ಕೊಪ್ಪಳ | 62 ದಿನಗಳ ಕಾಲ 1,550 ಕಿ.ಮೀ. ಏಕಾಂಗಿ ಪಾದಯಾತ್ರೆ ನಡೆಸಿದ ಹನುಮೇಶ

Date:

ಜಗತ್ತಿನಲ್ಲಿ ಸಜ್ಜನರಿಗೆ ಒಳ್ಳೆಯದಾಗಲಿ, ದುರ್ಜನರು ಮನಃಪರಿವರ್ತನೆಗೊಂಡು ಒಳ್ಳೆಯ ಮಾರ್ಗದಲ್ಲಿ ನಡೆಯಲಿ ಎಂಬ ಉದ್ದೇಶದೊಂದಿಗೆ ಕೊಪ್ಪಳದ ಯುವಕನೊಬ್ಬ 1,550 ಕಿ.ಮೀ ಏಕಾಂಗಿ ಪಾದಯಾತ್ರೆ ನಡೆಸಿದ್ದಾರೆ. ಕೊಪ್ಪಳದ ಚನ್ನಬಸವನಗರದ ನಿವಾಸಿ ಹನುಮೇಶ ಕುಲಕರ್ಣಿ ಅವರು ಕೊಪ್ಪಳದಿಂದ ವಾರಣಾಸಿವರೆಗೆ ಪಾದಯಾತ್ರೆ ಮಾಡಿದ್ದಾರೆ.

62 ದಿನಗಳ ಕಾಲ ಪಾದಯಾತ್ರೆ ನಡೆಸಿರುವ ಹುನಮೇಶ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ಮರಳಿ ಬಂದಿದ್ದಾರೆ. ಅವರನ್ನು ಚನ್ನಬಸವನಗರದ ನಿವಾಸಿಗಳು ಮತ್ತು ರಾಘವೇಂದ್ರ ಮಠದ ಅರ್ಚಕರು ಸ್ವಾಗತಿಸಿ, ಸನ್ಮಾನಿಸಿದ್ದಾರೆ.

ತನ್ನ ಪಾದಯಾತ್ರೆಯ ಕುರಿತು ಮಾತನಾಡಿದ ಹನುಮೇಶ, “ಸೆಪ್ಟಂಬರ್‌ 7ರಂದು ಕೊಪ್ಪಳದಿಂದ ಪಾದಯಾತ್ರೆ ಆರಂಭಿಸಿದೆ. ನವೆಂಬರ್ 7ರಂದು ಕಾಶಿಗೆ ತಲುಪಿದೆ. 62 ದಿನಗಳ ಕಾಲ ಪಾದಯಾತ್ರೆ ನಡೆಸಿದ್ದೇನೆ. ಪ್ರತಿದಿನ 25 ರಿಂದ 30 ಕಿ.ಮೀ. ನಡೆದಿದ್ದೇನೆ. ರಾತ್ರಿ ವೇಳೆ, ದೇವಾಲಯಗಳಲ್ಲಿ ಉಳಿದುಕೊಳ್ಳುತ್ತಿದ್ದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನನ್ನ ವೈಯ್ಯಕ್ತಿಕ ಹರಕೆಗಳಿಗಾಗಿ ಪಾದಯಾತ್ರೆ ನಡೆಸಿಲ್ಲ. ಜಗತ್ತಿನ ಸಜ್ಜನರಿಗೆ ಒಳ್ಳೆಯದಾಗಬೇಕು. ದುರ್ಜನರು ಮನಃಪರಿವರ್ತನೆಗೊಂಡು ಒಳ್ಳೆಯ ಮಾರ್ಗದಲ್ಲಿ ನಡೆಯಬೇಕು ಎಂಬ ಉದ್ದೇಶದಿಂದ ಈ ಯಾತ್ರೆ ನಡೆಸಿದ್ದೇನೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...