ಕೊಪ್ಪಳ | ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

Date:

ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಗುರುವಾರ ರಾತ್ರಿ ಘಟನೆ ನಡೆದಿತ್ತು. ಇಸ್ರೇಲ್‌ ಮೂಲದ ನಹಿಳೆ ಮತ್ತು ಹೋಮ್‌ ಸ್ಟೇ ಮಾಲಕಿ ಇಬ್ಬರು ತುಂಗಭದ್ರಾ ಎಡದಂಡೆ ನಾಲೆ ದಡದಲ್ಲಿ ಸಂಗೀತ ಕೇಳುತ್ತಾ ಕುಳಿದಿದ್ದರು. ಈ ವೇಳೆ, ಅಲ್ಲಿಗೆ ಬಂದ ಮೂವರು ಆರೋಪಿಗಳು ಮಹಿಳೆಯರ ಬಳಿ ಹಣ ಕೇಳಿದಿದ್ದಾರೆ. ಹಣ ಕೊಡಲು ಮಹಿಳೆಯರು ನಿರಾಕಿಸಿದ್ದು, ಕುಪಿತಗೊಂಡ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ, ಸ್ಥಳದಲ್ಲಿದ್ದ ಪ್ರವಾಸಿಗರ ಮೇಲೂ ಪುಂಡರು ಹಲ್ಲೆ ನಡೆಸಿದ್ದಾರೆ. ಘಟನೆ ವೇಳೆ, ಒರಿಸ್ಸಾ ಮೂಲದ ಪ್ರವಾಸಿ ಬೀಬಾಷಾ ನಾಲೆಗೆ ಬಿದ್ದಿದ್ದು, ಶನಿವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯರು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀರು ಇಬ್ಬರು ಆರೋಪಿಗಳನ್ನು ಬಂಂಧಿಸಿದ್ದಾರೆ. ಓರ್ವ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬಂಧಿತರನ್ನು ಗಂಗಾವತಿಯ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಎಂದು ಹೆಸರಿಸಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸ್‌ ತಂಡ ಶೋಧ ನಡೆಸುತ್ತಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಪ್ರತಿಯೊಬ್ಬರೂ ಸಮಾನತೆ ಮತ್ತು ಭದ್ರತೆಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...