ಕೊಪ್ಪಳ | ರಸಗೊಬ್ಬರ ಅಭಾವ: ಎರಡನೇ ದಿನವೂ ದಿಢೀರ್ ರಸ್ತೆಗಿಳಿದು ಪ್ರತಿಭಟಿಸಿದ ರೈತರು

Date:

ಕೊಪ್ಪಳ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ ಮತ್ತೊಂದು ಕಡೆ ಯೂರಿಯಾ ರಸಗೊಬ್ಬರದ ಕೊರತೆಯುಂಟಾಗಿದೆ. ಹೀಗಾಗಿ, ಕಂಗಾಲಾಗಿರುವ ರೈತರು, ಎರಡನೇ ದಿನವೂ ರಸ್ತೆಗಿಳಿದಿದ್ದು, ಗಂಜ್ ಸರ್ಕಲ್‌ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ.

ಜಿಲ್ಲೆಯಲ್ಲಿ 4-5 ದಿವಸದಿಂದ‌‌ ಸುರಿಯುತ್ತಿರುವ ಮಳೆಯಿಂದ ಹೆಚ್ಚು ತಂಪಾದ ವಾತಾವರಣ ಇರುವುದರಿಂದ ಬೆಳೆದು ನಿಂತ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅಗತ್ಯಕ್ಕೂ ಹೆಚ್ವಾಗಿ ಬೇಕಾಗಿದೆ. ಇಲ್ಲದಿದ್ದರೆ ತಂಪಾದ ಹವಾಮಾನ ಮಳೆ ವೈಪರೀತ್ಯದಿಂದ ಭೂಮಿ ತೇವಾಂಶ ಹೆಚ್ಚಾಗಿ ಬೆಳೆಯಲ್ಲಿ ಹಳದಿ ರೋಗ ಕಾಣಿಸಿಕೊಳ್ಳುತ್ತಿದೆ. ಇದಕ್ಕಾಗಿ ರೈತರಿಂದ ಗೊಬ್ಬರದ ಬೇಡಿಕೆಯೂ ಹೆಚ್ಚಾಗಿದೆ.

ಗೋದಾಮಿನಲ್ಲಿ‌ ಗೊಬ್ಬರ ಇದ್ದರೂ ರೈತರಿಗೆ ಕೊಡದೆ ಅದನ್ನು ಬೇರೆಡೆಗೆ ಸರಬರಾಜು ಮಾಡುತ್ತಿದ್ದಾರೆ. ರೈತರ ಕಣ್ಣಿಗೆ ಸೊಸೈಟಿ ಮಣ್ಣೆರಚುವ‌ ಕೆಲಸ ಮಾಡುತ್ತಿದೆ ಎಂದು ಆರೋಪಿ ಹೊಸಪೇಟೆ ಮುಖ್ಯ ರಸ್ತೆಯಲ್ಲಿ ಸಾರಿಗೆ ಬಸ್‌ ಸೇರಿದಂತೆ ವಾಹನಗಳನ್ನು ತಡೆದು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಢೀರ್ ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಮಧ್ಯ ಪ್ರವೇಶಿಸಿ ಮನವೊಲಿಸಲು ಪ್ರಯತ್ನಿಸಿದರು. ಆದರೂ ಕೂಡ ರೈತರು ಹಿಂದೆ ಸರಿಯಲಿಲ್ಲ. ಇದರಿಂದ ಕೋಪಗೊಂಡ ಟೌನ್ ಪೋಲೀಸ್ ಠಾಣೆ ಪಿಎಸ್ಐ, ರೈತರಿಗೆ ಅವಾಚ್ಯ ಶಬ್ದ ಬಳಸಿದರು. ಇದರಿಂದ ಇನ್ನಷ್ಟು ಆಕ್ರೋಶಗೊಂಡ ಪ್ರತಿಭಟನಾನಿರತ ರೈತರು, ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ ಘಟನೆಯೂ ನಡೆಯಿತು.

ಇದನ್ನು ಓದಿದ್ದೀರಾ? ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’

ಬಳಿಕ ಸ್ಥಳಕ್ಕೆ ಆಗಮಿಸಿದ ಕೊಪ್ಪಳ ಜಿಲ್ಲಾಧಿಕಾರಿಗಳಾದ ಸುರೇಶ್ ಇಟ್ನಾಳ್, ಪ್ರತಿಭಟನಾನಿರತ ರೈತರ ಮನವೊಲಿಸುವಲ್ಲಿ ಯಶಸ್ವಿಯಾದರು. ‘ಸೋಮವಾರದವರೆಗೆ ಕಾಯಿರಿ. ರಸಗೊಬ್ಬರ ಕೊರತೆಯಾಗಂತೆ ನೋಡಿಕೊಳ್ಳಲಾಗುವುದು’ ಎಂದಾಗ ತಮ್ಮ ಪ್ರತಿಭಟನೆ ಹಿಂಪಡೆದು, ಸ್ಥಳದಿಂದ ತೆರಳಿದರು.

WhatsApp Image 2025 08 09 at 3.38.53 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...