ಕೊಪ್ಪಳ | ಹುಳು ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ; ಬಡವರ ಆರೋಗ್ಯದ ಜತೆಗೆ ಆಹಾರ ಇಲಾಖೆ ಚೆಲ್ಲಾಟ

Date:

ಹುಳುವಿನಿಂದ ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ ಮಾಡಿದ್ದು, ನ್ಯಾಯಬೆಲೆ ಅಂಗಡಿಯವರು ಹಾಗೂ ಸರ್ಕಾರ ಬಡವರ ಆರೋಗ್ಯದ ಜತೆಗೆ ಚಲ್ಲಾಟ ಆಡುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ಈಳಿಗನೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸುಮಾರು 650ಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಬಡವರಿದ್ದಾರೆ. ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಪಡಿತರ ಆಹಾರ ಧಾನ್ಯವನ್ನೇ ನಂಬಿದ ಕುಟುಂಬಗಳಿವೆ. ಆದರೆ ಇಲ್ಲಿನ ಆಹಾರ ಧಾನ್ಯ ವಿತರಕರು ತುಂಬಾ ಕಳಪೆ ಮಟ್ಟದ ಅಕ್ಕಿ, ಜೋಳ ವಿತರಿಸುತ್ತಿದ್ದು, ಅದರಲ್ಲಿ ಕಲ್ಲು, ಮಣ್ಣು, ಧೂಳು ಅಷ್ಟೇ ಅಲ್ಲದೆ ಹುಳುಗಳ ಮಯವಾಗಿರುವ ಪಡಿತರ, ಬಳಕೆಗೆ ಯೋಗ್ಯವಿಲ್ಲದಂತಾಗಿದೆ” ಎಂದು ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪಡಿತರ 1 1

ಸ್ಥಳೀಯ ಯುವಕರು, ಪಡಿತರ ವಿತರಕರನ್ನು ಪ್ರಶ್ನಿಸಿದರೂ ಕೂಡಾ ಯಾವುದೇ ರೀತಿಯ ಉತ್ತರ ನೀಡದೆ ನಮಗೂ ಇದಕ್ಕೂ ಸಂಬಂಧವೇ ಇಲ್ಲವೆನ್ನುವಂತೆ ವರ್ತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಡಿತರ ಫಲಾನುಭವಿಗಳು ವಿಷಕಾರಿ ಆಹಾರದ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾದರೆ ಅದಕ್ಕೆ ಆಹಾರ ಇಲಾಖೆಯೇ ನೇರಹೊಣೆಯಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ₹6 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದಲ್ಲಿ ಹುಳು ಪತ್ತೆ; ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ

ಬಳ್ಳಾರಿಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ(ಕೆಎಸ್‌ಡಬ್ಲ್ಯೂಸಿ) ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಸುಮಾರು 24,000 ಕ್ವಿಂಟಾಲ್‌ ಜೋಳ ಸೇವನೆಗೆ ಯೋಗ್ಯವಲ್ಲವೆಂದು ತಿಳಿದುಬಂದಿತ್ತು. ಹುಳು ಬಿದ್ದಿರುವ ಜೋಳವನ್ನು ಬಳ್ಳಾರಿ ಜಿಲ್ಲೆ ಮತ್ತು ಸುತ್ತಮುತ್ತಲಿನ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸಲಾಗುತ್ತಿದೆಯೆಂದು ಈಗಾಗಲೇ ಈ ದಿನ.ಕಾಮ್ ವರ‌ದಿ ಪ್ರಕಟಿಸಿತ್ತು. ಅಂತೆಯೇ ದನಕರುಗಳೂ ತಿನ್ನಲು ಯೋಗ್ಯವಿಲ್ಲದಂತಹ ಆಹಾರ ಧಾನ್ಯಗಳನ್ನು ಜನರಿಗೆ ನೀಡಿರುವುದು ಖಂಡಿನೀಯ.

ಈ ಸುದ್ದಿ ಓದಿದ್ದೀರಾ? ‘ನನ್ನ ಕಿಡ್ನಿ ಮಾರಿದ್ದೇನೆ, ಮಕ್ಕಳ ಕಿಡ್ನಿಯನ್ನೂ ಮಾರುವಂತೆ ಒತ್ತಾಯಿಸುತ್ತಿದ್ದಾರೆ’; ಮೈಕ್ರೋಫೈನಾನ್ಸ್‌ ಕಿರುಕುಳ ಬಿಚ್ಚಿಟ್ಟ ಮಹಿಳೆ

ಇಳಗನೂರು ಗ್ರಾಮದಲ್ಲಿ ದನಗಳು ತಿನ್ನುವುದಕ್ಕೂ ಯೋಗ್ಯವಲ್ಲದ ಕಳಪೆ ಪಡಿತರ ಜೋಳ, ಅಕ್ಕಿಯನ್ನು ಬಡವರಿಗೆ ವಿತರಿಸಿರುವುದರ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಗ್ರಾಮದ ಕಾನೂನು ವಿದ್ಯಾರ್ಥಿ ಯಮನೂರಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ವಿಡಿಯೋ ವೈರಲ್ ಆಗಿದ್ದರೂ ಕೂಡ ಸಂಬಂಧಿಸಿದ ಇಲಾಖೆಯ ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿಕೊಟ್ಟು ಸೂಕ್ತ ಕ್ರಮ ತೆಗೆದುಕೊಂಡಿರುವುದಿಲ್ಲ. ಇದರಿಂದ ಆಹಾರ ಇಲಾಖೆಯ ನಿರ್ಲಕ್ಷ್ಯ ಧೋರಣೆ ಎದ್ದು ತೋರುತ್ತಿದೆ. ತೆರಿಗೆದಾರರ ಹಣವನ್ನು ಬಳಸಿ ಜೋಳವನ್ನು ಖರೀದಿಸಲಾಗಿದ್ದು, ಅದನ್ನು ಈ ರೀತಿ ವ್ಯರ್ಥ ಮಾಡಬಾರದು. ಸರ್ಕಾರದ ಅನ್ನಭಾಗ್ಯ ಯೋಜನೆಯು ದುರಪಯೋಗವಾಗುತ್ತಿರುವುದು ಕಂಡುಬರುತ್ತಿದೆ” ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...