ಕೊಪ್ಪಳ | ಬಲ್ಡೋಟಾ ವಿರೋಧಿ ಪ್ರತಿಭಟನೆ ಅಂಗವಾಗಿ ಪರಿಸರ ಜಾಗೃತಿ

Date:

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ಸೇರಿದಂತೆ ಹೊಸ ಉಕ್ಕಿನ ಕಾರ್ಖಾನೆ ಸ್ಥಾಪನೆ ಹಾಗೂ ಅಣುವಿದ್ಯುತ್ ಸ್ಥಾವರ ಯೋಜನೆಯ ಪ್ರಸ್ತಾಪವನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಹೋರಾಟದ ಭಾಗವಾಗಿ ಎರಡು ದಿನಗಳ ಪರಿಸರ ಜಾಗೃತಿ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ತಿಳಿಸಿದೆ.

ಈ ಕುರಿತು ಸಂಘಟನೆಯ ಜಿಲ್ಲಾ ಸಂಚಾಲಕ ಶರಣು ಪಾಟೀಲ್ ಮಾತನಾಡಿ, “ಹುತಾತ್ಮ ಭಗತ್ ಸಿಂಗ್, ರಾಜಗುರು, ಸುಖದೇವ್‌ರನ್ನು ಗಲ್ಲಿಗೇರಿಸಿದ ದಿನದಂದು ಶಿಬಿರ ಹಮ್ಮಿಕೊಳ್ಳಲಾಗಿದೆ. ಇದು ಜಿಲ್ಲೆಗೆ ಭೂತದಂತೆ ವಕ್ಕರಿಸಿರುತ್ತಿರುವ ಬೃಹತ್ ಕಾರ್ಖಾನೆಗಳನ್ನು ತೊಲಗಿಸುವ ಹೋರಾಟಕ್ಕೆ ಸ್ಫೂರ್ತಿಯಾಗಲಿದೆ. ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸುತ್ತೇವೆ” ಎಂದರು.

ಶರಣು ಗಡ್ಡಿ ಮಾತನಾಡಿ, “ಹೇಳುವವರು ಎಷ್ಟೇ ಮಹಾನ್ ವ್ಯಕ್ತಿಗಳಾಗಿರಲಿ ಅವರ ಮಾತುಗಳನ್ನು ವಿಮರ್ಶಿಸದೇ ಒಪ್ಪದಿರಿ ಎನ್ನುವ ಭಗತ್‌ ಸಿಂಗ್‌ ಮಾತಿನಂತೆ, ಯಾವುದೇ ವಿಷಯನ್ನು ವಿಚಾರ ಮಾಡದೇ ಒಪ್ಪಿಕೊಳ್ಳಬಾರದು. ಸತ್ಯ ಮತ್ತು ಸಾಮಾನ್ಯ ಜನರ ಹಿತಕ್ಕೆ ಧಕ್ಕೆ ಮಾಡುವವರ ವಿರುದ್ಧ ಹೋರಾಟ ಮಾಡಲು ಎಲ್ಲಾ ರೀತಿಯಿಂದಲೂ ಸನ್ನದ್ದರಾಗಬೇಕಾಗುತ್ತದೆ” ಎಂದರು.            

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈಚಾರಿಕವಾಗಿ, ಸಂಘಟನಾತ್ಮಕವಾಗಿ, ರಾಜಕೀಯವಾಗಿ ಎರಡು ದಿನದ ಶಿಬಿರದಲ್ಲಿ ಅನೇಕ ವಿಷಯ ತಜ್ಞರು, ಪರಿಸರವಾದಿಗಳು, ಚಿಂತಕರು, ಹೋರಾಟಗಾರರು, ಕಾರ್ಖಾನೆ, ಉದ್ಯೋಗ, ಅಭಿವೃದ್ಧಿ, ಕೃಷಿ, ಪರಿಸರ ಮಾಲಿನ್ಯ, ಜನಹೋರಾಟಗಳು, ಕಲ್ಯಾಣ ಕರ್ಣಾಟಕದ ಅಭಿವೃದ್ಧಿ ಕುರಿತು ಚರ್ಚಿಸಲಾಗುತ್ತದೆ. ಪ್ರತಿಯೊಬ್ಬರೂ ಈ ಶಿಬಿರದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

ಶಿಬಿರದಲ್ಲಿ ಹೋರಾಟಗಾರರಾದ ಎಸ್ ಆರ್ ಹಿರೇಮಠ್, ವಿ ಎನ್ ರಾಜಶೇಖರ್, ಬಸವರಾಜ್ ಸೂಳಿಭಾವಿ, ಕೃಷಿ ವಿಜ್ಞಾನಿ ರಾಜೇಂದ್ರ ಪೋತದಾರ್, ಖ್ಯಾತ ಲೇಖಕ ಶಿವಸುಂದರ್, ಕೊಪ್ಪಳ ಜಿಲ್ಲಾ ಬಚಾವೋ ಸಮಿತಿಯ ನಾಯಕ ಅಲ್ಲಮಪ್ರಭು ಬೆಟ್ಟದೂರು ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...