು ಹೇಳಿದ ಬಳಿಕ ಮನವಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...