ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

Date:

‘ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ ಕವಿಗಳು ಕವನ ರಚಿಸಲು ಆದ್ಯತೆ ನೀಡಬೇಕು’ ಎಂದು ಕೊಪ್ಪಳದ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಅಭಿಪ್ರಾಯಪಟ್ಟರು.

ಕೊಪ್ಪಳ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿದ್ದ ದಸರಾ ಕಾವ್ಯ ಸಂಭ್ರಮ-2025ರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, “ದಾರ್ಶನಿಕರ ಆದರ್ಶ, ಕವನಗಳನ್ನು‌ ಉದಾಹರಿಸಿ ಜನರಿಗೆ ‌ಸಾಹಿತಿಗಳು‌ ಹೇಗೆ ದಾರಿದೀಪವಾಗಬಹುದು ಎಂಬುದನ್ನು ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಎಂ ವೆಂಕಟೇಶ್ವರುಲು ಮಾತನಾಡಿ, “ಕವಿ ಹಾಗೂ ವಿಜ್ಞಾನಿಗಳ ಆಲೋಚನೆ ಒಂದೇಯಾಗಿದ್ದು, ವಿಜ್ಞಾನಿಗೆ ಪ್ರಯೋಗಾಲಯ ಬೇಕಿದ್ದರೆ, ಕವಿಗೆ ಮನಸ್ಸೇ ಪ್ರಯೋಗಾಲಯ” ಎಂದು‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ವಿಶ್ವದ್ಯಾಲಯದ ಕುಲಪತಿ ಪ್ರೊ. ಬಿ ಕೆ ರವಿಯವರು ಮಾತನಾಡಿ, “ವಿಜ್ಞಾನ ತಂತ್ರಜ್ಞಾನದ ಭರಾಟೆಯ ಈ ದಿನಗಳಲ್ಲಿ, ಯುವ ಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗಿದೆ. ಇದು ಬದಲಾಗಬೇಕಿದೆ. ಪುಸ್ತಕ ಓದುವ ಹವ್ಯಾಸವನ್ನು ಬೆಳಸಬೇಕಿದೆ” ಎಂದರು.

ಕಲ್ಯಾಣವಾಣಿ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ‌ ಮಾತನಾಡಿದರು. ಈ ವೇಳೆ 50ಕ್ಕೂ ಅಧಿಕ‌ ಕವಿಗಳು‌ ಕವನ‌ ಓದಿದರು. ಈ ವೇಳೆ ವಿವಿಯ ವಿದ್ಯಾರ್ಥಿಗಳು ಆಕರ್ಷಕ ಸಂವಿಧಾನ ನೃತ್ಯ ಮಾಡಿ ಗಮನ ಸೆಳೆದರು.‌

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಮೇಶ, ರಾಯಚೂರು ಆದಿಕವಿ‌ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ, ವಿಜಾಪುರ ಅಕ್ಕಮಹಾದೇವಿ ವಿಶ್ವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷೆ ಡಾ ವಸುಂದರಾ ಭೂಪತಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಎಚ್ ಎಲ್ ಪುಷ್ಪಾ, ಸಾಹಿತಿ ಬಂಡಾಯ ಅಲ್ಲಮಪ್ರಭು ಬೆಟ್ಟದೂರು, ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ‌ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಸಂಗೀತ ಕಲಾವಿದ ರಾಮಚಂದ್ರ ಗೊಂಡಬಾಳ, ಬಾಷಾ ಸಂಗಡಿಗರು, ಕೊಪ್ಪಳ ವಿ ವಿ‌ ಕುಲಸಚಿವ ಕೆವಿಕೆ ಪ್ರಸಾದ, ಉಪನ್ಯಾಸಕಿ ಡಾ. ಪಾರ್ವತಮ್ಮ, ಪ್ರವೀಣ ಪಾಟೀಲ ಹಾಗೂ ವಿದ್ಯಾರ್ಥಿಗಳು ಇದ್ದರು.

ಈ ವೇಳೆ ವೀರೇಶ್‌ ಎಂಬುವವರು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...