ಖಾಸಗಿ(ಸುವರ್ಣ) ಟಿವಿ ಮಾದ್ಯಮದ ಮುಂದೆ ಬಹಿರಂಗವಾಗಿ ದಲಿತ ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ದಲಿತ ವಿಮೋಚನೆಯ ಮಾನವ ಹಕ್ಕು ಹೋರಾಟ ವೇದಿಕೆಯ ಕೊಪ್ಪಳ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ್ ಪೂಜಾರ ಎಸ್ಸಿ.ಎಸ್ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬಾನು ಮುಷ್ತಾಕ್ ಅವರು ಕಾರ್ಯಕ್ರಮ ಉದ್ಘಾಟಕರಾಗಿರುವುದನ್ನ ವಿರೋಧಿಸುವ ಭರದಲ್ಲಿ ವಿಜಯಪುರ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ ದಲಿತ ಮಹಿಳೆಯರೂ ಚಾಮುಂಡಿ ತಾಯಿಗೆ ಹೂವು ಮುಡಿಸುವಂತಿಲ್ಲ. ಅದು ಸನಾತನ ಧರ್ಮ ಅನುಸರಿಸುವವರಿಗೆ ಮಾತ್ರ ಆ ಹಕ್ಕು ಇರುವುದು ಎಂದು ಹೇಳಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಮಲ್ಲಿಕಾರ್ಜುನ ಪೂಜಾರ ಮಂಗಳವಾರ ನಗರದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫೇಸ್ಬುಕ್ನಲ್ಲಿ ದಲಿತರ ಅವಹೇಳನ ಮಾಡಿದ ವಿಡಿಯೋ ಸುವರ್ಣ ಟಿವಿ ಬೈಟ್ ಮುಖಾಂತರ ಪ್ರಸಾರವಾಗಿತ್ತು. ಸೆಪ್ಟೆಂಬರ 12ರಂದು ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಹಿಂದುಗಳ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಯನ್ನು ಮಾಡುತ್ತಿರುವವರ ವಿರುದ್ದ ಹಾಗೂ ಪ್ರಚಾರದ ಗೀಳಿನಿಂದ ಸನಾತನ ಧರ್ಮದವರು ಮಾತ್ರ ದಸರಾಹಬ್ಬದಲ್ಲಿ ನಾಡಿನ ಚಾಮುಂಡಿ ದೇವಿಗೆ ಹೂ ಮುಡಿಸಬೇಕು ಹೊರತು ಒಬ್ಬ ಸಾಮಾನ್ಯ ದಲಿತ ಮಹಿಳೆಗೆ ಕೂಡ ಅವಕಾಶ ಇಲ್ಲಾ ಎಂದು ಸಾರ್ವಜನಿಕವಾಗಿ ಹೇಳಿಕೆ ಕೊಟ್ಟು ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಹಿರಂಗವಾಗಿ ದಲಿತ ಹೆಣ್ಣು ಮಕಳಿಗೆ ಹಾಗೂ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಲ್ಲದೆ ತನ್ನ ವಿಕೃತ ಮನಸ್ಥಿತಿಯಯನ್ನು ಮೆರೆದಿದ್ದಾರೆ. ಹಿಂದೂಗಳ ಧರ್ಮದಲ್ಲಿಯೇ ಬರುವ ದಲಿತ ಹೆಣ್ಣುಮಕ್ಕಳನ್ನು ಅತ್ಯಂತ ಕೀಳುಮಟ್ಟದಲ್ಲಿ ಸಾರ್ವಜನಿಕವಾಗಿ ನಿಂದಿಸುವುದು, ಅವಮಾನ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.
ಇಂತಹ ಕೊಳಕು ಮನಸ್ಥಿತಿಯ ಮತ್ತು ದಿನಾಲೂ ರಾಜ್ಯದಲ್ಲಿ ಕೋಮು ಸಂಘರ್ಷದ ಹೇಳಿಕೆ, ಪ್ರಚೋದನಕಾರಿ ಹೇಳಿಕೆ ನೀಡಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ದಿನನಿತ್ಯ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಆದ್ದರದ ಎಸ್ಸಿ,ಎಸ್ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.





