ಕೊಪ್ಪಳ | ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ಕೊಡಲು ತಕರಾರು: ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ

Date:

ಕೊಪ್ಪಳ ತಾಲೂಕಿನ ಗೊಂಡಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಬಳ್ಳಿ-ಗೊಂಡಬಾಳ ಗ್ರಾಮಸ್ಥರು 200-300 ಮೀಟರ್ ಅಂತರದಲ್ಲಿರುವ ಗೊಂಡಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಬಳ್ಳಿ ಗ್ರಾಮದಲ್ಲಿ 64 ಎಕರೆ ಜಮೀನಿನಲ್ಲಿ ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವುದನ್ನು ವಿರೋಧಿಸಿ ಎರಡು ಗ್ರಾಮಸ್ಥರು ಬೈಕ್ ಜಾಥಾ ಮುಖಾಂತರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿದರು.

ಈಗಾಗಲೇ ಗ್ರಾಮ ಪಂಚಾಯಿತಿಗೆ ಎನ್‌ಒಸಿ ಪಡೆಯಲು ಕಂಪನಿ ಅರ್ಜಿ ಸಲ್ಲಿಸಿದೆ. ಆದರೆ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಗ್ರಾಮಸ್ಥರ ಪ್ರಬಲ ವಿರೋಧವಿದೆ. ಈ ಹಿಂದೆ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೊಪ್ಪಳ ಪರಿಸರ ಇಲಾಖೆಯು ನಡೆಸಿರುವ ಅಹಲವಾಲು ಸಭೆಯಲ್ಲಿಯೂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ, ತಕರಾರು ಅರ್ಜಿ ಸಲ್ಲಿಸಿದ್ದಾರೆ.

2021ರಿಂದ ಸಕ್ಕರೆ ಕಾರ್ಖಾನೆಗೆ ಮೂರು ಗ್ರಾಮಸ್ಥರ ಪ್ರಬಲವಾದ ವಿರೋಧವಿದ್ದು ಹಾಗೂ 500ಕ್ಕೂ ಹೆಚ್ಚು ತಕರಾರು ಮನವಿ ಸಲ್ಲಿಸಿದ್ದರೂ ಈಗ ಸಕ್ಕರೆ ಕಾರ್ಖಾನೆಗೆ ಎನ್ಒಸಿ ಕೊಡಲು ಠರಾವು ಪಾಸ್ ಮಾಡಿರುವುದನ್ನು ಗ್ರಾಮಸ್ಥರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅದ್ಯಕ್ಷರು ಗ್ರಾ.ಪಂಚಾಯಿತಿ ಸಬೆಯಲ್ಲಿ ಎನ್‌ಒಸಿ ಮಂಜೂರಿಗೆ ಠರಾವು ಪಾಸ್ ಮಾಡಿ ಕೊಡಲಾಗಿದೆ. ಆದರೆ, ಆ ಠರಾವು ಹಿಂಪಡೆಯುವ ಅಧಿಕಾರ ನಮಗಿಲ್ಲ, ಅದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಇದೆಯೆಂದು ಪಿಡಿಒ ಹಾರಿಕೆ ಉತ್ತರ ಕೊಟ್ಟಾಗ ಗ್ರಾಮಸ್ಥರು ತೀವ್ರವಾದ ವಿರೋಧ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಪಿಡಿಒ ಜಯಲಕ್ಷ್ಮಿ ಬಿ ಮಾತನಾಡಿ, “ನಾಳೆಯೇ ತುರ್ತು ಸಭೆ ಕರೆದು ಸದಸ್ಯರ ಜೊತೆ ಚರ್ಚಿಸಿ ಎನ್ಒಸಿ ಠರಾವು ಹಿಂಪಡೆಯಲಾಗುವುದು” ಎಂದು ಭರವಸೆ ಕೊಟ್ಟರೂ ಪ್ರತಿಭಟನಾ ನಿರತ ಗ್ರಾಮಸ್ಥರು ಪಟ್ಟು ಸಡಿಲಿಸಲಿಲ್ಲ.

ಪಿಎಸ್ಐ ವಿರೇಶ ಬಾಣಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಓಲೈಸಲು ಯತ್ನಿಸಿದರೂ ಜನರು ಪಟ್ಟು ಬಿಡದೆ ಅಧಿಕೃತವಾಗಿ ಲಿಖಿತರೂಪದಲ್ಲಿ ಭರವಸೆ ಕೊಟ್ಟರೆ ಮಾತ್ರ ನಮ್ಮ ಪ್ರತಿಭಟನೆ ಹಿಂಪಡೆಯುತ್ತೇವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...