ಕೊಪ್ಪಳ | ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸುವಲ್ಲಿ ಗಂಗಾವತಿ ನಗರ ಪೊಲೀಸರು ಯಶಸ್ವಿ

Date:

ಕಳವು ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗಂಗಾವತಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಕುಷ್ಟಗಿ ತಾಲೂಕಿನ ಹನುಮಂತ ಅಲಿಯಾಸ್ ಶೇಷ, ಅಲಿಯಾಸ್ ಜಯರಾಜ ಬಂಧಿತ ಆರೋಪಿ. ಈತ ಗಂಗಾವತಿ ನಗರದ ಮನೆಯೊಂದರಲ್ಲಿ 1999ರಂದು ನಡೆದಿದ್ದ ಕಳವು ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.

ಬಂಧಿತ ಆರೋಪಿ ಹನುಮಂತ ಅಲಿಯಾಸ್ ಶೇಷ ಎಂಬಾತ ಸುಮಾರು 25 ವರ್ಷಗಳಿಂದ ತಲೆಮರೆಸಿಕೊಂಡು ಮಂಗಳೂರು ಹಾಗೂ ಬೆಂಗಳೂರು ನಗರದಲ್ಲಿ ಹೆಸರು ಬದಲಾಯಿಸಿಕೊಂಡು ಜೀವನ ನಡೆಸುತ್ತಿದ್ದ. ಆರೋಪಿ, ಕಳೆದ ಮೂರು ವರ್ಷಗಳಿಂದ ಕುಷ್ಟಗಿ ತಾಲೂಕಿನ ನಿವಾಸಕ್ಕೆ ಆಗಾಗ ಬಂದು ಹೋಗುತ್ತಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಗಂಗಾವತಿ ನಗರಠಾಣೆ ಪಿಎಸ್‌ಐ ಪ್ರಕಾಶ್ ಮಾಳಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಭ್ರೂಣಹತ್ಯೆ ನಡೆಯುತ್ತಿದ್ದರೂ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್‌ಐ ಅರೋಪ

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಎಚ್ ಸಿ ಸುಭಾಷ್‌ ಚಂದ್ರಗೌಡ ಪಾಟೀಲ, ಗುಂಡಪ್ಪ, ಯಮನೂರಪ್ಪ ಕುಂಬಾರ, ಯಲ್ಲರೆಡ್ಡಿ, ಭೀಮಣ್ಣ ಮೇಟಿ ಇದ್ದರು. ಪೊಲೀಸರ ಕಾರ್ಯಕ್ಕೆ ಎಸ್‌ಪಿ ರಾಮ್ ಅರಸಿದ್ದಿ ಅವರು ಪ್ರಶಂಸೆ ಪತ್ರ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...