ಕೊಪ್ಪಳ | ಪ್ಯಾಕೇಜ್ ಟೆಂಡರ್ ರದ್ದಾಗುವವರೆಗೂ ಅರೆಬೆತ್ತಲೆ ಧರಣಿ; ಪಟ್ಟುಹಿಡಿದ ಸಿವಿಲ್ ಗುತ್ತಿಗೆದಾರರ ಸಂಘ

Date:

ಪ್ಯಾಕೇಜ್ ಟೆಂಡರ್ ರದ್ದಾಗುವವರೆಗೂ ಅರೆಬೆತ್ತಲೆ ಧರಣಿ ನಡೆಸುತ್ತೇವೆಂದು ಕೊಪ್ಪಳ ಜಿಲ್ಲಾ ಪ.ಜಾತಿ/ಪ.ಪಂಗಡ ಸಿವಿಲ್ ಗುತ್ತಿಗೆದಾರರ ಸಂಘದ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.

ಕೊಪ್ಪಳ ಲೋಕೋಪಯೋಗಿ ಇಲಾಖೆಯ ಪ್ಯಾಕೇಜ್ ಟೆಂಡರ್ ವಿರೋಧಿಸಿ ಕಳೆದ ಒಂದು‌ ವಾರದಿಂದಲೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ಧರಣಿ ನಿರತರ ಅಹವಾಲಿಗೆ ಸ್ಪಂದನೆ ನೀಡದೆ, ಅವರ ಬೇಡಿಕೆಗೆ‌ ಅಧಿಕಾರಗಳ ಮನ ಕರಗದಿರುವದನ್ನು ಕಂಡ ಹೋರಾಟಗಾರರು ನಿನ್ನೆಯಿಂದ ಸತ್ಯಾಗ್ರಹದ ಪ್ರತಿರೋಧದ ಧರಣಿ ಸ್ವರೂಪ ಬದಲಾಗಿ ಅರೆಬೆತ್ತೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಸಿದ್ದು ಮಣ್ಣಿನವರು ಮಾತನಾಡಿ, “ನಮ್ಮ ಬೇಡಿಕೆಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಪಂದಿಸದೇ ಹೋದರೆ ಮುಂದಿನ ದಿನಗಳಲ್ಲಿ ನಾವು ನಮ್ಮ ಮನೆಯ ಕುಟುಂಬ ಸಮೇತರಾಗಿ ಉಪವಾಸ ಸತ್ಯಾಗ್ರಹ ಕೂರುತ್ತೇವೆ. ಅದಕ್ಕೂ ಅಧಿಕಾರಿಗಳು ಸ್ಪಂದಿಸದಿದ್ದರೇ ನಾವು ಲೋಕೋಪಯೋಗಿ ಕಚೇರಿ ಎದುರು ಕುಟುಂಬ ಸಹಿತ ವಿಷ ಸೇವಿಸುತ್ತೇವೆ” ಎಂದು ಎಚ್ವರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುತ್ತಿಗೆದಾರ ಪ್ರಕಾಶ ಹೊಳೆಪ್ಪನವರ ಮಾತನಾಡಿ, “ಟೆಂಡರ್ ಪ್ಯಾಕೇಜ್ ಸುಮಾರು ₹495 ಲಕ್ಷ, ₹305 ಲಕ್ಷ, ₹360 ಲಕ್ಷ, ಮೂರರಿಂದ ಆರು ಕೋಟಿಯವರೆಗೂ ಟೆಂಡರ್ ಹೊರಡಿಸಿದರೆ ಈ ಬಡ, ದಲಿತ ಮತ್ತು ಹಿಂದುಳಿದ ಗುತ್ತಿಗೆದಾರರು ಯಾವ ರೀತಿ ಕಾರ್ಯನಿರ್ವಹಿಸಬೇಕು?. ಇದರ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು‌ಕೇಳಿದರೆ ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಸಾದ್ಯವಿಲ್ಲ, ನೀವು ಏನು ಮಾಡಿಕೊಳ್ಳತ್ತೀರೋ ಮಾಡಿಕೊಳ್ಳಿ ಹೋಗಿ’ ಎಂದು ತಾತ್ಸಾರ ಮಾಡಿದ್ದಲ್ಲದೆ ಉಢಾಪೆಯ ಉತ್ತರ ಕೊಡುತ್ತಾರೆ. ಅಧಿಕಾರಿಗಳು ಸಂವಿಧಾನ ಕಾನೂನು ಚೌಕಟ್ಟಿನಲ್ಲಿ ಅಧಿಕಾರ ನಿರ್ವಹಿಸುವರೋ ಅಥವಾ ರಾಜಾಧಿಕಾರದ ಆಡಳಿತದಲ್ಲಿ ಅಧಿಕಾರ ನಡೆಸುತ್ತಿರುವರೋ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ| ಪ್ರತಿಭಟನಾನಿರತ ರೈತರನ್ನು ರಾತ್ರೋರಾತ್ರಿ ವಶಕ್ಕೆ ಪಡೆದ ಪೊಲೀಸರು

“ಯಾವ ಹೋರಾಟದ ಮುಖಾಂತರ ಎಚ್ಚರಿಸಲು ಹೋದರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ನಮ್ಮ ಕರೆಗೆ ಕಿವಿಗೊಡುತ್ತಿಲ್ಲ. ಹೀಗೇ ಮುಂದುವರೆದರೆ ನಮ್ಮ ಹೋರಾಟದ ಹೆಜ್ಜೆ ತೀವ್ರವಾಗುತ್ತದೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...