ಕೊಪ್ಪಳ | ಕಾಮಿನಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಉತ್ಪಾದನೆ ಕೆಲಸ ಸ್ಥಗಿತಕ್ಕೆ ಸೂಚನೆ

Date:

ಕೊಪ್ಪಳ ತಾಲೂಕಿನ ಗಿಣಿಗೇರಿ, ಅಲ್ಲಾನಗರ ಸಮೀಪದಲ್ಲಿರುವ ಕಾಮಿನಿ ಕಬ್ಬಿಣ ಮತ್ತು ಸ್ಟೀಲ್‌ ಕಾರ್ಖಾನೆಯಲ್ಲಿ(ಹೊಸಪೇಟೆ ಇನ್ಸಾತ್) ಅನಿಲ ಸೋರಿಕೆಯಿಂದ ನಡೆದ ಅವಘಡದ ಪ್ರದೇಶಕ್ಕೆ ಕಾರ್ಖಾನೆ ಮತ್ತು ಬಾಯ್ದರುಗಳ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ತಾತ್ಕಾಲಿಕವಾಗಿ ಉತ್ಪಾದನಾ ಕೆಲಸ ಸ್ಥಗಿತ ಮಾಡುವಂತೆ ಸೂಚಿಸಿದ್ದಾರೆ.

ಕಾರ್ಖಾನೆಯ ಒಂದನೇ ಘಟಕದಲ್ಲಿ ಜನವರಿ 16ರಿಂದ ನಿರ್ವಹಣೆ ಕಾರ್ಯ ನಡೆಯುತ್ತಿದ್ದು, ಕೊನೆಯ ಹಂತದ ಕೆಲಸ‌ ನಡೆಯುವಾಗಲೇ ಅವಘಡ ಸಂಭವಿಸಿದೆ. ಕಾರ್ಬನ್ ಮೊನಾಕ್ಸೈಡ್ ಅನಿಲ ಸೋರಿಕೆಯಿಂದ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕೆ ಎಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ ಒಂಬತ್ತು ಮಂದಿ ಕಾರ್ಮಿಕರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

“ಕಾರ್ಖಾನೆ ಮತ್ತು ಬಾಯ್ದರುಗಳ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ತನಿಖೆ ಮಾಡಿದ್ದಾರೆ. ಕಾರ್ಖಾನೆಯಲ್ಲಿನ ಸುರಕ್ಷತೆಯ ಕುರಿತು ಕ್ರಮ ತೆಗೆದುಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲು ಕಾರ್ಖಾನೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಸುರಕ್ಷತಾ ಆಡಿಟ್ ಮಾಡಿಸಿ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸಿದ್ದು, ಅಲ್ಲಿಯ ತನಕ ಕಾರ್ಖಾನೆಯಲ್ಲಿ ಎಲ್ಲ ಉತ್ಪಾದನಾ ಕೆಲಸ ಸ್ಥಗಿತಗೊಳಿಸಬೇಕು” ಎಂದು ನಿರ್ದೇಶನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಮೃತ ಕಾರ್ಮಿಕನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ದೊರಕಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಆರೋಗ್ಯ ಮತ್ತು ಕಾರ್ಖಾನೆಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದೆ’ ಎಂದು ಕಾರ್ಖಾನೆಗಳು, ಬಾಯ್ದರುಗಳು, ಸುರಕ್ಷತಾ ಮತ್ತು ಸ್ವಾಸ್ಥ್ಯ ಇಲಾಖೆಯ ಹುಬ್ಬಳ್ಳಿ ವಲಯದ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ ಎನ್ ರಾಠೋಡ್ ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಯಮನೂರ ಬೆಣಕಲ್, ವಿರೂಪಾಕ್ಷಿ ಮೋರನಾಳ, ಹಾಲಪ್ಪ ಈಳಿಗೇರ, ಕನರಾಯ ಬಗನಾಳ, ಜಾರ್ಖಂಡ್‌ನ ರೋಯಾ ಬಗುಂಗಾ, ಆಂಧ್ರದ ಶಿವಕುಮಾರ ಕುಲಶ, ಮಹಾರಾಷ್ಟ್ರದ ಕಮಲೇಶಸಿಂಗ್, ಗಿಣಿಗೇರಿಯ ಸುರೇಶ ಚೌವಾಣ್, ಹಗರಿಬೊಮ್ಮನಹಳ್ಳಿಯ ನಾಗರಾಜ, ಗಂಗಾವತಿ ತಾಲೂಕಿನ ದಾಸನಾಳದ ಮಹಾಂತೇಶ ಅಸ್ವಸ್ಥಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ : ಜಿಲ್ಲಾಧಿಕಾರಿ ಮನವಿ

ಕಾರ್ಖಾನೆ ನಿರ್ವಹಣೆ ಮಾಡುವವರ ನಿರ್ಲಕ್ಷ್ಯದಿಂದಲೇ ದುರ್ಘಟನೆ ಸಂಭವಿಸಿದೆಯೆಂದು ಮಂಗಳವಾರ ಮೃತಪಟ್ಟ ಮಾರುತಿ ಕೊರಗಲ್ ಅವರ ಸಹೋದರ ವೀರೇಶ್ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಕಂಪೆನಿಯ ಸೈಟ್ ವ್ಯವಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ, ಆಪರೇಷನ್ ಮತ್ತು ನಿರ್ವಹಣಾ ಮಾಲೀಕರು, ಕಾರ್ಖಾನೆ ಮಾಲೀಕರು ಹಾಗೂ ಹೊಸಪೇಟೆ ಇಸ್ಪಾತ್ ಕಂಪನಿಯ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಅವರ ಹೆಸರುಗಳನ್ನು ಉಲ್ಲೇಖಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...