ಕೊಪ್ಪಳ | ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಬಳಿಕ ಚುನಾವಣೆ ಘೋಷಿಸಬೇಕು: ಕಾಶ್ಯಪ್ಪ ಛಲವಾದಿ

Date:

ಈ ಬಾರಿ ಜಿ.ಪಂ, ತಾ.ಪಂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇರುವುದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಅದ್ದೂರಿಯಾಗಿ ಡಾ ಬಿ ಆರ್‌ ಅಂಬೇಡ್ಕರ್ ಜಯಂತಿ ಆಚರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಏಪ್ರಿಲ್ 14ರಂದು ಅಂಬೇಡ್ಕರ್‌ ಜಯಂತಿ ಮುಗಿದ ಬಳಿಕ ಚುನಾವಣೆ ಘೋಷಣೆ ಮಾಡಿ ಎಂದು ಭಾರತೀಯ ಭೀಮಾ ಸೇನಾ ಜಿಲ್ಲಾಧ್ಯಕ್ಷ ಕಾಶ್ಯಪ್ಪ ಛಲವಾದಿ ಆಗ್ರಹಿಸಿದರು.

ಕೊಪ್ಪಳ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, “ಪ್ರತಿವರ್ಷ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಸಮಯದಲ್ಲೇ ಚುನಾವಣೆಗಳು ಘೋಷಣೆಯಾಗುತ್ತಿದ್ದು, ಚುನಾವಣೆ ನೀತಿ ಸಂಹಿತೆ ಇರುತ್ತಿದ್ದುದರಿಂದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ, ಇಲಾಖೆಗಳಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಿಸಲು ಸಾಧ್ಯಾವಾಗುತ್ತಿಲ್ಲ. ಹಾಗಾಗಿ ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಗಳು ಅದ್ದೂರಿಯಾಗಿ ಅಂಬೇಡ್ಕರ್‌ ಜಯಂತಿ ಆಚರಣೆ ಮಾಡಲು ಆಶಾಭಾವುಕರಾಗಿದ್ದರೂ ಸಹಿತ ಕಳೆದ ಮೂರು ವರ್ಷಗಳ ಹಿಂದೆ 2019-20ನೇ ವರ್ಷ ಮಹಾಮಾರಿ ಕೋವಿಡ್ 19 ರೋಗ ಬಂದು 2ವರ್ಷ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಖಂಡಿಸಿ ದಸಂಸದಿಂದ ರಸ್ತೆತಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2020ರ ನಂತರ ವಿಧಾನಸಭಾ ಚುನಾವಣೆಗಳು ಬಂದವು. ಇದೇ ರೀತಿ ಮುಂಬರುವ ಈ ಬಾರಿ ಜಿಪಂ, ತಾಪಂ, ಚುನಾವಣೆ ಬರುತ್ತವೆ. ಹಾಗಾಗಿ ಅಂಬೇಡ್ಕರ್‌ ಜಯಂತಿ ಮುಗಿಯುವವರೆಗೂ ಚುನಾವಣೆ ಘೋಷಣೆ ಮಾಡದಂತೆ ಸಿಎಂ ಸಿದ್ದರಾಮಯ್ಯನವರು ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ ಬಿ ಗೋನಾಳ, ಮುದಕಪ್ಪ, ಎಂ ಹೊಸಮನಿ, ಕಿರಣ ಬಂಗಾಳಿಗಿಡದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...