ಕೊಪ್ಪಳ | ಕೌಟುಂಬಿಕ ನ್ಯಾಯಾಲದಲ್ಲಿ ವ್ಯಾಜ್ಯ; ಪತ್ನಿ, ಅತ್ತೆ-ಮಾವನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ

Date:

ಕೊಪ್ಪಳ ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲದಲ್ಲಿ ವೈವಾಹಿಕ ವಿಚ್ಛೇದನದ ಸಂಬಂಧಿತವಾಗಿ ವ್ಯಾಜ್ಯ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ನ್ಯಾಯಾಲಯದ ಮಧ್ಯಸ್ಥಿಕೆದಾರರ ಕೇಂದ್ರದಲ್ಲಿ ಕೌನ್ಸಿಲಿಂಗ್ ಮುನ್ನ ಈ ಘಟನೆ ನಡೆದಿದೆ.

ಕಾರಟಗಿ ತಾಲೂಕು ಸಿದ್ದಾಪುರದ ಚಿರಂಜೀವಿ ಭೋವಿ ಎಂಬಾತ ಕೊಪ್ಪಳ ತಾಲೂಕಿನ ಹಳೆ ಕುಮಟಾದ ತನ್ನ ಪತ್ನಿ ರೋಜಾ , ಅತ್ತೆ ಶಾಂತಮ್ಮ ಹಾಗೂ ಮಾವ ಶಂಕ್ರಪ್ಪ ಇವರಿಗೆ ಹಿಂದಿನಿಂದ ಬಂದು ಪೆಟ್ರೋಲ್ ಸುರುವಿ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

12 ವರ್ಷದ ಹಿಂದೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಕಾಲಕ್ರಮೇಣ ಸಂಬಂಧದಲ್ಲಿ ಬಿರುಕು ಉಂಟಾಗಿತ್ತು. ಪತ್ನಿಯ ಮೇಲೆ ಸಂಶಯ ಪಡುತ್ತಿದ್ದುದ್ದರಿಂದ ಹಲ್ಲೆ ಮಾಡಿರುವುದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದ ಕಾರಣ ಪತ್ನಿ ರೋಜಾ ವಿಚ್ಛೇದನಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ನ್ಯಾಯಾಲಯ ಮಧ್ಯಸ್ಥಿಕೆದಾರರ ಕೇಂದ್ರದಲ್ಲಿ ವಿಚಾರಣೆ ನಡೆದಿತ್ತು.

ಇದನ್ನೂ ಓದಿ: ಕೊಪ್ಪಳ | ಮಠಾಧೀಶರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ತೋಂಟದಾರ್ಯ ಶ್ರೀ

ಈ ಸಂದರ್ಭ ಒಳ ಬಂದಿದ್ದ ಚಿರಂಜೀವಿ ಬ್ಯಾಗಿನಲ್ಲಿ ಪೆಟ್ರೋಲ್ ಬಾಟಲಿ ಇಟ್ಟುಕೊಂಡು ಬಂದಿದ್ಧು, ಪತ್ನಿ, ಅತ್ತೆ ಮತ್ತು ಮಾವರಿಗೆ ಹಿಂದಿನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದಾಗ ಅಲ್ಲೇ ಇದ್ದ ವಕೀಲರು ರಕ್ಷಿಣೆ ಮಾಡಿದ್ದಾರೆ. ಆರೋಪಿ ಚಿರಂಜೀವಿಯನ್ನು ಕೊಪ್ಪಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...