ಕೊಪ್ಪಳ | ಕೈಗಾರಿಕಾ ತ್ಯಾಜ್ಯದಿಂದ ಪರಿಸರ ಮಾಲಿನ್ಯ; ಕಲ್ಯಾಣಿ ಸ್ಟೀಲ್ ಕಂಪನಿ ವಿರುದ್ಧ ಆಕ್ರೋಶ

Date:

ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ ಕೈಗಾರಿಕೆಗಳಿಂದ ಈಗಾಗಲೇ ಪರಿಸರ ಮಾಲಿನ್ಯವಾಗುತ್ತಿದೆ. ಇದರ ಜತೆಗೆ ಕಲ್ಯಾಣಿ ಸ್ಟೀಲ್ ಕಂಪನಿಯು ಗ್ರಾಮದ ಪಕ್ಕದಲ್ಲಿ ಕರಿ ಬೂದಿಯನ್ನು ಟಿಪ್ಪರ್‌ಲ್ಲಿ ತಂದು ಗುಡ್ಡದ ರೀತಿಯಲ್ಲಿ ಡಂಪ್ ಮಾಡಿ ಪರಿಸರ ಮಾಲಿನ್ಯ ಮಾಡುತ್ತಿದೆ ಎಂದು ಗಿಣಿಗೇರಾ ನಾಗರಿಕ ಹೋರಾಟ ಸಮಿತಿ ಆರೋಪಿಸಿದೆ.

“ಗ್ರಾಮದಿಂದ ಕೇವಲ 30 ಮೀಟರ್ ಅಂತರದಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಈ ಪ್ರದೇಶದಿಂದ ಬರುವ ವಿಷಕಾರಿ ಕರಿಬೂದಿ ಊರನ್ನೆಲ್ಲಾ ಆವರಿಸಿಕೊಂಡು ಜನಸಾಮಾನ್ಯರ ಜೀವನ ದುಸ್ತರವಾಗಿದೆ. ಕಂಪನಿಯವರು ಸಾರ್ವಜನಿಕರಿಗೆ ಹಾಗೂ ಗ್ರಾಮಕ್ಕಾಗುವ ತೊಂದರೆ ಬಗ್ಗೆ ಕಿಂಚಿತ್ತೂ ಯೋಚನೆ ಮಾಡುತ್ತಿಲ್ಲ. ಅಡುಗೆ ಮನೆಯಿಂದ ಹಿಡಿದು ಊಟ ಮಾಡುವ ತಾಟಿನವರೆಗೂ ದೂಳು ಆವರಿಸುತ್ತಿದೆ. ಅಧಿಕಾರಿಗಳೂ ಇತ್ತ ಗಮನಹರಿಸುತ್ತಿಲ್ಲ” ಎಂದು ಸಮಿತಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 04 09 at 1.42.43 PM 1

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನದ ಪೂಜಾರ ಮಾತನಾಡಿ, “ಮಕ್ಕಳು, ವೃದ್ಧರು, ಜನಸಾಮಾನ್ಯರು ಅಸ್ತಮಾ, ಟಿವಿ, ಕ್ಯಾನ್ಸರ್, ಮುಂತಾದ ಮಾರಣಾಂತಿಕ ರೋಗಗಳಿಗೆ ತುತ್ತಾಗಿ ಆಸ್ಪತ್ರೆ ಸೇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಬಾರಿ ಮೌಖಿಕವಾಗಿ ಹಾಗೂ ಮನವಿಗಳ ಮುಖಾಂತರ ಹೇಳುತ್ತಿದ್ದರೂ ಕ್ರಮವಹಿಸಿಲ್ಲ. ಇದು ಮುಂದುವರೆದರೆ ಮುಂದಿನ ದಿನಗಳಲ್ಲಿ ಅಧಿಕಾರಿಗಳ ಹಾಗೂ ಕಾರ್ಖಾನೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಕಚೇರಿ ವೇಳೆ ಬದಲಾದರೂ ಬದಲಾಗದ ನೌಕರರು

ಮಂಗಳೇಶ ರಾಠೊಡ್, ಶರಣು ಗಡ್ಡಿ, ಹನಮಂತ ಕಟಿಗಿ, ಅನುರಾಧ ಕೂಡ್ಲಿಗಿ, ಮಹೇಶ ಮಸ್ತಿ, ಮರಿಯಪ್ಪ, ದುರ್ಗೇಶ, ಯಮನೂರು, ಮೆಹದಬೂಬ್ ಸಾಹೇಬ್ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...