ಕೊಪ್ಪಳ | ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಚಾಲಕರ ದಿನಾಚರಣೆ

Date:

ನಿತ್ಯ ಸಾರ್ವಜನಿಕರಿಗೆ ಗಮ್ಯಸ್ಥಾನ ತಲುಪಿಸಲು ಶ್ರಮಿಸುವ ಚಾಲಕರ ಕಠಿಣ ಪರಿಶ್ರಮ ಮತ್ತು ಸೇವೆಯನ್ನು ಗೌರವಿಸಲು ಚಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಜನಪರ‌ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್‌ ಎಲ್ಲ ಚಾಲಕರಿಗೂ ಚಾಲಕರ ದಿನಾಚರಣೆಯ ಶುಭಾಶಯ ತಿಳಿಸಿದರು.

ಕೊಪ್ಪಳ ಜಿಲ್ಲಾ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸರಳವಾಗಿ ನಡೆದ ಚಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಶಯ ಕೋರಿ, “ರಸ್ತೆ ಸುರಕ್ಷೆ, ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಚಾಲಕರನ್ನು ಪ್ರೋತ್ಸಾಹಿಸಲು ಹಾಗೂ ಚಾಲಕರ ಸೇವೆಗೆ ಗೌರವ ಸಲ್ಲಿಸಲು ಈ ದಿನವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರಿಗೂ ಶೂಭಾಷಯಗಳು” ಎಂದರು.

ಹಗಲು ರಾತ್ರಿ ಎನ್ನದೆ ಸೇವೆ ಸಲ್ಲಿಸುವ ಚಾಲಕರಿಗೆ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಭಾಗವಹಿಸಿ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಾಲಕರ ದಿನಾಚರಣೆ

ನಿರಂತರ ಪ್ರಯತ್ನದ ಮೂಲಕ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಎರಡನೇ ವರ್ಷ ಚಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಶಾಲು ತಾಯಿ ಸಂಚಾರಿ ನಿಯಂತ್ರಕ ರವೀಂದ್ರ ನುಡಿದು ಚಾಲಕರಿಗೆ ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲನಚಿತ್ರೋತ್ಸವ ಮುಂದೂಡುವಂತೆ ನಾವು ದ್ರಾವಿಡ ಕನ್ನಡಿಗರು ಚಳವಳಿ ಮನವಿ

ಅಧ್ಯಕ್ಷತೆ ವಹಿಸಿದ್ದ ಡಿಪೋ ವ್ಯವಸ್ಥಾಪಕ ರಮೇಶ ಚಿಣಗಿ ಅವರು ಚಾಲಕರಿಗೆ ಶುಭಾಶಯಗಳನ್ನು ಹೇಳಿದರು.

ಕೇಂದ್ರೀಯ ಬಸ್ ನಿಲ್ದಾಣದ ಕಾರ್ಯಕ್ರಮದಲ್ಲಿ ಅಮೀನ್ ಸಾಬ್ ಕೋಳಿ, ಚೆನ್ನಮ್ಮ, ವಿಭಾಗೀಯ ನಿಯಂತ್ರಣಾಧಿಕಾರಿ ಎಂ ವೆಂಕಟೇಶ್, ವಿಭಾಗಿಯ ಸಂಚಾಲನ ಅಧಿಕಾರಿ ಆರ್ ಬಿ ಜಾಧವ್, ಚಾಲಕ ವಸಂತ ರಾಮದುರ್ಗ, ಅನಿಲ್ ಕುಮಾರ್, ಲೆಕ್ಕಾಧಿಕಾರಿ ಜಯಶ್ರೀ, ಕಾವ್ಯ, ಸಂಚಾರ ನಿರೀಕ್ಷಕ ಮಂಜುನಾಥ್ ಬಂಡಿ, ನಾಗರಾಜ ನಾಗರೆಡ್ಡಿ, ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಮುಖಂಡ ಎ ಜಿ ಮಣ್ಣೂರು ಮುಂತಾದ ಕೆಎಸ್‌ಆರ್‌ಟಿಸಿ ಚಾಲಕರು, ನಿರ್ವಾಹಕರು, ಕಾರ್ಮಿಕರು ಭಾಗವಹಿಸಿ ಚಾಲಕರಿಗೆ ಶುಭಾಶಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...